ಬಿಜೆಪಿಗೆ ಸಡ್ಡು ಹೊಡೆದ ಜನಾರ್ದನ ರೆಡ್ಡಿಗೆ ಸಂಕಷ್ಟ ; ಅಕ್ರಮ ಆಸ್ತಿ ಮುಟ್ಟುಗೋಲಿಗೆ ಮುಂದಾದ ಸಿಬಿಐ ಅಧಿಕಾರಿಗಳು 

05-01-23 12:20 pm       Bangalore Correspondent   ಕರ್ನಾಟಕ

ಬಿಜೆಪಿಗೆ ಸಡ್ಡು ಹೊಡೆದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸಂಕಷ್ಟ ಎದುರಾಗಿದೆ. ಅಕ್ರಮ ಆಸ್ತಿ ಜಪ್ತಿಗೆ ರಾಜ್ಯ ಸರಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 

ಬೆಂಗಳೂರು, ಜ.5: ಬಿಜೆಪಿಗೆ ಸಡ್ಡು ಹೊಡೆದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸಂಕಷ್ಟ ಎದುರಾಗಿದೆ. ಅಕ್ರಮ ಆಸ್ತಿ ಜಪ್ತಿಗೆ ರಾಜ್ಯ ಸರಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 

ಅಕ್ರಮ ಹಣದ ಮೂಲದಿಂದ ಖರೀದಿಸಿದ್ದ ಆಸ್ತಿಯನ್ನು ಜಪ್ತಿ ಮಾಡಲು ಅನುಮತಿ ನೀಡುವಂತೆ ರಾಜ್ಯ ಸರಕಾರಕ್ಕೆ ಸಿಬಿಐ ಕಳೆದ ವರ್ಷ ಮನವಿ ಮಾಡಿದ್ದರೂ ಸಮ್ಮತಿ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಆಸ್ತಿಯನ್ನು ಜಪ್ತಿ ಮಾಡಲು ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡುವಂತೆ ಕೋರಿ ಕೇಂದ್ರ ತನಿಖಾ ದಳ (ಸಿಬಿಐ) ಕರ್ನಾಟಕ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದೆ. ಕ್ರಿಮಿನಲ್ ಕಾನೂನು (ತಿದ್ದುಪಡಿ) ಸುಗ್ರೀವಾಜ್ಞೆ, 1994 ರ ಸೆಕ್ಷನ್ 3, 4 ಮತ್ತು 6ರ ಅಡಿಯಲ್ಲಿ ಸ್ವಾಧೀನಪಡಿಸಿರುವ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಒಪ್ಪಿಗೆ ನೀಡುವಂತೆ ಈ ಹಿಂದೆ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಸಿಬಿಐ ಮನವಿ ಸಲ್ಲಿಸಿತ್ತು.

After Furore, Karnataka High Court Expunges Controversial Remarks by Judge  Dixit on Rape Victim

ಭ್ರಷ್ಟಾಚಾರ ತಡೆ ಕಾಯ್ದೆ, ಎಂಎಂಡಿಆರ್ ಕಾಯಿದೆ ಮತ್ತು ಕರ್ನಾಟಕ ಅರಣ್ಯ ಕಾಯ್ದೆಯಡಿ 2012ರಲ್ಲಿ ದಾಖಲಾದ ಅಪರಾಧ ಪ್ರಕರಣದಲ್ಲಿ ಅಕ್ರಮ ಗಣಿಗಾರಿಕೆ ಕುರಿತು ಸುಪ್ರೀಂ ಕೋರ್ಟ್ ಆದೇಶ ಪಾಲಿಸಲಾಗಿದೆ. ರೆಡ್ಡಿ ಮತ್ತು ಇತರರು ಬಳ್ಳಾರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದ ಅಕ್ರಮ ಗಣಿಗಾರಿಕೆ ನಡೆಸಿದ್ದು 6.05 ಲಕ್ಷ ಟನ್ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡುವ ಮೂಲಕ ಬೊಕ್ಕಸಕ್ಕೆ 198 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ ಎಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ತಿಳಿಸಿತ್ತು. ಈ ನಡುವೆ, ಕಾನೂನಿನಿಂದ ತಪ್ಪಿಸಿಕೊಳ್ಳಲು ರೆಡ್ಡಿ ಅವರು ಆಸ್ತಿಯನ್ನು ಮಾರಾಟ ಮಾಡಲು ಪ್ರಾರಂಭಿಸಿದ್ದಾರೆ ಎಂದು ವಿಚಾರಣೆ ವೇಳೆ ಸಿಬಿಐ ಅಧಿಕಾರಿಗಳು ತಿಳಿಸಿದ್ದರು. 

Why a Revamping of the CBI Is Necessary

ಜನಾರ್ದನ ರೆಡ್ಡಿ ತೆಲಂಗಾಣ, ಆಂಧ್ರಪ್ರದೇಶದಲ್ಲು ಅಕ್ರಮ ಆಸ್ತಿ ಹೊಂದಿದ್ದಾರೆ ಎನ್ನುವ ಆರೋಪ ಮಾಡಲಾಗಿತ್ತು. ಇದೇ ವೇಳೆ, 19.94 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲು ಒಪ್ಪಿಗೆ ನೀಡುವಂತೆ ರಾಜ್ಯ ಸರಕಾರಕ್ಕೆ ಸಿಬಿಐ ಮನವಿ ಸಲ್ಲಿಸಿತ್ತು. ಆದರೆ, ಅದನ್ನು ಸರಕಾರ ಇನ್ನೂ ಪರಿಗಣಿಸಿಲ್ಲ. ಈಗ ಹೊಸ ಪಕ್ಷ ಸ್ಥಾಪಿಸಿ ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಸಡ್ಡು ಹೊಡೆಯಲು ಹುನ್ನಾರ ನಡೆಸಿರುವ ನಡುವೆಯೇ ಸಿಬಿಐ ಗುಮ್ಮ ಎದ್ದು ಕುಳಿತಿದೆ. ಅಕ್ರಮ ಆಸ್ತಿ ಮುಟ್ಟುಗೋಲು ಹಾಕುವ ನೆಪದಲ್ಲಿ ಹೈಕೋರ್ಟ್ ಕದ ಬಡಿದಿದೆ.

The CBI has moved a petition before the High Court seeking a direction to the state government to consider its representation for attachment of properties held by former minister Gali Janardhana Reddy and his family members.