ಕೋರ್ಟಿನಲ್ಲಿ ಅನುಚಿತ ವರ್ತನೆ, ಗದ್ದಲ ; ವಕೀಲ ಕೆ.ಎನ್ ಜಗದೀಶ್ ಮೇಲಿನ ಕ್ರಿಮಿನಲ್ ಪ್ರಕರಣ ಕೈಬಿಟ್ಟ ಹೈಕೋರ್ಟ್, 2 ಲಕ್ಷ ದಂಡ 

30-11-22 11:38 am       Bangalore Correspondent   ಕರ್ನಾಟಕ

ಸಿಟಿ ಸಿವಿಲ್‌ ಕೋರ್ಟ್‌ನಲ್ಲಿ ಅನುಚಿತ ವರ್ತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ವಕೀಲ ಕೆ.ಎನ್‌. ಜಗದೀಶ್‌ ಕುಮಾರ್‌ ಅವರ ವಿರುದ್ಧ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಟ್ಟಿರುವ ಹೈಕೋರ್ಟ್‌, ವಕೀಲರಿಗೆ 2 ಲಕ್ಷ ರೂ. ದಂಡ ವಿಧಿಸಿದೆ. 

ಬೆಂಗಳೂರು, ನ.30: ಸಿಟಿ ಸಿವಿಲ್‌ ಕೋರ್ಟ್‌ನಲ್ಲಿ ಅನುಚಿತ ವರ್ತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ವಕೀಲ ಕೆ.ಎನ್‌. ಜಗದೀಶ್‌ ಕುಮಾರ್‌ ಅವರ ವಿರುದ್ಧ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಟ್ಟಿರುವ ಹೈಕೋರ್ಟ್‌, ವಕೀಲರಿಗೆ 2 ಲಕ್ಷ ರೂ. ದಂಡ ವಿಧಿಸಿದೆ. 

ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಪ್ರಕರಣ ಸಂಬಂಧಿಸಿ ವಕೀಲ ಕೆ.ಎನ್‌. ಜಗದೀಶ್‌ ಬೇಷರತ್‌ ಕ್ಷಮೆಯಾಚಿಸಿ ಪ್ರಮಾಣಪತ್ರ ಸಲ್ಲಿಸಿದ್ದಲ್ಲದೆ, ನ್ಯಾಯಾಲಯದ ವಿಚಾರದಲ್ಲಿ ಭವಿಷ್ಯದಲ್ಲಿ ಈ ರೀತಿ ನಡೆದುಕೊಳ್ಳುವುದಿಲ್ಲ ಎಂದು ಕ್ಷಮಾಪಣಾ ಪತ್ರ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ಅವರ ವಿರುದ್ಧದ ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಟ್ಟಿದೆ. 

File:High Court of Karnataka, Bangalore MMK.jpg - Wikipedia

ಆದರೆ, ನ್ಯಾಯಾಲದಲ್ಲಿ ಅನುಚಿತವಾಗಿ ನಡೆದುಕೊಂಡ ಹಿನ್ನೆಲೆಯಲ್ಲಿ ಅವರಿಗೆ 2 ಲಕ್ಷ ರೂ. ದಂಡ ವಿಧಿಸಿದ ನ್ಯಾಯಪೀಠ, 1 ಲಕ್ಷ ರೂ. ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ, 50 ಸಾವಿರ ರೂ. ವಕೀಲರ ಸಂಘದ ಗ್ರಂಥಾಲಯ ಅಭಿವೃದ್ಧಿಗೆ ಮತ್ತು 50 ಸಾವಿರ ರೂ. ಹೈಕೋರ್ಟ್‌ ಗುಮಾಸ್ತರ ಕ್ಷೇಮಾಭಿವೃದ್ಧಿ ಸಂಘಕ್ಕೆ ಮುಂದಿನ 2 ವಾರಗಳಲ್ಲಿ ಪಾವತಿಸಬೇಕು. ಹೈಕೋರ್ಟ್‌ ಆದೇಶ ಪಾಲಿಸಿದ ಬಗ್ಗೆ ಡಿ.16ರಂದು ನ್ಯಾಯಾಲಯಕ್ಕೆ ವಿವರಿಸಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.

Bengaluru/District Court in India | Official Website of District Court of  India

ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ನಗರದ ಸಿಟಿ ಸಿವಿಲ್‌ ನ್ಯಾಯಾಲಯಕ್ಕೆ ಆಗಮಿಸಿದ್ದ ವಕೀಲ ಜಗದೀಶ್‌ ನ್ಯಾಯಾಲಯದಲ್ಲಿ ವಿಚಾರಣೆಗೆ ಅಡ್ಡಿ ಪಡಿಸಿದ್ದರು. ಅಲ್ಲದೆ, ನ್ಯಾಯಾಲಯದಲ್ಲಿ ಟೇಬಲ್‌ ಮೇಲೆ ಗುದ್ದಿ ಗದ್ದಲವುಂಟು ಮಾಡಿದ್ದರು. ನ್ಯಾಯಾಧೀಶರು ಹಲವು ಬಾರಿ ಸೂಚನೆ ನೀಡಿದರೂ ಗಲಾಟೆ ಮುಂದುವರಿಸಿದ್ದರು. 

ಈ ಕುರಿತಂತೆ ಜಗದೀಶ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಿಟಿ ಸಿವಿಲ್‌ ನ್ಯಾಯಾಲಯದ ರಿಜಿಸ್ಟ್ರಾರ್‌ ಅವರು ಹೈಕೋರ್ಟ್‌ ಗೆ ಪತ್ರದ ಮೂಲಕ ಮನವಿ ಮಾಡಿದ್ದರು. ಈ ಬಗ್ಗೆ ಹೈಕೋರ್ಟ್‌ ಸ್ವಯಂಪ್ರೇರಿತ ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿತ್ತು. ಇದೀಗ ದಂಡ ವಿಧಿಸಿ ಪ್ರಕರಣವನ್ನು ಕೈಬಿಟ್ಟಿದೆ.

The High Court of Karnataka on Tuesday dropped criminal contempt proceedings against an advocate after he tendered an unconditional apology and agreed to pay a fine of ₹ 2 lakh. The HC had initiated the suo moto (taken on its own) proceedings following a ruckus created by K N Jagadeesh at the City Civil and Sessions Court complex.