ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ; ಸಿಎಂ ಬೊಮ್ಮಾಯಿ ಘೋಷಣೆ 

07-12-22 10:50 pm       HK News Desk   ಕರ್ನಾಟಕ

ಶೀಘ್ರ ಗತಿಯಲ್ಲಿ ಬೆಳೆಯುತ್ತಿರುವ ತುಮಕೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ತುಮಕೂರು, ಡಿ.7 : ಶೀಘ್ರ ಗತಿಯಲ್ಲಿ ಬೆಳೆಯುತ್ತಿರುವ ತುಮಕೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ಕುಣಿಗಲ್ ನಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದ್ದು, ತುಮಕೂರು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮತ್ತೊಂದು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುತ್ತದೆ. ಇದರ ಜೊತೆ ಒಂದು ಸಾವಿರ ಎಕರೆಯಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಲಾಗುತ್ತದೆ, ಇದರಿಂದ ಜನರಿಗೆ ಉದ್ಯೋಗ ಸಿಗಲಿದೆ ಎಂದು ಹೇಳಿದರು.

ಎಲ್ಲಾ ಜಿಲ್ಲೆಗಳಲ್ಲಿ ಕಣ್ಣಿನ ಆಸ್ಪತ್ರೆ 

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ಕಣ್ಣಿನ ಆಸ್ಪತ್ರೆ ತೆರೆಯವುದಾಗಿ ಕಣ್ಣಿನ ತಜ್ಞ ಡಾ. ಭುಜಂಗ ಶೆಟ್ಟಿ ಹೇಳಿದ್ದಾರೆ.‌ ಅದಕ್ಕೆ ಬೇಕಾದ ವ್ಯವಸ್ಥೆಯನ್ನು ಸರಕಾರದಿಂದ ಮಾಡಿ‌ಕೊಡುವುದಾಗಿ ಬೊಮ್ಮಾಯಿ ಹೇಳಿದರು. ತುಮಕೂರಿನ ಶೆಟ್ಟಿಹಳ್ಳಿಯಲ್ಲಿ ನಾರಾಯಣ ಉಚಿತ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿದರು. 

ಬಡವರಿಗೆ ಉಚಿತ ಕಣ್ಣಿನ ಚಿಕಿತ್ಸೆ ನೀಡುವ ಯೋಜನೆ ರಾಜ್ಯದಲ್ಲಿ ಜಾರಿಯಾಗಲಿದ್ದು, ಜನವರಿಯಲ್ಲಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಸಿಎಂ ಹೇಳಿದರು.

Chief Minister Basavaraj Bommai on Wednesday called upon the medical fraternity to formulate health schemes that will ensure affordable treatment to the poor. Speaking after inaugurating Narayana Devalaya, a cash-counter free eye hospital at Shettyhalli in Tumakuru district, he lauded the efforts of K. Bhujang Shetty, chairman and managing director of Narayana Nethralaya, in setting up the hospital.