ಬ್ರೇಕಿಂಗ್ ನ್ಯೂಸ್
12-12-22 07:39 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.12 : ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಖಚಿತ ಪಡಿಸಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ 5 ವರ್ಷದ ಬಾಲಕಿಗೆ ಝೀಕಾ ಸೋಂಕು ತಗುಲಿದೆ. ಬಾಲಕಿ ಮೇಲೆ ನಿಗಾ ವಹಿಸಿದ್ದೇವೆ. ರಾಯಚೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಝೀಕಾ ವೈರಸ್ ಸೋಂಕಿನ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಸೋಂಕಿನ ಬಗ್ಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಆರೋಗ್ಯಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಡಾ.ಕೆ.ಸುಧಾಕರ್, ಪುಣೆ ವೈರಾಲಜಿ ಲ್ಯಾಬ್‌ನಿಂದ ಪಾಸಿಟಿವ್ ರಿಪೋರ್ಟ್ ಬಂದಿದೆ. ಝೀಕಾ ಸೋಂಕು ಪತ್ತೆಯಾದ ಬಾಲಕಿ ಟ್ರಾವೆಲ್ ಹಿಸ್ಟರಿ ಲಭ್ಯವಾಗಿಲ್ಲ. ಹೀಗಾಗಿ ರಾಯಚೂರು ಜಿಲ್ಲಾಡಳಿತ ಬಾಲಕಿ ಟ್ರಾವೆಲ್ ಹಿಸ್ಟರಿ ಪತ್ತೆ ಮಾಡುತ್ತಿದೆ ಎಂದಿದ್ದಾರೆ.
ಕಳೆದ 15 ದಿನಗಳಿಂದ ಜ್ವರ, ವಾಂತಿ, ಭೇದಿಯಿಂದ ಬಳಲುತ್ತಿದ್ದ ಬಾಲಕಿಗೆ ನ.13ರಂದು ಮೊದಲು ಜ್ವರ ಕಾಣಿಸಿಕೊಂಡಿತ್ತು. ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಳು. ಬಳಿಕ ಡೆಂಘೀ ಜ್ವರ ದೃಢಪಟ್ಟ ಹಿನ್ನೆಲೆ ವಿಜಯನಗರದ ವಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗಿತ್ತು. ವಿಜಯನಗರದ ವಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ಸ್ಯಾಂಪಲ್ ಸಂಗ್ರಹಿಸಿ ಪುಣೆಯ ವೈರಾಲಜಿ ಲ್ಯಾಬ್‌ಗೆ ಕಳಿಸಿದ್ದರು. ಡಿಸೆಂಬರ್ 9ರಂದು ಬಾಲಕಿಗೆ ಝೀಕಾ ಸೋಂಕು ಇರುವುದು ಪತ್ತೆಯಾಗಿದೆ. ಬಾಲಕಿ ಕುಟುಂಬಸ್ಥರ ರಕ್ತ ಹಾಗೂ ಯೂರಿನ್ ಸ್ಯಾಂಪಲ್ ಸಂಗ್ರಹಿಸಲಾಗಿದ್ದು ಐದು ಜನರ ಸ್ಯಾಂಪಲ್ ನೆಗೆಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Karnataka Health Minister Dr K Sudhakar on Monday confirmed the first Zika virus case in Karnataka. The minister said that a 5-year-old girl from Raichur has tested positive for the virus. Sudhakar said that the girl is being closely being monitored by a team of doctors. Officials said that the girl was suffering from vomiting and a fever for the past 2 weeks. Initially, she was treated at Taluk hospital in Sindhanur, and was later shifted to Vijayanagara Institute of Medical Sciences.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm