ಬ್ರೇಕಿಂಗ್ ನ್ಯೂಸ್
19-12-22 12:59 pm HK News Desk ಕರ್ನಾಟಕ
ಹುಬ್ಬಳ್ಳಿ, ಡಿ.19 : ಯಾರು ಚುನಾವಣೆಯಲ್ಲಿ ಗೆಲ್ಲುತ್ತಾರೋ ಅವರೆಲ್ಲರಿಗೂ ಟಿಕೆಟ್ ನೀಡುತ್ತೇವೆ. ಎಐಸಿಸಿ ಮುಖಂಡರು ಪ್ರತಿ ಕ್ಷೇತ್ರದಲ್ಲೂ ಟಿಕೆಟ್ ನೀಡಿಕೆ ವಿಚಾರದಲ್ಲಿ ಮಾಹಿತಿ ಸಂಗ್ರಹಿಸುತ್ತಾರೆ. ಕಷ್ಟ ಕಾಲದಲ್ಲಿ ಯಾರು ಗೆದ್ದು ಕ್ಷೇತ್ರ ಉಳಿಸಿಕೊಂಡಿದ್ದಾರೋ ಅವರಿಗೆ ಅಭಿಪ್ರಾಯ ಸಂಗ್ರಹಿಸಿ ಟಿಕೆಟ್ ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಪಕ್ಷದಲ್ಲಿ ಯಾರು ಯಾವ ಷರತ್ತು ಹಾಕುವಂತಿಲ್ಲ. ಪಕ್ಷದ ತೀರ್ಮಾನವೇ ಅಂತಿಮ. ಪಕ್ಷದ ಅಧ್ಯಕ್ಷನಾದರೂ ನಾನೊಬ್ಬನೇ ಎಲ್ಲವನ್ನೂ ತೀರ್ಮಾನಿಸುವುದಿಲ್ಲ. ನಾನು ಪ್ರತಿಯೊಂದು ವಿಚಾರವನ್ನು ಸಿದ್ದರಾಮಯ್ಯ, ಹರಿಪ್ರಸಾದ್, ಕಾರ್ಯಧ್ಯಕ್ಷರು, ಜಿಲ್ಲಾ ನಾಯಕರ ಜತೆ ಚರ್ಚೆ ಮಾಡುತ್ತಿದ್ದೇನೆ. ಹುಬ್ಬಳ್ಳಿ ಧಾರವಾಡದಲ್ಲಿ ಕಾರ್ಯಕ್ರಮ ಮಾಡುವಾಗ ಹೆಚ್.ಕೆ. ಪಾಟೀಲ್ ಅವರ ಜತೆ, ವಿಜಯಪುರದಲ್ಲಿ ಕಾರ್ಯಕ್ರಮ ಮಾಡುವಾಗ ಎಸ್.ಆರ್. ಪಾಟೀಲ್, ಎಂ.ಬಿ ಪಾಟೀಲ್, ಶಿವಾನಂದ ಪಾಟೀಲ್, ಅಲ್ಲಿನ ಶಾಸಕರ ಅವರ ಜತೆ ಚರ್ಚೆ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಪಕ್ಷದ ವತಿಯಿಂದ ಬಸ್ ಯಾತ್ರೆ ಮಾಡಲಾಗುತ್ತಿದ್ದು, 30 ರಂದು ವಿಜಯಪುರದಲ್ಲಿ ಕೃಷ್ಣಾ ನೀರಿನ ಹಂಚಿಕೆ ವಿಚಾರವಾಗಿ ದೊಡ್ಡ ಸಭೆ ಹಮ್ಮಿಕೊಳ್ಳಲಿದ್ದೇವೆ. ಮುಂದಿನ ತಿಂಗಳು 2ರಂದು ಮಹದಾಯಿ ವಿಚಾರವಾಗಿ ಹೋರಾಟ, ಜನಜಾಗೃತಿಯನ್ನು ಹುಬ್ಬಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಜ.8ರಂದು ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಸಮಾವೇಶ ಹಮ್ಮಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.
