ಬ್ರೇಕಿಂಗ್ ನ್ಯೂಸ್
15-12-22 09:08 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.15 : ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಗಳಾದ ಕಲಬುರಗಿ ಜಿಲ್ಲೆಯ ಅಫಜಲಪುರದ ಕಾಂಗ್ರೆಸ್ ಮುಖಂಡ ಆರ್.ಡಿ. ಪಾಟೀಲ ಹಾಗೂ ಆತನ ಸಹೋದರ ಮಹಾಂತೇಶ ಪಾಟೀಲಗೆ ಎಂಟು ತಿಂಗಳ ಬಳಿಕ ಜಾಮೀನು ಸಿಕ್ಕಿದೆ.
ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠವು ಗುರುವಾರ ಜಾಮೀನು ಮಂಜೂರು ಮಾಡಿದೆ. ನ್ಯಾ. ಮೊಹಮ್ಮದ್ ನವಾಜ್ ಅವರಿದ್ದ ನ್ಯಾಯಪೀಠ ಗುರುವಾರ ಆದೇಶ ನೀಡಿದೆ.
ಕಲಬುರಗಿ ನಗರದ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ 2021ರ ಅಕ್ಟೋಬರ್ 3ರಂದು ನಡೆದಿದ್ದ ಪಿಎಸ್‌ಐ ಪರೀಕ್ಷಾ ನೇಮಕಾತಿ ಹಗರಣದಲ್ಲಿ ಆರ್.ಡಿ. ಪಾಟೀಲ ಮತ್ತು ಮಹಾಂತೇಶ ಪಾಟೀಲ ಪ್ರಮುಖ ಆರೋಪಿಗಳಾಗಿದ್ದರು. ಇವರು ತಮಗೆ ದೊಡ್ಡ ಮೊತ್ತದ ಹಣ ನೀಡಿದ ಅಭ್ಯರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ಹೇಳಿಸಿ ಪಾಸ್ ಆಗುವಂತೆ ನೋಡಿಕೊಂಡಿದ್ದರು. ಈ ಬಗ್ಗೆ ಕಳೆದ ಏಪ್ರಿಲ್ ತಿಂಗಳಲ್ಲಿ ನಗರದ ಚೌಕ್ ಪೊಲೀಸ್ ಠಾಣೆಯಲ್ಲಿ ಮೊದಲ ಬಾರಿಗೆ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣ ಸಿಐಡಿ ತನಿಖೆಗೆ ವರ್ಗಾವಣೆಯಾಗುತ್ತಿದ್ದಂತೆ ಆರ್ ಡಿ. ಪಾಟೀಲ್ ಮತ್ತು ಮಹಾಂತೇಶ ಪಾಟೀಲ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದರು.
ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ನೇತೃತ್ವದ ತನಿಖಾ ತಂಡ ಏಪ್ರಿಲ್ 22ರಂದು ಸಾಮೂಹಿಕ ವಿವಾಹದ ಸಿದ್ಧತೆಯಲ್ಲಿದ್ದ ಮಹಾಂತೇಶ ಪಾಟೀಲನನ್ನು ಬಂಧಿಸಿತ್ತು. ಮರುದಿನವೇ ಮಹಾರಾಷ್ಟ್ರದಲ್ಲಿ ಆರ್.ಡಿ. ಪಾಟೀಲನನ್ನೂ ಬಂಧಿಸಲಾಗಿತ್ತು.
ಆನಂತರ ಜಾಮೀನಿಗಾಗಿ ಹಲವಾರು ಪ್ರಯತ್ನ ನಡೆದಿದ್ದರೂ ಜೆಎಂಎಫ್‌ಸಿ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು. ಸುಮಾರು ಎಂಟು ತಿಂಗಳ ಬಳಿಕ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.
Rudragowda Patil, main accused in the malpractice reported in the examination for recruitment of Police Sub-Inspectors (PSIs), who was arrested on April 24, was granted bail by the High Court of Karnataka in Kalaburagi on Thursday. However, Patil is not likely to be released from judicial custody, as he has been granted bail only in one case connected to the Chowk Police Station. Multiple cases have been registered against the accused in different police stations.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm