ಬ್ರೇಕಿಂಗ್ ನ್ಯೂಸ್
07-01-23 06:33 pm HK News Desk ಕರ್ನಾಟಕ
ಮೈಸೂರು, ಜ.7: ಬಿಜೆಪಿ ಎಂದೂ ಕೂಡ ದಲಿತರ ವಿರೋಧಿಯಾಗಿಲ್ಲ ಆದರೂ ಕಾಂಗ್ರೆಸ್ ನಾಯಕರು ಬಿಜೆಪಿ ದಲಿತ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.
ಮೈಸೂರಿನ ಲಲಿತಮಹಲ್ ಪ್ಯಾಲೇಸ್ ನಲ್ಲಿ ನಡೆದ ಬಿಜೆಪಿ ಎಸ್ ಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷ ದಲಿತರನ್ನು ಓಟ್ ಬ್ಯಾಂಕ್ ಮಾಡಿಕೊಂಡು ಬಂದಿತ್ತು.
ದಲಿತರ ಉದ್ಧಾರ ಮಾಡಲು ಕಾಂಗ್ರೆಸ್ ಮುಂದಾಗಲಿಲ್ಲ. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ಸಿಗರು. ಅಂಬೇಡ್ಕರ್ ಬದುಕಿದ್ದಷ್ಟು ದಿನ ಅವರನ್ನು ಕಾಂಗ್ರೆಸ್ ನಿರಂತರವಾಗಿ ತುಳಿಯುವ ಕೆಲಸ ಮಾಡಿತು. ಅವರ ನಿಧನಾನಂತರ ದಲಿತರ ಓಟ್ ಗಾಗಿ ಅಂಬೇಡ್ಕರ್ ಗುಣಗಾನ ಮಾಡಲಾರಂಭಿಸಿತು ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಎಂದೂ ಕೂಡ ದಲಿತರ ವಿರೋಧಿಯಾಗಿಲ್ಲ. ಅಂಬೇಡ್ಕರ್ ಗೆ ಅಪಮಾನ ಆಗುವ ರೀತಿ ಬಿಜೆಪಿ ನಡೆದುಕೊಂಡಿಲ್ಲ. ದಲಿತರ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ದಲಿತರ ಉದ್ಧಾರಕ್ಕಾಗಿ ಬಿಜೆಪಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದರು.
ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗುವ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ ತುಷ್ಟೀಕರಣ ರಾಜಕೀಯ ಮಾಡುತ್ತಿರುವವರು ಏಕರೂಪ ನಾಗರಿಕ ಸಂಹಿತೆ ಜಾರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಕೂಡ ಏಕರೂಪ ನಾಗರಿಕ ಸಂಹಿತೆ ಜಾರಿಯ ಪರವಿದ್ಧರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸಹ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಪ್ರಯತ್ನಿಸಿದ್ಧರು ಎಂದು ಹೇಳಿದರು.
ನಾನು ಸಿ.ಟಿ. ರವಿ, ಸ್ಯಾಂಟ್ರೋ ರವಿ ಯಾರೋ ಗೊತ್ತಿಲ್ಲ
ಸ್ಯಾಂಟ್ರೋ ರವಿ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈಗ ಯಾರು ಎಲ್ಲಿ ಬೇಕಾದರೂ ಯಾರ ಜೊತೆಗೆ ಬೇಕಾದರೂ ಪೋಟೊ ತೆಗೆಸಿಕೊಳ್ತಾರೆ. ಸಾರ್ವಜನಿಕ ಜೀವನದಲ್ಲಿ ಇರುವವರು ಹೋದ ಕಡೆಯೆಲ್ಲ ಸೆಲ್ಪಿಗೆ ಫೋಸ್ ಕೊಟ್ಟಿರ್ತಾರೆ.ಪೋಟೊ ತೆಗೆಸಿಕೊಂಡವರ ಜೊತೆಗೆಲ್ಲ ಸಂಬಂಧ ಕಲ್ಪಿಸುವುದು ಸರಿಯಲ್ಲ.ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿದ ಐಎಂಎ ಹಗರಣದ ಎ ಒನ್ ಆರೋಪಿ ಜೊತೆ ಕುಮಾರಸ್ವಾಮಿ ಪೋಟೊ ತೆಗೆಸಿಕೊಂಡಿದ್ದಾರೆ.ಹಾಗಂತ ಕುಮಾರಸ್ವಾಮಿ ಅವರನ್ನು ಐಎಂಎ ಹಗರಣದ ಎ ಟು ಆರೋಪಿ ಎನ್ನಲಾಗುತ್ತಾ ಎಂದು ಪ್ರಶ್ನಿಸಿದರು.
ಹಲವು ಸಚಿವರು ಶಾಸಕರು ತಮಗೆ ಸಂಬಂಧಿಸಿದ ಆಕ್ಷೇಪಾರ್ಹ ಸುದ್ದಿಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿಪಕ್ಷ ನಾಯಕರುಗಳು ಕೂಡ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಯಾವ್ಯಾವ ವಿಚಾರಕ್ಕೆ ತಡೆಯಾಜ್ಞೆ ತಂದಿದ್ದಾರೋ ಗೊತ್ತಿಲ್ಲ ಎಂದರು.
ಬಿಜೆಪಿ ಹಳೇ ಮೈಸೂರು ಭಾಗ ಹೊರತು ಪಡಿಸಿ ರಾಜ್ಯದ ಉಳಿದೆಡೆ ಪ್ರಬಲವಾಗಿದೆ. ಹಳೇ ಮೈಸೂರು ಭಾಗದಲ್ಲಿ ಲೋಕಸಭಾ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಬಿಜೆಪಿಗೆ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆಯಾಗುತ್ತಿದೆ. ಹಳೇ ಮೈಸೂರು ಭಾಗದಲ್ಲಿ 59 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿ 15-20 ಸ್ಥಾನಗಳಿಗೆ ಸೀಮಿತವಾಗುತ್ತಿದೆ. ಹಾಗಾಗಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ 59 ಕ್ಷೇತ್ರಗಳನ್ನೂ ಗೆಲ್ಲಲು ಪ್ರಯತ್ನಿಸುತ್ತೇವೆ. ಅಂತಿಮವಾಗಿ ಮತದಾರರೇ ಮಾಲಕರು, ಅವರು ನಿರ್ಣಯಿಸಿ ತೀರ್ಪು ನೀಡಬೇಕಿದೆ. ನಾವು ಯಾವುದೇ ಪಕ್ಷದ ಪ್ರಾಬಲ್ಯವನ್ನು ಮುರಿಯಲು ಬಂದಿಲ್ಲ, ನಾವು ಬೆಳೆಯಲು ಬಂದಿದ್ದೇವೆ ಎಂದರು.
Congress is running politics in the name of Ambedkar, but they made him lose elections, slams CT Ravi in Mysuru.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm