ಬ್ರೇಕಿಂಗ್ ನ್ಯೂಸ್
03-12-22 11:03 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ.3 : ವಿವಾದಕ್ಕೊಳಗಾಗಿದ್ದ ಬಾಬಾಬುಡನ್ ಗಿರಿಯ ದತ್ತಪೀಠಕ್ಕೆ ಇಬ್ಬರು ಹಿಂದು ಅರ್ಚಕರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆಡಳಿತ ಮಂಡಳಿಯ ಶಿಫಾರಸ್ಸಿನ ಮೇರೆಗೆ ಶೃಂಗೇರಿ ಮೂಲದ ಶ್ರೀಕಾಂತ್ ಹಾಗೂ ಚಿಕ್ಕಬಳ್ಳಾಪುರ ಮೂಲದ ಸಂದೀಪ್ ಎಂಬ ಇಬ್ಬರು ಹಿಂದೂ ಅರ್ಚಕರನ್ನು ನೇಮಕ ಮಾಡಲಾಗಿದೆ. ಇತ್ತೀಚೆಗೆ ದತ್ತಪೀಠಕ್ಕೆ ರಾಜ್ಯ ಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿ ಆದೇಶ ಮಾಡಿತ್ತು.
ಆಡಳಿತ ಮಂಡಳಿಯಲ್ಲಿ ಓರ್ವ ಮುಸ್ಲಿಂ ಸದಸ್ಯ ಸೇರಿ 8 ಜನರು ಇದ್ದರು. ಅರ್ಚಕರ ನೇಮಿಸುವ ಅಧಿಕಾರ ಆಡಳಿತ ಮಂಡಳಿಗೆ ಇದೆ ಎಂದು ರಾಜ್ಯ ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿತ್ತು. ಇದರ ಬೆನ್ನಲ್ಲೇ ಆಡಳಿತ ಮಂಡಳಿ ಇಬ್ಬರು ಅರ್ಚಕರನ್ನು ನೇಮಿಸಿ ಆದೇಶ ಹೊರಡಿಸಿದೆ.
ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯ ವಿವಾದಾತ್ಮಕ ದತ್ತ ಪೀಠದಲ್ಲಿ ಡಿಸೆಂಬರ್ 6, 7, 8 ರಂದು ದತ್ತ ಜಯಂತಿಗೆ ಹೈಕೋರ್ಟ್ ಅನುಮತಿ ಸಿಕ್ಕಿದೆ. ದತ್ತಪೀಠದಲ್ಲಿ ದತ್ತಜಯಂತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗಿರಿಧಾಮಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ 5 ದಿನ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರವಾಸಿಗರಿಗೆ 5 ದಿನಗಳ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಕೆ.ಎನ್ ರಮೇಶ್, ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಡಿಸೆಂಬರ್ 6ರಿಂದ 8 ರ ವರೆಗೆ ದತ್ತಜಯಂತಿ ಕಾರ್ಯಕ್ರಮ ನಡೆಯಲಿದ್ದು, ಡಿಸೆಂಬರ್ 5ರ ಬೆಳಗ್ಗೆ 9 ಗಂಟೆಯಿಂದ ಡಿಸೆಂಬರ್ 9ರ ಬೆಳಗ್ಗೆ 10 ಗಂಟೆಯ ವರೆಗೆ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗ, ಮಾಣಿಕ್ಯಧಾರ, ಹೊನ್ನಮ್ಮನಹಳ್ಳಕ್ಕೆ ಪ್ರವಾಸಿಗರ ಭೇಟಿಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ದಿನಗಳಲ್ಲಿ ಪ್ರವಾಸಿಗರು ಹೋಟೆಲ್, ಹೋಂ ಸ್ಟೇ ಮತ್ತು ರೆಸಾರ್ಟ್ಗಳಲ್ಲಿ ವಾಸ್ತವ್ಯಕ್ಕೆ ಕಾಯ್ದಿರಿಸಿಕೊಂಡಿದ್ದರೆ, ವಾಸ್ತವ್ಯ ಮಾಡಲು ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
The State Government has appointed two Hindu priests to the dattapeetha at Bababudangiri, which was embroiled in a controversy. On the recommendation of the governing body, two Hindu priests, Srikanth from Sringeri and Sandeep from Chikkaballapura, have been appointed. Recently, the state government had constituted a governing body for dattapeetha.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am