ಬ್ರೇಕಿಂಗ್ ನ್ಯೂಸ್
03-01-23 10:41 pm HK News Desk ಕರ್ನಾಟಕ
ವಿಜಯಪುರ, ಜ.3 : ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಅಂತ್ಯ ಸಂಸ್ಕಾರವನ್ನು ಅವರ ಇಚ್ಛೆಯಂತೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಜ್ಞಾನಯೋಗಾಶ್ರಮದಲ್ಲಿ ನೆರವೇರಿಸಲಾಯಿತು. ಯಾವುದೇ ಧಾರ್ಮಿಕ ವಿಧಿ ವಿಧಾನವಿಲ್ಲದೇ ಶ್ರೀಗಳ ಅಂತ್ಯ ಸಂಸ್ಕಾರ ನೇರವೇರಿಸಲಾಗಿದೆ.
ಅಂತ್ಯ ಸಂಸ್ಕಾರಕ್ಕೂ ಮುನ್ನ ಶ್ರೀಗಳ ಪಾರ್ಥಿವ ಶರೀರವನ್ನು ಅಪಾರ ಭಕ್ತಸಾಗರದ ನಡುವೆ ಅಂತ್ಯ ಸಂಸ್ಕಾರದ ಸ್ಥಳಕ್ಕೆ ತೆರೆದ ವಾಹನದಲ್ಲಿ ಕರೆದೊಯ್ಯಲಾಯಿತು. ದಾರಿ ಉದ್ದಕ್ಕೂ ಸಾವಿರಾರು ಜನರು ಸೇರಿದ್ದು ಕಣ್ಣೀರ ವಿದಾಯ ಹೇಳುತ್ತಿದ್ದರು. ಪಾರ್ಥಿವ ಶರೀರವಿದ್ದ ವಾಹನದ ಮೇಲೆ ಹೂವಿನ ಮಳೆಯನ್ನು ಸುರಿಸಿ ಶತಮಾನದ ಸಂತನಿಗೆ ಅಶ್ರುತರ್ಪಣಗೈದರು.
ಬೆಳಗ್ಗಿನಿಂದಲೂ ಜ್ಞಾನಯೋಗಿಯ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಜನಸಾಗರವೇ ಹರಿದು ಬಂದಿತ್ತು. ಲಕ್ಷ ಲಕ್ಷ ಜನರು ಆಗಮಿಸಿ, ಶ್ರೀಗಳ ಅಂತಿಮ ದರ್ಶನ ಪಡೆದರು. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕರು, ಸಚಿವರು, ವಿವಿಧ ಮಠಾಧೀಶರು ಪಾಲ್ಗೊಂಡು ಸಿದ್ದೇಶ್ವರ ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದರು.
ಸಿಎಂ ಬಸವರಾಜ ಬೊಮ್ಮಾಯಿ ಸಿದ್ದೇಶ್ವರ ಸ್ವಾಮೀಜಿ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ, ಸಂಜೆ 5.15ರ ವೇಳೆಗೆ ಪೊಲೀಸ್ ಬ್ಯಾಂಡ್ ನೊಂದಿಗೆ ಕುಶಲ ತೋಪು ಸಿಡಿಸಿ ಸರ್ಕಾರಿ ಗೌರವ ಸಲ್ಲಿಸಲಾಯಿತು. ಬಳಿಕ ಶ್ರೀಗಳ ಕುಟುಂಬಸ್ಥರು ಚಿತೆಗೆ ಬೆಂಕಿ ಇರಿಸುವ ಮೂಲಕ ಅಂತ್ಯ ಸಂಸ್ಕಾರ ನೆರವೇರಿಸಿದರು.
The mortal remains of Siddeshwar Swami, the seer of the Jnanayogashrama here, who was known for his scholarly discourses and powerful oratory, was consigned to flames with full state honours on Tuesday, after lakhs of people paid last respects to the spiritual leader. The 82-year old seer was suffering from age-related ailments for some time, and had breathed his last on Monday evening. Lakhs of people thronged this district headquarter town from various parts of the state, some also from neighbouring states to pay their last respects to seer, whom they regarded as "Nadedaduva Devaru" (walking god).
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 11:06 pm
Mangalore Correspondent
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm