ಬ್ರೇಕಿಂಗ್ ನ್ಯೂಸ್
25-12-22 03:53 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26 : ಗಣಿ ಧಣಿ ಜನಾರ್ದದನ ರೆಡ್ಡಿ ಕಡೆಗೂ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಅಲ್ಲದೆ, ಚುನಾವಣೆ ಹೊತ್ತಲ್ಲಿ ಬಿಜೆಪಿಗೇ ಸೆಡ್ಡು ಹೊಡೆದು ಹೊಸ ಪಕ್ಷ ಸ್ಥಾಪನೆ ಮಾಡಿದ್ದಾರೆ. ಬೆಂಗಳೂರಿನ ತನ್ನ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ರೆಡ್ಡಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದಾರೆ. ಅಲ್ಲದೆ, ಸುದೀರ್ಘವಾಗಿ ಮಾತನಾಡಿ, ರಾಜಕೀಯದ ಒಳ ಹೊರಗನ್ನು ತೆರೆದಿಟ್ಟಿದ್ದಾರೆ.
ಬಸವಣ್ಣ ಹಾದಿಯಲ್ಲಿ ನಡೆಯಲು ಸಂಕಲ್ಪ ಮಾಡಿದ್ದೇನೆ. ಜಾತಿ, ಮತ, ಬೇಧ ಇಲ್ಲದೇ ಕೆಲಸ ಮಾಡಬೇಕು ಅಂತ ನಿರ್ಧರಿಸಿದ್ದೇನೆ. ಬಸವಣ್ಣನ ಸ್ಮರಣೆ ಮಾಡುತ್ತಾ ಸಾರ್ವಜನಿಕ ಬದುಕಿಗೆ ಬರುತ್ತಿದ್ದೇನೆ. ಬಿಜೆಪಿ ಜೊತೆ ನಾನು ಬಾಂಧವ್ಯವನ್ನು ಕಡಿದುಕೊಳ್ಳುತ್ತಿದ್ದೇನೆ. ಈ ಕಾರಣಕ್ಕೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ನಿರ್ಮಾಣ ಮಾಡ್ತಿದ್ದೇನೆ ಎಂದು ರೆಡ್ಡಿ ಹೇಳಿದರು.

ನನ್ನ ಜೊತೆ ತನ್ನ ಆಪ್ತ ಗೆಳೆಯ ಶ್ರೀರಾಮುಲು ಅವರಿಗೆ ಬರುವಂತೆ ಹೇಳಿಲ್ಲ. ನಾವಿಬ್ಬರೂ ಒಳ್ಳೆಯ ಸ್ನೇಹಿತರು. ಮುಂದಿನ ದಿನಗಳಲ್ಲಿ ನನ್ನ ಪತ್ನಿ ಅರುಣಾ ಲಕ್ಷ್ಮಿ ಅವರು ಸಹ ಪಕ್ಷ ಸಂಘಟನೆಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಏನೇ ಅಡೆತಡೆ ಬಂದರೂ ಮುನ್ನಡೆಯುತ್ತೇನೆ. ಕರ್ನಾಟಕ ರಾಜ್ಯದ ಅಭಿವೃದ್ಧಿಯೇ ನನ್ನ ಗುರಿ. ಇಡೀ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುತ್ತೇನೆ ಎಂದರು.
ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಖಚಿತ
ಹೊಸ ಪಕ್ಷವನ್ನು ಘೋಷಿಸಿದ ಜನಾರ್ದನ ರೆಡ್ಡಿ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ದಿಸುವುದನ್ನು ಖಚಿತಪಡಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ. ಗಂಗಾವತಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. ಅಲ್ಲದೆ, ಯಾವೆಲ್ಲ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಇಳಿಸುತ್ತೇನೆಂದು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದರು.

