ಶಾಲಾ ಪಠ್ಯದಲ್ಲಿ ಸಿದ್ಧೇಶ್ವರ ಸ್ವಾಮೀಜಿ ಜೀವನಗಾಥೆ: ಸಿ.ಎಂ ಬೊಮ್ಮಾಯಿ ಟ್ವೀಟ್ 

04-01-23 01:57 pm       Bangalore Correspondent   ಕರ್ನಾಟಕ

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು, ಜ.4 : ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು' ಎಂದು ಟ್ವೀಟ್ ಮಾಡಿದ್ದಾರೆ.

Siddheshwar Swami of Jnanayogashrama passes away | Deccan Herald

ಕನ್ನಡನಾಡು ಕಂಡು ಅಪರೂಪದ ಸಂತ, ಭಕ್ತರ ಪಾಲಿನ 'ನಡೆದಾಡುವ ದೇವರು' ಎಂದೇ ಪ್ರಸಿದ್ಧವಾಗಿದ್ದ ಆಧ್ಯಾತ್ಮಿಕ ಚಿಂತಕ, ಪ್ರವಚನಕಾರ ಸಿದ್ಧೇಶ್ವರ ಸ್ವಾಮೀಜಿ ಅವರು ಸೋಮವಾರ ಸಂಜೆ ಅಸ್ತಂಗತರಾದರು.

ಸ್ವಾಮೀಜಿ ಅವರ ಅಂತ್ಯಕ್ರಿಯೆಯು ವಿಜಯಪುರದ ಆಶ್ರಮದ ಆವರಣದಲ್ಲಿ ಮಂಗಳವಾರ ರಾತ್ರಿ ಅವರ ಅಂತಿಮ ಇಚ್ಛೆಯಂತೆ ಅಗ್ನಿಸ್ಪರ್ಶದೊಂದಿಗೆ ನೆರವೇರಿತು.

ಸೈನಿಕ ಶಾಲೆಯ ಆವರಣದಲ್ಲಿ ಶ್ರೀಗಳ ಅಂತಿಮ ದರ್ಶನ ಮುಗಿದ ಬಳಿಕ ಪೊಲೀಸರು ಮೂರು ಸುತ್ತು ಕುಶಾಲತೋಪುಗಳನ್ನು ಹಾರಿಸಿ ಸರ್ಕಾರಿ ಗೌರವ ಅರ್ಪಿಸಿದರು. ಪುಷ್ಪಗಳಿಂದ ವಿಶೇಷವಾಗಿ ಅಲಂಕರಿಸಿದ್ದ ತೆರೆದ ವಾಹನದಲ್ಲಿ ಜ್ಞಾನ ಯೋಗಾಶ್ರಮದವರೆಗೆ ಶ್ರೀಗಳ ಅಂತಿಮಯಾತ್ರೆ ನಡೆಯಿತು.

Siddheshwar Swamiji life history to be added in school text books says CM Bommai.