ಬ್ರೇಕಿಂಗ್ ನ್ಯೂಸ್
31-12-22 12:45 pm HK News Desk ಕರ್ನಾಟಕ
ತುಮಕೂರು, ಡಿ.31 : ಕಮಿಷನ್ ದಂಧೆ, ಸಾಲಗಾರರ ಕಾಟದಿಂದ ಬೇಸತ್ತು ಮತ್ತೊಬ್ಬ ಗುತ್ತಿಗೆದಾರ ಸಾವಿಗೆ ಶರಣಾದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ದೇವರಾಯನದುರ್ಗದ ಪ್ರವಾಸಿ ಮಂದಿರದಲ್ಲಿ ಲೋಕೋಪಯೋಗಿ ಗುತ್ತಿಗೆದಾರ ಪ್ರಸಾದ್ ಸಾಲಬಾದೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶುಕ್ರವಾರ ಬೆಳಗ್ಗೆ ಪ್ರವಾಸಿ ಮಂದಿರದಲ್ಲಿ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದ್ದು ಕ್ಯಾತ್ಸಂದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುತ್ತಿಗೆದಾರ ಪ್ರಸಾದ್ ಮಧುಗಿರಿ ಮೂಲದವರಾಗಿದ್ದು, ತುಮಕೂರಿನ ಸಪ್ತಗಿರಿ ಬಡವಾಣೆಯಲ್ಲಿ ವಾಸವಾಗಿದ್ದರು. ಲೋಕೋಪಯೋಗಿ ಇಲಾಖೆಯಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿಸಿದ್ದರು. ಆದರೆ ಇಲಾಖೆಯಲ್ಲಿ ಸರಿಯಾದ ಸಮಯಕ್ಕೆ ಬಿಲ್ ಪಾವತಿಯಾಗದ ಹಿನ್ನೆಲೆ ಒಂದೂವರೆ ಕೋಟಿ ರೂ. ಸಾಲ ಮಾಡಿಕೊಂಡಿದ್ದರು.
ಪ್ರತಿನಿತ್ಯ ಸಾಲ ಕೊಟ್ಟವರು ಮನೆ ಹತ್ತಿರ ಬಂದು ಜಗಳ ಮಾಡುತ್ತಿದ್ದರು. ಇದರಿಂದ ಮನನೊಂದು ದೇವರಾಯದುರ್ಗದ ಪ್ರವಾಸಿ ಮಂದಿರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇದೇ ರೀತಿ ಸಾಲ ಮಾಡಿಕೊಂಡ ಗುತ್ತಿಗೆದಾರರು ಸಾಲಗಾರರ ಕಾಟ ತಾಳಲಾರದೆ ಊರು ಬಿಟ್ಟವರಿದ್ದಾರೆ. ಸರ್ಕಾರದ 40% ಕಮಿಷನ್ ಹಾಗೂ ಸಾಲಗಾರರ ಕಾಟಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಗುತ್ತಿಗೆದಾರರ ಸಂಘದವರು ಆರೋಪಿಸಿದ್ದಾರೆ.
ಆರು ತಿಂಗಳ ಹಿಂದೆ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಕಮಿಷನ್ ದಂಧೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಮತ್ತೊಬ್ಬ ಗುತ್ತಿಗೆದಾರ ಸಾವಿಗೆ ಶರಣಾಗಿರುವುದು ಬಿಜೆಪಿ ಸರ್ಕಾರದ ಮೇಲೆ ಗಂಭೀರ ಆರೋಪ ಕೇಳಿಬರುವಂತಾಗಿದೆ. 40 ಶೇ. ಕಮಿಷನ್ ಕೇಳುವ ಕೆಲ ಶಾಸಕರು ಮತ್ತು ಅಧಿಕಾರಿಗಳಿಂದಲೇ ಈ ರೀತಿ ಗುತ್ತಿಗೆದಾರರು ಸಾವಿಗೀಡಾಗಲು ಕಾರಣ. ಕಮಿಷನ್ ಕೊಟ್ರು ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಬಿಲ್ ಮಾಡಿ ಕೊಡುತ್ತಿಲ್ಲ ಎಂದು ಗುತ್ತಿದಾರರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
Another contractor in Karnataka has committed suicide. TN Prasad, a 50-year-old contractor, died by suicide in Tumkuru district of Karnataka. Unable to bear the losses, and constant harassment from loan sharks, Prasad allegedly hanged himself. The friends of the deceased also claimed that his bills were not cleared by the government. "They were pending for very long time. He had sold his newly constructed house a couple of months ago to repay loans," said an associate of Prasad.
28-05-26 04:34 pm
HK News Staffer
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm