ಬ್ರೇಕಿಂಗ್ ನ್ಯೂಸ್
06-12-22 09:36 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.6: ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಉದ್ಯೋಗ ನೀಡುವ ಯೋಜನೆಗೆ ಮುಂದಿನ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗುವುದು. ಅಲ್ಲದೆ, ಒಲಂಪಿಕ್ಸ್ ಹಾಗೂ ಪ್ಯಾರಾ ಒಲಂಪಿಕ್ಸ್ ಪದಕ ವಿಜೇತ ಪದವೀಧರರಿಗೆ ಗ್ರೂಪ್ 'ಎ' ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಏಕಲವ್ಯ ಪ್ರಶಸ್ತಿ ಹಾಗೂ ಇತರ ಕ್ರೀಡಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದರು. ಪದವೀಧರರಾಗಿರುವ ಏಷಿಯನ್ ಗೇಮ್ಸ್ ಹಾಗೂ ಕಾಮನ್ವೆಲ್ತ್ ಪದಕ ವಿಜೇತರಿಗೆ ಗ್ರೂಪ್ ಬಿ ಉದ್ಯೋಗ, ಇದಕ್ಕಿಂತ ಕಡಿಮೆ ಸ್ತರದ ಕ್ರೀಡಾಕೂಟದ ಪದಕ ವಿಜೇತರಿಗೆ ಗ್ರೂಪ್ ಸಿ ಹಾಗೂ ಗ್ರೂಪ್ ಡಿ ಉದ್ಯೋಗವನ್ನು ನೀಡಲಾಗುವುದು. ಕ್ರೀಡಾಪಟುಗಳಿಗೆ ಸರ್ಕಾರದ ಉದ್ಯೋಗ ನೀಡುವ ನೀತಿ ಕರ್ನಾಟಕದ ಹೊರತು ಬೇರೆ ಯಾವುದೇ ರಾಜ್ಯದಲ್ಲಿ ಇಲ್ಲ ಎಂದರು.

ರಾಜ್ಯ ಸರ್ಕಾರದಿಂದ 75 ಕ್ರೀಡಾಪಟುಗಳಿಗೆ ತರಬೇತಿ
ಕಳೆದ ಆಗಸ್ಟ್ 15 ರಂದು 75 ಕ್ರೀಡಾಪಟುಗಳನ್ನು ದತ್ತು ಪಡೆದು, ಮುಂದಿನ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ತರಬೇತಿ ನೀಡಲಾಗುತ್ತಿದೆ. 4 ವರ್ಷದ ತರಬೇತಿ, ಉತ್ತಮ ತರಬೇತಿದಾರರು, ಶಾಲಾ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ ₹10 ಲಕ್ಷ ವಿನಿಯೋಗಿಸಲಾಗಿದ್ದು, ಅವಶ್ಯಕತೆಗೆ ಅನುಸಾರ ಇನ್ನೂ ಹೆಚ್ಚಿನ ಅನುದಾನ ಒದಗಿಸಲಾಗುವುದು. ಕಾಮನ್ ವೆಲ್ತ್, ಏಷಿಯನ್ ಗೇಮ್ಸ್, ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾಪಟುಗಳು ಉತ್ತಮ ಸಾಧನೆಗಳನ್ನು ಮಾಡಬೇಕು ಎಂದರು.
ರಾಜ್ಯ ಸರ್ಕಾರ ಕ್ರೀಡೆಗಳಿಗೆ, ಕ್ರೀಡಾಪಟುಗಳಿಗೆ ಬಹಳ ಮಹತ್ವ ನೀಡುತ್ತಿದೆ. ಗೃಹ ಇಲಾಖೆಯ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇ.2 ರ ಮೀಸಲಾತಿ ನಿಗದಿಪಡಿಸಲಾಗಿದೆ ಎಂದರು.
Karnataka Chief Minister Basavaraj Bommai Tuesday said the cabinet will grant its approval for the direct recruitment of sportspersons for government jobs in the state. The recruitment will be done through the selection committee headed by the additional chief secretary of the Department of Sports and offer Group ‘A’ jobs to Olympics and Paralympics winners who are also degree holders.
25-12-25 06:26 pm
HK News Desk
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm