ಬ್ರೇಕಿಂಗ್ ನ್ಯೂಸ್
27-12-22 02:34 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.27 : ರಾಜ್ಯ ಸಚಿವ ಸಂಪುಟ ವಿಸ್ತರಣೆಗಾಗಿ ದೆಹಲಿ ತೆರಳಿದ್ದ ಮುಖ್ಯಮಂತ್ರಿ ಬೊಮ್ಮಾಯಿಗೆ ಸದ್ಯಕ್ಕೆ ಆ ಬಗ್ಗೆ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಸೋಮವಾರ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿರುವ ಮುಖ್ಯಮಂತ್ರಿ, ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬೊಮ್ಮಾಯಿ, ರಾಜ್ಯದಲ್ಲಿ ಎದ್ದಿರುವ ಮೀಸಲಾತಿ ಕೂಗು ಮತ್ತು ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಿದ್ದಾರೆ.
ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ ನಂತರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಮೀಸಲಾತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ಪಕ್ಷವು ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡುತ್ತದೆ ಎಂದು ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿಯ ಉನ್ನತ ನಾಯಕತ್ವದ ಜತೆ ಚರ್ಚಿಸಿದ್ದೇನೆ, ಪಕ್ಷದ ಮುಖಂಡರು ಶೀಘ್ರವೇ ತಮ್ಮ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಇದಕ್ಕೂ ಮುನ್ನ ಬೆಳಗಾವಿಯಲ್ಲಿ ಮಾತನಾಡಿದ್ದ ಬಸವರಾಜ ಬೊಮ್ಮಾಯಿ, ರಾಜ್ಯ ಸಂಪುಟ ವಿಸ್ತರಣೆ ಮತ್ತು 2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಕುರಿತು ರಾಷ್ಟ್ರೀಯ ನಾಯಕರ ಜೊತೆಗೆ ಚರ್ಚಿಸಲು ನವದೆಹಲಿಗೆ ತೆರಳುವುದಾಗಿ ತಿಳಿಸಿದ್ದರು. ಖಾಲಿ ಇರುವ ಐದು ಸ್ಥಾನಗಳಿಗೆ ಹಲವು ಆಕಾಂಕ್ಷಿಗಳಿದ್ದು, ಕೆಲವರನ್ನು ಕೈಬಿಟ್ಟು ಹೊಸ ಮುಖಗಳನ್ನು ಸೇರಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸಾಮಾಜಿಕ ನ್ಯಾಯ, ಮೀಸಲಾತಿ ಕೇಳುವ ಮಂದಿಗೂ ಸಚಿವ ಸ್ಥಾನ ಕೊಟ್ಟು ಬಾಯಿ ಮುಚ್ಚಿಸುವ ಯೋಜನೆ ಹಾಕಿದ್ದರು. ಆದರೆ ಚುನಾವಣೆ ಕಾಲದಲ್ಲಿ ಈ ರೀತಿ ಪ್ರಯೋಗ ಮಾಡುವುದಕ್ಕೆ ಕೇಂದ್ರ ನಾಯಕರು ಸಮ್ಮತಿ ನೀಡಿಲ್ಲ ಎನ್ನಲಾಗಿದೆ.
Karnataka chief minister Basvaraj Bommai, after consulting with the Bharatiya Janata Party (BJP) high command in Delhi on the issue of reservations, said that the top brass had told him to give justice to everyone who needed it. The CM added that they had further instructed him to stick to the party’s principles while giving justice to those who need it.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm