ಬ್ರೇಕಿಂಗ್ ನ್ಯೂಸ್
19-12-22 09:07 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.19 : ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ, ಅವರ ಪಕ್ಷ ಹಾಗೂ ಪಂಚರತ್ನ ಯೋಜನೆಗಳ ಬಗ್ಗೆ ಲಘುವಾಗಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವನ್ಯಾರೋ ಜೋಳಿಗೆ ಇಡ್ಕೊಂಡು ಓಡಾಡೋನು ಏನೋ ಹೇಳಿದ್ದಾನೆ. ಕರ್ನಾಟಕಕ್ಕೂ ನಿನಗೂ ಏನ್ ಸಂಬಂಧ, ಕರ್ನಾಟಕಕ್ಕೆ ನಿನ್ನ ಕೊಡುಗೆ ಏನು ಎಂದು ಸಂತೋಷ್ ಅವರನ್ನು ಪ್ರಶ್ನಿಸಿದ್ದಾರೆ.
ಮಿಸ್ಟರ್ ಸಂತೋಷ್, ಲೂಟಿ ದರೋಡೆ ಮಾಡಿ ಕರ್ನಾಟಕದ ಹಣವನ್ನ ಕೊಂಡೊಯ್ದಿದ್ದೀರಾ. ನೀವು ಭಾರೀ ಸಂತೋಷವಾಗಿದ್ದೀರಂತೆ ರಾಜ್ಯವನ್ನು ಲೂಟಿ ಹೊಡೆದು. ರಾಜ್ಯದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಮಾಡುವವರು, ವಾಮಾಚಾರ ಮಾಡುವವರಿಂದ ಹಣ ತೆಗೆದುಕೊಂಡು ಆಪರೇಶನ್ ಕಮಲ ಮಾಡಿ ನಮ್ಮ ಸರ್ಕಾರ ತೆಗೆದಿದ್ದೀರಿ ಎಂದು ಸಂತೋಷ್ ವಿರುದ್ಧ ಕಿಡಿಕಾರಿದರು.
ನಿಮ್ಮ ಪ್ರಧಾನಿಗಳ ಬಳಿ ಕೇಳಿ, ನಮ್ಮ ಕುಟುಂಬ ಏನು ಅಂತ. ನಮ್ಮ ಮನೆತನ, ಮಾಜಿ ಪ್ರಧಾನಿಗಳ ಬಗ್ಗೆ ಹೇಳ್ತಾರೆ. ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಬೇಡಿ. 2023ಕ್ಕೆ ನಿಮ್ಮ ಪರಿಸ್ಥಿತಿ ಏನಾಗಿರುತ್ತದೆ ಎನ್ನುವುದನ್ನು ಒಮ್ಮೆ ಊಹೆ ಮಾಡಿಕೊಳ್ಳಿ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ನಿಮ್ಮದು 40% ಸರ್ಕಾರ. ನಮ್ಮ ಬಗ್ಗೆ ಮಾತಾಡಲು ನೈತಿಕತೆ ಇದೆಯಾ.. ಮೋದಿ ಹೆಸರಿನಲ್ಲಿ ಹೊಟ್ಟೆಪಾಡು ನೋಡ್ಕೊಂಡಿರೋರು ನೀವು. ನಾನು ಸರಕಾರ ಮಾಡೋಣ ಎಂದು ನಿಮ್ಮ ಮನೆ ಬಾಗಿಲಿಗೆ ಬಂದಿರಲಿಲ್ಲ. ಯಾರು ಯಾರ ಮನೆ ಬಾಗಿಲಿಗೆ ಬಂದಿದ್ದರು ಎನ್ನುವುದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತು. ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತಾಡ್ಬೇಡಿ ಮಿಸ್ಟರ್ ಅಶೋಕ್, ಮಿಸ್ಟರ್ ಸಂತೋಷ್ ಎಂದು ಸಂತೋಷ್ ಹಾಗೂ ಕಂದಾಯ ಸಚಿವ ಆರ್. ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿಯವರು ದರೋಡೆಕೋರರು, ಲೂಟಿಕೋರರು. ಇಂಥ ಬಿಜೆಪಿಯವರ ಜತೆ ಸೇರಿ ನಾನು ಸರ್ಕಾರ ನಡೆಸುವುದಕ್ಕೆ ಆಗುತ್ತಾ? ಪಂಚರತ್ನ ಯೋಜನೆಗಳನ್ನು ಜಾರಿ ಮಾಡುವುದಕ್ಕೆ ಆಗುತ್ತಾ? 2023ರ ಚುನಾವಣೆ ನಂತರ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತದೆ. ಆಗ ಬಿಜೆಪಿಯವರು ನಮ್ಮ ಮುಂದೆ ಅರ್ಜಿ ಹಿಡಿದು ಬರುತ್ತಾರೆ ನೋಡೋಣ. ಸಮಾಜವನ್ನು ಒಡೆಯುವ, ಜನರ ನಡುವೆ ದ್ವೇಷ ಬಿತ್ತುವ ಇಂಥವರ ಜತೆ ಸರಕಾರ ರಚನೆ ಮಾಡಲು ಸಾಧ್ಯವೇ? ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನಿಸಿದರು.
ಸಚಿವ ಅಶೋಕ್ ಮೇಲೆ ಹರಿಹಾಯ್ದ ಕುಮಾರಸ್ವಾಮಿ ಅವರು, ಬಾಯಿಗೆ ಬಂದ ಹಾಗೆ ಮಾತನಾಡಬೇಡಿ. ಚುನಾವಣೆ ಅದ ಮೇಲೆ ಮಾತನಾಡಿ ಎಂದು ಟಾಂಗ್ ಕೊಟ್ಟರು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಭೋಜೆಗೌಡ, ಮಾಜಿ ಸದಸ್ಯ ಹೆಚ್.ಎಂ.ರಮೇಶಗೌಡ ಮುಂತಾದವರು ಉಪಸ್ಥಿತರಿದ್ದರು.
Former CM HD Kumaraswamy against BJP National Organizing General Secretary BLSanthosh for talking lightly about former Prime Minister HDDevegowda's family, JDS and Pancharatna schemes. HDKumaraswamy) expressed outrage. Responding bitterly to the media's question at the party's state office JP Bhavan, he said something like "Avanyaro is running". What is your relationship with Karnataka? Santosh asked him singularly what is your contribution to Karnataka.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm