ಯಲ್ಲಮ್ಮ ದೇವಿಯ ದರ್ಶನಕ್ಕೆ ಹೊರಟಿದ್ದ ವಾಹನ ಭೀಕರ ಅಪಘಾತ ; 6 ಮಂದಿ ಸಾವು, ಬೆಳಗಾವಿಯಲ್ಲಿ ದುರಂತ ! 

05-01-23 12:36 pm       HK News Desk   ಕರ್ನಾಟಕ

ಸವದತ್ತಿ ಯಲ್ಲಮ್ಮ ದೇವಿಯ ದರ್ಶನಕ್ಕೆ ಹೊರಟಿದ್ದ ವಾಹನ ಭೀಕರ ಅಪಘಾತಕ್ಕೆ ತುತ್ತಾಗಿ ಆರು ಜನ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ಜ.4 ರ ಮಧ್ಯರಾತ್ರಿ ನಡೆದಿದೆ.

ಬೆಳಗಾವಿ, ಜ.5: ಸವದತ್ತಿ ಯಲ್ಲಮ್ಮ ದೇವಿಯ ದರ್ಶನಕ್ಕೆ ಹೊರಟಿದ್ದ ವಾಹನ ಭೀಕರ ಅಪಘಾತಕ್ಕೆ ತುತ್ತಾಗಿ ಆರು ಜನ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ಜ.4 ರ ಮಧ್ಯರಾತ್ರಿ ನಡೆದಿದೆ.

ವಾಹನವು ಆಲದ ಮರಕ್ಕೆ ಢಿಕ್ಕಿ ಹೊಡೆದಿದ್ದರಿಂದ ಅದರಲ್ಲಿದ್ದ ಐವರು ಭಕ್ತರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Six die after vehicle with devotees rams into tree in Karnataka - Lagatar  English

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಅವರು ಘಟನೆ ನಡೆದ ಸ್ಥಳದ ಪರಿಶೀಲನೆ ನಡೆಸಿದರು. ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಐದು ಲಕ್ಷ ಪರಿಹಾರ: ಬೆಳಗಾವಿ, ರಾಮದುರ್ಗ ತಾಲ್ಲೂಕಿನ ಚಿಂಚನೂರ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟಿರುವ ಆರು ಜನರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಪ್ರಕಟಿಸಿದ್ದಾರೆ.

Six devotees who were travelling to a temple in Karnataka’s Savadatti town died after their pick-up van hit a tree. The incident happened in Hulkunda village of Belagavi district. A total of 16 others, who were injured in the accident, are currently undergoing treatment.