ಬ್ರೇಕಿಂಗ್ ನ್ಯೂಸ್
30-11-22 05:10 pm Bangalore Correspondent ಕರ್ನಾಟಕ
ಬೆಂಗಳೂರು, ನ.30 : ಸರ್ಕಾರದಿಂದಲೇ ಮುಸ್ಲಿಂ ಕಾಲೇಜು ಸ್ಥಾಪನೆ ಪ್ರಸ್ತಾಪದ ಸುದ್ದಿ ಹಬ್ಬಿದ ಬೆನ್ನಲ್ಲೇ 'ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿಲ್ಲ' ಎಂದು ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಉಡುಪಿಯಲ್ಲಿ ಹಿಜಬ್ ವಿವಾದ ಉದ್ಭವಿಸಿದ ನಂತರ ತರಗತಿಗಳಲ್ಲಿ ಹಿಜಬ್ ಧರಿಸದಂತೆ ಸರ್ಕಾರ ಆದೇಶ ಹೊರಡಿಸಿತ್ತು. ಇದರಿಂದ ಬಹುತೇಕ ಮುಸ್ಲಿಂ ಸಂಘಟನೆಗಳು, ಸರ್ಕಾರದ ವಿರುದ್ಧ ತಿರುಗಿಬಿದ್ದು ಈ ನಿಯಮದಿಂದ ಹೆಣ್ಣು ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದ್ದರು. ಹೀಗಾಗಿ ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಸರ್ಕಾರವೇ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗಾಗಿಯೇ ಸರ್ಕಾರ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ಮುಂದಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಮುಂದಿನ ತಿಂಗಳು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂಬ ವದಂತಿ ಹರಡಿದ್ದು ಈ ಸುದ್ದಿಯನ್ನು ವಕ್ಫ್ ಇಲಾಖೆಯ ಸದಸ್ಯರು ಸತ್ಯವೆಂದು ಹೇಳುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರದಿಂದ ಈ ಬಗ್ಗೆ ಯಾವುದೇ ಅಧಿಕೃತ ಪ್ರಸ್ತಾವನೆ, ಆದೇಶ ಬಂದಿಲ್ಲ.
ಮೂರು ತಿಂಗಳ ಹಿಂದೆಯೇ ವಕ್ಫ್ ಬೋರ್ಡ್‌ನಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಒಂದೂವರೆ ತಿಂಗಳ ಹಿಂದೆ ಸರ್ಕಾರದಿಂದ ಅನುಮೋದನೆ ದೊರೆತು ಪ್ರತಿ ಕಾಲೇಜಿಗೆ 2.50 ಕೋಟಿ ರೂ. ಅನುದಾನವನ್ನೂ ಮೀಸಲಿಟ್ಟಿದೆ. ರಾಜ್ಯ ಸರ್ಕಾರ ವಕ್ಫ್ ಬೋರ್ಡ್‌ಗೆ ನೀಡುವ ಅನುದಾನದಲ್ಲೇ ಈ ವೆಚ್ಚವನ್ನು ಭರಿಸಲು ನಿರ್ಧರಿಸಿದೆ ಎಂದು ಮೂಲಗಳ ಮಾಹಿತಿ. ಇದಕ್ಕೆ ಹಿಂದು ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದಲ್ಲದೆ, ಬಿಜೆಪಿ ಸರ್ಕಾರದ ಮುಸ್ಲಿಂ ತುಷ್ಟೀಕರಣವೆಂದು ವಿರೋಧಿಸಿದ್ದವು. ಈ ಬಗ್ಗೆ ಕೇಳಿದ ಪ್ರಶ್ನೆಗೆ ಶಿಕ್ಷಣ ಸಚಿವ ಬಿಸಿ ನಾಗೇಶ್, ಅಂತಹ ಪ್ರಸ್ತಾಪ ಇಲ್ಲವೆಂದು ಹೇಳಿದ್ದಾರೆ.
A day after reports of a proposal to set up a Muslim college by the state government spread, Minister B C Nagesh has made it clear that the government has no intention of setting up a separate Muslim college. After the hijab controversy arose in Udupi, the government had issued an order not to wear hijab in classes. Most of the Muslim organisations have turned against the government and said that the rule is causing problems to the girl child. Hence, it is being said that the government is planning to set up a separate college for Muslim girls.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm