ಬ್ರೇಕಿಂಗ್ ನ್ಯೂಸ್
07-12-22 10:06 pm HK News Desk ಕರ್ನಾಟಕ
ಕೋಲಾರ, ಡಿ.7 : ಕುಟುಂಬ ಕಲಹದಿಂದ ಮನನೊಂದ ರಾಕ್ಷಸ ತಾಯಿಯೊಬ್ಬಳು ಇಬ್ಬರು ಹೆಣ್ಣು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟ ಹೃದಯ ವಿದ್ರಾವಕ ಘಟನೆ ಮುಳಬಾಗಿಲು ಪಟ್ಟಣದ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಘಟನೆಯಲ್ಲಿ 8 ವರ್ಷದ ಪುತ್ರಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಮಗಳು ಸಾವು ಬದುಕಿನಲ್ಲಿ ನರಳಾಡುತ್ತಿದ್ದಾಳೆ.
ಆಂಧ್ರಪ್ರದೇಶ ಮೂಲದ ಜ್ಯೋತಿ ಎಂಬಾಕೆ ಮಕ್ಕಳನ್ನು ಸುಟ್ಟ ತಾಯಿ. ಪಲಮನೇರು ಎಂಬಲ್ಲಿನ ನಿವಾಸಿ ಜ್ಯೋತಿ ಅದೇ ಗ್ರಾಮದ ತಿರುಮಲೇಶ ಎಂಬಾತನನ್ನ ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದಳು. ಕೆಲವು ದಿನಗಳ ಕಾಲ ಚೆನ್ನಾಗಿದ್ದ ದಂಪತಿ ಆ ಬಳಿಕ ಜಗಳ ಮಾಡಲಾಂಭಿಸಿದ್ದರು. ಈ ನಡುವೆ, ಇಬ್ಬರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಳು. ಕುಟುಂಬ ಕಲಹದ ಜಂಜಾಟದಿಂದ ಬೇಸತ್ತು ನಿನ್ನೆ ಮಕ್ಕಳೊಂದಿಗೆ ಮನೆಬಿಟ್ಟು ಬಂದಿದ್ದ ಜ್ಯೋತಿ, ಆತ್ಮಹತ್ಯೆಗೆ ನಿರ್ಧರಿಸಿದ್ದಳು.
ಇದಕ್ಕಾಗಿ 10 ಲೀಟರ್ ಪೆಟ್ರೋಲ್ ತೆಗೆದುಕೊಂಡು ಕೋಲಾರದ ಅಂಜನಾದ್ರಿ ಬೆಟ್ಟಕ್ಕೆ ಬಂದಿದ್ದು ರಾತ್ರಿಯಿಡೀ ಬೆಟ್ಟದ ತಪ್ಪಲಿನ ಬಂಡೆಯ ಮೇಲೆ ಮಲಗಿದ್ದಳು. ನಿದ್ರೆಯಲ್ಲಿದ್ದ ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್ ಸುರಿದ, ಬಳಿಕ ಬೆಂಕಿ ಹಚ್ಚಿದ್ದಾಳೆ. ಇದರಿಂದ 8 ವರ್ಷದ ಅಕ್ಷಯಾ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟರೆ, 6 ವರ್ಷದ ಉದಯಶ್ರೀ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಉದಯಶ್ರೀಯನ್ನು ಜಾಲಪ್ಪ ಆಸ್ಪತ್ರೆಯಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬುಧವಾರ ಬೆಳಗ್ಗೆ ಬೆಟ್ಟಕ್ಕೆ ವಿಹಾರಕ್ಕೆಂದು ಬಂದವರು ಮಕ್ಕಳನ್ನು ಸುಟ್ಟಿದ್ದನ್ನು ನೋಡಿ ಪೊಲೀಸರ ಗಮನಕ್ಕೆ ತಂದಿದ್ದಾರೆ.
A woman attempted suicide after setting her two children on fire after dousing them in petrol at Anjanadri Hill in Mulbagal town in the district on Tuesday. While one of the children died, the other sustained burn injuries and is undergoing treatment in the critical care unit at the Mulbagal government hospital.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am