ಬ್ರೇಕಿಂಗ್ ನ್ಯೂಸ್
25-11-22 06:53 pm Bangalore Correspondent ಕರ್ನಾಟಕ
ಬೆಂಗಳೂರು, ನ.25 : ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಎನ್‌ಐಎ ತನಿಖೆಗೆ ಶಿಫಾರಸ್ಸು ಮಾಡಿತ್ತು. ಇದರ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ ಬಾಂಬ್ ಸ್ಫೋಟ ಪ್ರಕರಣವನ್ನು ಎನ್‌ಐಎ ತನಿಖೆಗೆ ವರ್ಗಾಯಿಸಿ ಆದೇಶಿಸಿದೆ.
ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದ್ದು, ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿದೆ. ಎರಡು ದಿನಗಳ ಹಿಂದೆ ಮಂಗಳೂರಿಗೆ ತೆರಳಿದ್ದ ಡಿಜಿಪಿ ಪ್ರವೀಣ್ ಸೂದ್, ನಾವು ಯಾವುದೇ ಕಡೆ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಾದರೂ ಅದನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳಿಸಿಕೊಡುತ್ತೇವೆ. ಅಗತ್ಯ ಎನಿಸಿದರೆ ಕೇಂದ್ರವೇ ಎನ್‌ಐಎ ತನಿಖೆ ನಡೆಸುತ್ತದೆ. ಮಂಗಳೂರಿನ ಪ್ರಕರಣದಲ್ಲಿ ಮೊದಲ ದಿನದಿಂದಲೇ ಎನ್ಐಎ ಮತ್ತು ಇಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದಿದ್ದರು.
ಮರುದಿನ ಗುರುವಾರ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, ನಾವು ಎನ್ಐಎ ತನಿಖೆಗೆ ಶಿಫಾರಸು ಮಾಡಿದ್ದೇವೆ ಎಂದು ಹೇಳಿದ್ದರು. ಇದೀಗ ಕೇಂದ್ರ ಸರಕಾರವೇ ಬಾಂಬ್ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ಆದೇಶ ಮಾಡಿದೆ. ಸ್ಥಳೀಯ ಪೊಲೀಸರು ಸಂಗ್ರಹಿಸಿದ ಸಾಕ್ಷ್ಯಗಳು, ತನಿಖಾ ಮಾಹಿತಿಗಳನ್ನು ಎನ್ಐಎ ಅಧಿಕಾರಿಗಳಿಗೆ ವಹಿಸಬೇಕಾಗುತ್ತದೆ. ಅಲ್ಲದೆ, ಘಟನೆ ಬಗ್ಗೆ ಎನ್ಐಎ ತನಿಖಾ ದಳ ಪ್ರತ್ಯೇಕವಾಗಿ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸುತ್ತದೆ.
The Karnataka government has handed over the investigation of Mangaluru cooker blast case to the National Investigation Agency (NIA). Karnataka Home Minister Araga Jnanendra on Thursday said that the state government has taken a decision to hand over the case to NIA and passed the order in this regard.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am