ನನ್ನ ಕಷ್ಟದ ದಿನಗಳಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್ ಮಾತ್ರ ನಮ್ಮ ಕುಟುಂಬವನ್ನು ಸಂತೈಸಿದ್ದು. ಬೇರೆ ಯಾರೂ ಹತ್ತಿರ ಬಂದಿರಲಿಲ್ಲ. ಆಗ ನಮ್ಮವರು ಯಾರು ಎಂದು ಅರಿವಾಯಿತು. 2018ರಲ್ಲಿ ಚುನಾವಣಾ ಪ್ರಚಾರಕ್ಕೆ ಬಂದಿದ್ದ ಅಮಿತ್ ಶಾ, ಬಿಜೆಪಿಗೂ ಜನಾರ್ದನ ರೆಡ್ಡಿಗೂ ಸಂಬಂಧ ಇಲ್ಲ ಎಂದಿದ್ದರು. ಮನೆಯಲ್ಲಿ ಕುಳಿತು ಅದನ್ನು ನೋಡಿದೆ. ನನಗೆ ಮತ್ತು ನನ್ನ ಹೆಂಡತಿಗೆ ಅದನ್ನು ಕೇಳಿ ತೀವ್ರ ಬೇಸರವಾಯಿತು. ಎರಡು ದಿನಗಳ ನಂತರ ದೆಹಲಿಯಿಂದ ಕರೆ ಬಂತು. ‘ನಾನು ಆ ಹೇಳಿಕೆ ಕೊಡಬಾರದಿತ್ತು. ನನ್ನ ಹೇಳಿಕೆಯಿಂದ ಸಾಕಷ್ಟು ಡ್ಯಾಮೇಜ್ ಆಗಿದೆ. ಆದ್ರೆ ನಾನು ನಿಮ್ಮನ್ನ ಪಕ್ಷಕ್ಕೆ ಬರೋಕೆ ಹೇಳಿದ್ರೆ ತಪ್ಪಾಗುತ್ತೆ. ಆದರೆ ನೀವು ಶೀರಾಮುಲು ಜೊತೆ ನಿಲ್ಲಬೇಕು. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡೋಣ ಎಂದರು. ಆಗ ನಾನು ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಮಾತುಕೊಟ್ಟು ಬಂದಿದ್ದೆ ಎಂದು ನೆನಪಿಸಿಕೊಂಡರು.
ಶ್ರೀರಾಮುಲು ಅವರನ್ನು ನಾವು ಮನೆ ಮಗನ ಹಾಗೇ ನೋಡಿದ್ದೀವಿ. ರಾಮುಲು ಈಗ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಅವರನ್ನು ಅಧಿಕಾರ ತ್ಯಜಿಸಿ ನನ್ನ ಪಕ್ಷಕ್ಕೆ ಬನ್ನಿ ಎಂದು ನಾನು ಹೇಳಲಾರೆ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟಪಡಿಸಿದರು. ಮುಂದಿನ ದಿನಗಳಲ್ಲಿ ನನ್ನ ಪತ್ನಿಯೂ ನನ್ನ ಜೊತೆಗೆ ಇರುತ್ತಾರೆ. ಸಾರ್ವಜನಿಕ ಬದುಕಿನಲ್ಲಿ ಗುರುತಿಸಿಕೊಳ್ಳುತ್ತಾರೆ. ಸರ್ಕಾರ ನನ್ನನ್ನು ಹಿಂದೆಯೂ ಟಾರ್ಗೆಟ್ ಮಾಡಿದೆ, ಮುಂದೆಯೂ ಟಾರ್ಗೆಟ್ ಮಾಡಲಿದೆ ಎಂದು ವಿಶ್ಲೇಷಿಸಿದರು. ಪಕ್ಷದ ಪ್ರಣಾಳಿಕೆಯನ್ನು ಶೀಘ್ರ ಘೋಷಿಸುತ್ತೇನೆ ಎಂದರು.
ಬಿಜೆಪಿ ನಾಯಕರನ್ನು ನಾನು ಸಂಪರ್ಕಿಸಲು ಯತ್ನಿಸಿದ್ದು ನಿಜ. ಆದರೆ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಸುಮ್ಮನಾದೆ. ಆದರೆ ಮಾಧ್ಯಮಗಳಲ್ಲಿ ಬಿಜೆಪಿಯ ಕದ ತಟ್ಟುತ್ತಿರುವ ರೆಡ್ಡಿ ಎಂಬ ವರದಿಗಳು ಪ್ರಕಟವಾದವು. ನಾನು ಆತ್ಮಾಭಿಮಾನ ಇರುವ ವ್ಯಕ್ತಿ. ಎಂದಿಗೂ ಅಂಥ ಕೆಲಸ ಮಾಡಲಿಲ್ಲ ಎಂದು ಹೇಳಿದರು.
Karnataka mining baron and former Bharatiya Janata Party (BJP) leader Gali Janardhan Reddy, who has been caught in controversies in the past, floated his own party – Kalyana Rajya Pragati Paksha – on Sunday. Reddy also announced that he will contest from Gangavati constituency in upcoming assembly elections.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm