ಬ್ರೇಕಿಂಗ್ ನ್ಯೂಸ್
04-12-22 09:31 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.4 : ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವೈಕಲ್ಯ ಉಂಟು ಮಾಡುವ ಜೆಇ ಮೆದುಳು ಜ್ವರ (ಜಪಾನೀಸ್ ಎನ್ ಸೆಫಲೈಟಿಸ್) ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಡಿಸೆಂಬರ್ 5ರಿಂದ ವಿಶೇಷ ಲಸಿಕಾ ಅಭಿಯಾನ ಆರಂಭವಾಗಲಿದೆ. ಈ ಅಭಿಯಾನದಡಿ 1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಜೆಇ ಮೆದುಳು ಜ್ವರ 'ಪ್ಲೇವಿವೈರಸ್' ಎಂಬ ವೈರಾಣುವಿನಿಂದ ಬರುತ್ತದೆ. ಹಂದಿಗಳು ಮತ್ತು ಕಾಡಿನ ಪಕ್ಷಿಗಳಲ್ಲಿ ಈ ವೈರಾಣುವಿದ್ದು ಅದರಿಂದ ಮಾನವನಿಗೆ ಹರಡುತ್ತದೆ. ಲಸಿಕಾ ಅಭಿಯಾನ ಕುರಿತು ಮಾಹಿತಿ ನೀಡಿದ ಸಚಿವರು, ಡಿಸೆಂಬರ್ ಮೊದಲನೇ ವಾರದಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಲಾಗಿದೆ. ನಂತರದ ಎರಡು ವಾರಗಳಲ್ಲಿ ಎಲ್ಲಾ ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರ ಹಾಗೂ ಸಮುದಾಯದ ಇನ್ನಿತರ ಪ್ರದೇಶಗಳಲ್ಲಿ ಲಸಿಕಾಕರಣಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಉಚಿತವಾಗಿ ಜೆನವ್ಯಾಕ್ ಜೆಇ ಲಸಿಕೆಗಳನ್ನು ಸರಬರಾಜು ಮಾಡಿದೆ ಎಂದರು.
ಪ್ರಪಂಚದಾದ್ಯಂತ 24 ರಾಷ್ಟ್ರಗಳಲ್ಲಿ ಜಪಾನೀಸ್ ಎನ್‍ಸೆಫಲೈಟಿಸ್ (ಜೆಇ) ಪಿಡುಗು ಗುರುತಿಸಲಾಗಿದೆ. ಭಾರತ ಸೇರಿದಂತೆ ಏಷ್ಯಾದ 11 ಏಷ್ಯಾ ರಾಷ್ಟ್ರಗಳು ಈ ಪಟ್ಟಿಯಲ್ಲಿದೆ. ಪ್ರತಿ ವರ್ಷ ಸರಾಸರಿ 68,000 ಪ್ರಕರಣಗಳು ವರದಿಯಾಗುತ್ತಿದ್ದು, ಮರಣ ಪ್ರಮಾಣ ಶೇ. 20ರಿಂದ ಶೇ. 30ರಷ್ಟಿದೆ. ಗುಣಮುಖರಾದ ಶೇ. 30ರಿಂದ 50ರಷ್ಟು ಪ್ರಕರಣಗಳಲ್ಲಿ ನರದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವೈಕಲ್ಯ ಉಂಟಾಗಿವೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಧಾರವಾಡ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳನ್ನು 10 ಜೆಇ ಎಂಡೆಮಿಕ್ ಜಿಲ್ಲೆಗಳು ಎಂದು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮಕ್ಕಳಿಗೆ 9 ತಿಂಗಳು ತುಂಬಿದ ನಂತರ ಮೊದಲನೇ ಡೋಸ್ ಮತ್ತು 1.5 ವರ್ಷದ ವಯಸ್ಸಿನಲ್ಲಿ 2ನೇ ಡೋಸ್ ಲಸಿಕೆ ನೀಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿರ್ದೇಶನದಂತೆ ಹೆಚ್ಚುವರಿಯಾಗಿ ಬಾಗಲಕೋಟೆ, ದಕ್ಷಿಣ ಕನ್ನಡ, ಗದಗ, ಹಾಸನ, ಹಾವೇರಿ, ಕಲಬುರಗಿ, ತುಮಕೂರು, ರಾಮನಗರ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜೆಇ ಹರಡದ ಅವಧಿಯಲ್ಲಿ ಲಸಿಕಾ ಅಭಿಯಾನ ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ. ಈ ಅಭಿಯಾನದಲ್ಲಿ 1-15 ವರ್ಷ ವಯಸ್ಸಿನ ಮಕ್ಕಳಿಗೆ ಒಂದು ಡೋಸ್ ಲಸಿಕೆ ನೀಡಲಾಗುವುದು ಎಂದು ಸಚಿವರು ವಿವರಿಸಿದರು.
A special vaccination drive to inoculate an estimated 48 lakh children aged between 1-15 against Japanese Encephalitis (JE) will be held in Karnataka from December 5 for a period of three weeks, State Health Minister K Sudhakar said on Sunday. Encephalitis is the inflammation of the brain caused by either infection or an allergic reaction. "JE is one of the most common causes of Encephalitis in India and a total of 68,000 cases are reported every year. Among these, the death rate is around 20 to 30 per cent.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am