ಅಧಿವೇಶನದ ನಡುವೆ ಸುರ್ಜೇವಾಲ ಹಾಗೂ ನಾವು ನಮ್ಮ ನಾಯಕರನ್ನು ಭೇಟಿ ಮಾಡುತ್ತಿದ್ದೇವೆ. ಉತ್ತರ ಕರ್ನಾಟಕ ಭಾಗದ ಎಲ್ಲ ನಾಯಕರನ್ನು ಆಹ್ವಾನಿಸಿದ್ದೇವೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಸುರ್ಜೆವಾಲ ಅವರು ಭಾಗವಹಿಸಲಿದ್ದಾರೆ. ನಂತರ ಹುಬ್ಬಳ್ಳಿ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಲಿದ್ದೇನೆ ಎಂದು ಹೇಳಿದರು.
ಕುಕ್ಕರ್ ಬ್ಲಾಸ್ಟ್ ಹೇಳಿಕೆಗೆ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಕೇಳಿದಾಗ, ಯಾರು ಏನಾದರೂ ಪ್ರತಿಭಟನೆ ಮಾಡಲಿ, ನನ್ನ ಹೆಸರು ಪ್ರಚಾರ ಮಾಡಲಿ. ಭಯೋತ್ಪಾದನೆಯಿಂದ ನಾವು ನಮ್ಮ ನಾಯಕರುಗಳನ್ನು ಕಳೆದುಕೊಂಡಿದ್ದೇವೆ. ಕಾಂಗ್ರೆಸ್ ಪಕ್ಷ ಪ್ರತಿ ಹಂತದಲ್ಲೂ ಭಯೋತ್ಪಾದನೆಯನ್ನು ವಿರೋಧ ಮಾಡಿಕೊಂಡು, ದಮನ ಮಾಡಿಕೊಂಡು ಬಂದಿದೆ. ನಾವು ಭಯೋತ್ಪಾದನಾ ಕೃತ್ಯ ಖಂಡಿಸುತ್ತೇವೆ. ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಮುಖ ಆರೋಪಿಗೆ ಪ್ರಜ್ಞೆ ಬಂದಿಲ್ಲ. ಹೀಗಾಗಿ ಅವನ ವಿಚಾರಣೆ ಮಾಡಿಲ್ಲ. ಅವನ ತನಿಖೆ ನಂತರ ಮಾಹಿತಿ ಪಡೆಯಬೇಕು, ಆನಂತರ ಮಾಧ್ಯಮಗಳು ಈ ವಿಚಾರವಾಗಿ ಮಾಹಿತಿ ಪ್ರಕಟಿಸಬೇಕು ಎಂದು ಕೇಳಿಕೊಂಡಿದ್ದಾರೆ. ಪೊಲೀಸ್ ಆಯುಕ್ತರು ಹೇಳುವ ಮುನ್ನವೇ ಡಿಜಿ ಅವರು ಹೇಳಿಕೆ ನೀಡಿದ್ದಾರೆ. ಆತ ಭಯೋತ್ಪಾದಕ ಇರಬಹುದು. ತನಿಖೆ ಮಾಡಿದ ನಂತರ ಸ್ಪಷ್ಟ ಮಾಹಿತಿ ನೀಡಬೇಕು ಎಂದು ಡಿಕೆಶಿ ಒತ್ತಾಯಿಸಿದ್ದಾರೆ.
We will give tickets to all those who win the election. AICC leaders will discuss the issue of tickets in each constituency. KPCC President DK Sivakumar said that those who won and retained their seat in difficult times will collect their opinions and give tickets.Speaking to the media in Hubli, he said that no one in the party can impose any conditions. The decision of the party is final. Although I am the party president, I alone do not decide everything. I am discussing every issue with Siddaramaiah, Hariprasad, working president, district leaders.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm