ಬ್ರೇಕಿಂಗ್ ನ್ಯೂಸ್
16-12-22 05:12 pm HK News Desk ಕರ್ನಾಟಕ
ಬೆಂಗಳೂರು, ಡಿ.16 : ಡಿಕೆಶಿ ಭಯೋತ್ಪಾದಕರ ಪರ ಹೇಳಿಕೆ ಅವರ ನಿಲುವನ್ನು ತೋರಿಸಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರೆಲ್ಲ ತಾವು ದೇಶದಲ್ಲಿ ಅಶಾಂತಿ ಉಂಟುಮಾಡುವ ಭಯೋತ್ಪಾದಕರ ಪರ ಇದ್ದೀವೋ ಅಥವಾ ದೇಶ ಉಳಿಸುವ ದೇಶಭಕ್ತರ ಪರ ಇದ್ದೀರಾ ಎಂಬುದನ್ನು ಸ್ಪಷ್ಟಪಡಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ವಿಜಯ ದಿವಸ್ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಕೆಪಿಸಿಸಿ ಅಧ್ಯಕ್ಷರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರತಿ ಬಾರಿ ಪೊಲೀಸ್ ಇಲಾಖೆಯ ನೈತಿಕತೆ ಕುಸಿಯುವಂತೆ ಮಾತನಾಡುವುದು ದೇಶಭಕ್ತರ ಕೆಲಸವಲ್ಲ. ಇದನ್ನು ಸ್ಪಷ್ಟವಾಗಿ ಹೇಳಿದರೆ ಜನ ತೀರ್ಮಾನ ಮಾಡುತ್ತಾರೆ. ಭಯೋತ್ಪಾದಕರು ಸಾಕ್ಷಿ ಸಮೇತ ಸಿಕ್ಕಾಗ ಅದರ ಪ್ರಕ್ರಿಯೆ ಹಾಗೂ ತನಿಖೆಯನ್ನೇ ಪ್ರಶ್ನೆ ಮಾಡುವುದು ಭಯೋತ್ಪಾದಕ ಸಂಘಟನೆಗಳಿಗೆ ನೈತಿಕ ಬಲ ತಂದುಕೊಡುತ್ತದೆ ಎಂದರು.
ಒಬ್ಬ ವ್ಯಕ್ತಿ ಬಾಂಬ್ ಗೆ ಸಂಬಂಧಿಸಿದ ಎಲ್ಲಾ ವಸ್ತುಗಳನ್ನು ಕುಕ್ಕರ್ ನಲ್ಲಿ ಹಾಕಿಕೊಂಡು ಹೋಗುವಾಗ ಸ್ಪೋಟವಾಗಿದೆ. ಅದನ್ನು ಮಂಗಳೂರಿನಲ್ಲಿ ಸ್ಪೋಟಗೊಳಿಸುವ ಉದ್ದೇಶವಿತ್ತು ಎನ್ನುವುದು ಸ್ಪಷ್ಟವಾಗಿದೆ. ಆತ ತನ್ನ ಗುರುತನ್ನು ಮರೆಮಾಚಿ ಈಗಾಗಲೇ 2-3 ಪ್ರಕರಣಗಳಲ್ಲಿ ಸಿಕ್ಕಿಹಾಕಿಕೊಂಡಿದ್ದ. ತನ್ನ ಹೆಸರು ಮರೆಮಾಚಿ ಭಯೋತ್ಪಾದಕ ಕೃತ್ಯಕ್ಕೆ ಬಂದಿದ್ದ ಎಂದ ಮೇಲೆ ಆತನ ಬಗ್ಗೆ ಅನುಮಾನ ಪಡುವುದು, ತನಿಖೆಯ ಬಗ್ಗೆ ಅನುಮಾನ ಪಡುವುದು ಎಷ್ಟು ಸರಿ ಎಂದು ಕೇಳಿದರು.
ಇಂಥ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರು, ಇಡೀ ಘಟನೆಯೇ ಆಕಸ್ಮಿಕ, ಪ್ರಕರಣ ಮುಚ್ಚಿಹಾಕಲು ಭಯೋತ್ಪಾದಕ ಕೃತ್ಯ ಎಂದಿರುವುದು ನಿಜಕ್ಕೂ ಅವರಿಗೆ ಶೋಭೆ ತರುವಂಥದ್ದಲ್ಲ. ಅವರ ನೀತಿಯೇ ಹೀಗಿದೆ. ಭಯೋತ್ಪಾದಕ ಚಟುವಟಿಕೆಗಳನ್ನು ಕ್ಷುಲ್ಲಕವಾಗಿ ಕಾಣುವುದು, ಭಯೋತ್ಪಾದಕರಿಗೆ ಬೆಂಬಲ ನೀಡುವುದು, ಗಲ್ಲಿಗೇರಿಸಿದಾಗ ಟೀಕೆ ಮಾಡುವ ಅವರ ಪ್ರವೃತ್ತಿ, ಚುನಾವಣೆ ಸಮಯದಲ್ಲಿ ತುಷ್ಟೀಕರಣದ ತಂತ್ರ. ಈ ರೀತಿ ಮಾತನಾಡಿದರೆ ಅಲ್ಪಸಂಖ್ಯಾತರ ಮತಗಳು ದೊರಕಬಹುದೆಂಬ ಹಳೇ ತಂತ್ರವನ್ನು ಬಳಕೆ ಮಾಡಿದ್ದಾರೆ. ಆದರೆ ಜನ ಜಾಗೃತರಾಗಿದ್ದು, ಇದನ್ನೆಲ್ಲ ಗಮನಿಸುತ್ತಾರೆ ಎಂದರು
Karnataka Chief Minister Basavaraj Bommai on Friday asked the AICC President Mallikarjun Kharge, former party presidents Sonia Gandhi and Rahul Gandhi to clear their stand on terrorism and terrorists. Interacting with reporters here, Chief Minister Bommai said that Kharge, Rahul and Sonia Gandhi should state whether they prefer terrorists who destroy peace and create havoc in the country or with the patriots who love this country, he said.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm