ಬ್ರೇಕಿಂಗ್ ನ್ಯೂಸ್
12-12-22 01:30 pm HK News Desk ಕರ್ನಾಟಕ
ಹಾಸನ, ಡಿ.12: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಎಂಬಲ್ಲಿ ಸ್ವಿಫ್ಟ್ ಹಾಗೂ ಇನೋವಾ ಕಾರು ಮಧ್ಯೆ ಭೀಕರ ಅಪಘಾತ ನಡೆದಿದ್ದು ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಸನದಿಂದ ಬೆಂಗಳೂರಿಗೆ ಮದುವೆಗೆ ತೆರಳಿ ಬರುತ್ತಿದ್ದ ದಂಪತಿ ಸೇರಿ ಮೂವರು ಸಾವು ಕಂಡಿದ್ದಾರೆ.
ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಹತ್ತು ಗಂಟೆ ವೇಳೆಗೆ ಅಪಘಾತ ನಡೆದಿದೆ. ಬೆಂಗಳೂರಿನಿಂದ ಹಾಸನ ಕಡೆಗೆ ತೆರಳುತ್ತಿದ್ದ ತಮಿಳುನಾಡು ಮೂಲದ ಇನ್ನೊವಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಎದುರಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರಿನ ಮೇಲೆ ಬಿದ್ದಿದೆ. ಇನೋವಾ ಕಾರಿನಲ್ಲಿದ್ದ ಹಾಸನ ಮೂಲದ ಮೂವರು ಹಾಗೂ ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನೋವಾ ಕಾರಿನಲ್ಲಿದ್ದ ಹಾಸನ ನಗರದ ದೊಡ್ಡಿ ರಸ್ತೆಯ ಶ್ರೀನಿವಾಸಮೂರ್ತಿ(66), ಜಯಂತಿ (60) ದಂಪತಿ ಹಾಗು ಸಂಬಂಧಿ ಕಾರು ಚಲಾಯಿಸುತ್ತಿದ್ದ ಪ್ರಭಾಕರ್ ಎಂಬವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸಂಬಂಧಿಕರ ಮದುವೆ ಸಂಬಂಧ ಬಾಡಿಗೆ ಕಾರಿನಲ್ಲಿ ತೆರಳಿದ್ದ ಕುಟುಂಬ ಹಿಂತಿರುಗಿ ಬರುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಮದುವೆ ಮುಗಿಸಿ ವಾಪಸ್ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿಯಾಗಿದ್ದ ಇನ್ನೋವಾ ಕಾರು, ಆನಂತರ ಎದುರಿನಿಂದ ವೇಗವಾಗಿ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿಯಾಗಿದೆ.
ಭೀಕರ ಅಪಘಾತದಲ್ಲಿ ಇನ್ನೋವಾದಲ್ಲಿದ್ದ ಮೂವರು ಹಾಗೂ ಸ್ವಿಫ್ಟ್ ಕಾರಿನಲ್ಲಿದ್ದ ಕಿಶೋರ್ ಮತ್ತು ಇನ್ನೊಬ್ಬರು ಸ್ಥಳದಲ್ಲೆ ಸಾವು ಕಂಡಿದ್ದಾರೆ. ಎರಡೂ ಕಾರಿನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತ ಘಟನೆಯಿಂದಾಗಿ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು.
Five people have been killed and three seriously injured in a head-on collision between two cars on Bengaluru-Mangaluru national highway, near Nagathihalli, in Nagamangala taluk, on Sunday night. Three passengers in the Swift car, from Hassan and two passengers in the Innova car were killed on the spot in the mishap, according to police.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm