ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ಚರ್ಚೆಯೇ ಆಗಿಲ್ಲ, ಆದೇಶವೂ ಮಾಡಿಲ್ಲ ; ಮುಖ್ಯಮಂತ್ರಿ 

01-12-22 12:34 pm       Bangalore Correspondent   ಕರ್ನಾಟಕ

​​​​ರಾಜ್ಯದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದಾರೆ. 

ಬೆಂಗಳೂರು, ಡಿ.1 : ರಾಜ್ಯದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡುವ ಕುರಿತಂತೆ ಯಾವುದೇ ಚರ್ಚೆ ಆಗಿಲ್ಲ. ಪ್ರತ್ಯೇಕ ಕಾಲೇಜು ಸ್ಥಾಪನೆಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ಚರ್ಚೆ ಆಗಿಲ್ಲ. ಆದೇಶವನ್ನೂ ಮಾಡಿಲ್ಲ. ವಕ್ಫ್ ಬೋರ್ಡ್ ನೀಡಿರುವ ಹೇಳಿಕೆ ವೈಯಕ್ತಿಕವಾದದ್ದು. ಆ ಬಗ್ಗೆ ವಕ್ಫ್ ಇಲಾಖೆ ಅಧ್ಯಕ್ಷರ ಜೊತೆ ಮಾತನಾಡುತ್ತೇನೆ ಎಂದು  ಹೇಳಿದ್ದಾರೆ.

ರೌಡಿ ಶೀಟರ್ ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ರೌಡಿಗಳನ್ನು ಬಿಜೆಪಿ ಪಕ್ಷಕ್ಕೆ ಯಾವುದೇ ಕಾರಣಕ್ಕೂ ಸೇರಿಸಿಕೊಳ್ಳಲ್ಲ. ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಯಾವುದೇ ಕಾರಣಕ್ಕೂ ರೌಡಿ ಶೀಟರ್ ಗಳನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ. ಈ ಬಗ್ಗೆ ರಾಜ್ಯಾಧ್ಯಕ್ಷರೇ ಸ್ಪಷ್ಟನೆ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

The Karnataka Waqf board will soon start schools and colleges where students will be allowed to wear the hijab, unlike several government educational institutions in Karnataka.