ಬ್ರೇಕಿಂಗ್ ನ್ಯೂಸ್
15-10-20 11:09 am Mysore Correspondent ಕರ್ನಾಟಕ
ಮೈಸೂರು, ಅಕ್ಟೋಬರ್ 15: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಭೇಟಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಪ್ರವಾಸಿ ತಾಣಗಳಾದ ಮೈಸೂರು ಅರಮನೆ, ಮೃಗಾಲಯ, ಚಾಮುಂಡಿ ಬೆಟ್ಟಕ್ಕೆ 15 ದಿನಗಳ ಕಾಲ ಪ್ರವಾಸಿಗರಿಗೆ ನಿಷೇಧ ವಿಧಿಸಲಾಗಿದೆ. ಅಕ್ಟೋಬರ್ 17ರಿಂದ ನವೆಂಬರ್ 1ರ ವರೆಗೆ ಜಿಲ್ಲಾಡಳಿತ ಸಂಪೂರ್ಣ ನಿಷೇಧ ವಿಧಿಸಿದೆ.
ನಂಜನಗೂಡು ದೇವಾಲಯಕ್ಕೂ ಪ್ರವೇಶ ನಿಷೇಧ ಮಾಡಿದ್ದು, ಯಾವುದೇ ಭಕ್ತರು, ಪ್ರವಾಸಿಗರು ತೆರಳುವಂತಿಲ್ಲ. ಮೈಸೂರಿನ ಜೊತೆಗೆ ಮಂಡ್ಯ ಪ್ರವಾಸಿ ತಾಣಗಳನ್ನೂ ಮುಚ್ಚಲಾಗುವುದು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ. ಈ ಬಾರಿ ಸರಳ, ಸಾಂಪ್ರದಾಯಿಕ ದಸರಾ ಮಾಡೋಣ ಎಂದು ಫೇಸ್‍ಬುಕ್ ಲೈವ್‍ನಲ್ಲಿ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಮೈಸೂರು ಜಿಲ್ಲೆ ಕೊರೊನಾ ಸೋಂಕಿನಲ್ಲಿ ರಾಜ್ಯದಲ್ಲೆ ಎರಡನೇ ಸ್ಥಾನದಲ್ಲಿದೆ. ಕೊರೊನಾ ಸಾವಿನ ಪ್ರಮಾಣ ಮೈಸೂರು ಜಿಲ್ಲೆಯಲ್ಲಿ ರಾಜ್ಯದ ಶೇಕಡಾ 10 ರಷ್ಟಿದೆ. ಕೊರೊನಾ ನಿಯಂತ್ರಣಕ್ಕೆ ಈ ಕ್ರಮಗಳು ಅನಿವಾರ್ಯ. ಸಾರ್ವಜನಿಕರು ತಮ್ಮ ಮನೆಯಲ್ಲೆ ದಸರಾ ಆಚರಿಸುವಂತೆ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ. ರಜೆಯ ಕಾರಣದಿಂದ ದಸರಾ, ಪ್ರವಾಸಿ ತಾಣಗಳಿಗೆ ಜನಜಂಗುಳಿ ಏರ್ಪಡುತ್ತದೆ ಎಂಬ ನೆಲೆಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.
In the wake of rise in Covid-19 cases, the district administration has agreed to exclude the entry of tourists at the places of tourist interest in and around the Mysore city.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 03:24 pm
Mangalore Correspondent
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm