ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ; ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ, ತಮಿಳುನಾಡಿನಲ್ಲಿ ರೆಡ್ ಅಲರ್ಟ್ 

09-12-22 06:39 pm       Bangalore Correspondent   ಕರ್ನಾಟಕ

ಬಂಗಾಳ ಕೊಲ್ಲಿ ಭಾಗದಲ್ಲಿ ಮಾಂಡಸ್ ಚಂಡಮಾರುತ ಕಾಣಿಸಿಕೊಂಡಿದೆ. ಇದರ ಪರಿಣಾಮ ವಾತಾವರಣದಲ್ಲಿ ದಿಢೀರ್ ಬದಲಾವಣೆಯಾಗಿದ್ದು, ರಾಜ್ಯದ ಹಲವೆಡೆ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಡಿ.9 : ಬಂಗಾಳ ಕೊಲ್ಲಿ ಭಾಗದಲ್ಲಿ ಮಾಂಡಸ್ ಚಂಡಮಾರುತ ಕಾಣಿಸಿಕೊಂಡಿದೆ. ಇದರ ಪರಿಣಾಮ ವಾತಾವರಣದಲ್ಲಿ ದಿಢೀರ್ ಬದಲಾವಣೆಯಾಗಿದ್ದು, ರಾಜ್ಯದ ಹಲವೆಡೆ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ‌

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿ.10 ರಿಂದ 14ರ ವರೆಗೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. 

ತಮಿಳುನಾಡಿನ ಕಾರೈಕಲ್‌ನಿಂದ ಪೂರ್ವ ಆಗ್ನೇಯ ಭಾಗದಲ್ಲಿ ರೂಪುಗೊಂಡಿರುವ ಚಂಡಮಾರುತಗಳು ತಮಿಳುನಾಡಿನ ಉತ್ತರ ಭಾಗ, ಪುದುಚೇರಿ ಹಾಗೂ ಆಂಧ್ರಪ್ರದೇಶ ಶ್ರೀಹರಿಕೋಟಾದ ತೀರ ಪ್ರದೇಶಗಳಲ್ಲಿ ಹಾದು ಹೋಗಲಿದೆ. ಈ ವೇಳೆ ಗಂಟೆಗೆ 65ರಿಂದ 70 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಅಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ತಮಿಳುನಾಡು ಸರ್ಕಾರ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದೆ.

The India Meteorological Department (IMD) in its latest weather bulletin said that cyclone Mandous lay over the southwest Bay of Bengal about 270km ESE of Karaikal. It will move west northwestwards and cross north Tamil Nadu, Puducherry and the adjoining south AP coast between Puducherry and Sriharikota with a windspeed of 65-75 kmph around midnight of December 9. The weather department has warned of heavy rainfall in Tamil Nadu, Puducherry, Karaikal and Andhra Pradesh and NDRF teams have been put on alert.