ರಾಜ್ಯಾದ್ಯಂತ ಧಾರಾಕಾರ ಮಳೆ - ಜನಜೀವನ ಅಸ್ತವ್ಯಸ್ತ

04-08-20 12:19 pm       Bangalore Correspondent   ಕರ್ನಾಟಕ

ರಾಜ್ಯಾದ್ಯಂತ ಮಳೆ ಅರ್ಭಟ ಜೋರಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಜೋರು ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ.

ಬೆಂಗಳೂರು(ಆ.04): ರಾಜ್ಯಾದ್ಯಂತ ಮಳೆ ಅರ್ಭಟ ಜೋರಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಜೋರು ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ.

ಅವಧಿಗೂ ಮುನ್ನವೇ ಮುಂಗಾರು ರಾಜ್ಯವನ್ನು ಪ್ರವೇಶಿಸಿತ್ತು. ಆರಂಭದಿಂದಲೂ ಸಾಧಾರಣವಾಗಿದ್ದ ಮಳೆ ಈಗ ಜೋರಾಗಿ ಸುರಿಯುತ್ತಿದೆ. ಕರಾವಳಿ ಸೇರಿದಂತೆ ಮಲೆನಾಡು, ಉತ್ತರ ಒಳನಾಡಿನಲ್ಲಿಯೂ ಮಳೆ ಹೆಚ್ಚಾಗಿದೆ. ಈಗಾಗಲೇ ಮಳೆಯಿಂದಾಗಿ ಕಂಗಾಲಾಗಿರುವ ಕರಾವಳಿ ಭಾಗದಲ್ಲಿ ಇನ್ನೂ ಎರಡು ಮೂರು ಒಂದು ವಾರಗಳ ಕಾಲ ಮಳೆ ಮುಂದುವರಿಯಲಿದೆ. ಹೀಗಾಗಿ ಯಲ್ಲೋ ಅಲರ್ಟ್​ ಘೋಷಿಸಿದ್ದಾರೆ.

ಶಿವಮೊಗ್ಗ, ಮಂಗಳೂರು, ಬೆಂಗಳೂರು, ಚಿಕ್ಕಮಗಳೂರು, ಕೋಲಾರ, ಮೈಸೂರು ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯುತ್ತಿದೆ. ಜೋರು ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಇನ್ನು, ಆಗಸ್ಟ್ ಮತ್ತು ಸೆಪ್ಟೆಂಬರ್​​ನಲ್ಲಿ ದೇಶಾದ್ಯಂತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಮಳೆಗಾಲದ ನಾಲ್ಕು ತಿಂಗಳ ದ್ವಿತೀಯಾರ್ಧದಲ್ಲಿ ದೀರ್ಘಕಾಲೀನ ಸರಾಸರಿಯ ಶೇ.97ರಷ್ಟು ಮಳೆಯಾಗುವ ಸಂಭವವಿದೆ ಹವಾಮಾನ ಇಲಾಖೆ ತಿಳಿಸಿದೆ.