ಬ್ರೇಕಿಂಗ್ ನ್ಯೂಸ್
11-01-23 06:58 pm HK News Desk ಕರ್ನಾಟಕ
ಮೈಸೂರು, ಜ.11 : ತಲೆ ಮರೆಸಿಕೊಂಡಿರುವ ಸ್ಯಾಂಟ್ರೋ ರವಿ ಬಂಧನಕ್ಕೆ 3-4 ತಂಡ ರಚನೆ ಮಾಡಿದ್ದು, ಶೀಘ್ರವೇ ಆರೋಪಿಯನ್ನ ಬಂಧಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಡಿಜಿಪಿ ಅಲೋಕ್ ಕುಮಾರ್ ಮೈಸೂರಿನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಇಂದು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ದೂರುದಾರೆ ಮತ್ತು ಅವರ ಸಹೋದರಿಯಿಂದ ಮಾಹಿತಿ ಪಡೆದ ಎಡಿಜಿಪಿ ಅಲೋಕ್ ಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
''ಸ್ಯಾಂಟ್ರೋ ರವಿ ವಿರುದ್ಧ ಕಳೆದ ಎಂಟು ದಿನಗಳ ಹಿಂದೆ ಮೈಸೂರಿನ ವಿಜಯನಗರದಲ್ಲಿ ಅತ್ಯಾಚಾರ ಮತ್ತು ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಈ ಬಗ್ಗೆ ತನಿಖೆ ಆರಂಭವಾಗಿದೆ. ಸ್ಯಾಂಟ್ರೋ ರವಿ ಬಂಧನಕ್ಕೆ ಮೂರ್ನಾಲ್ಕು ತಂಡ ಕೆಲಸ ಮಾಡುತ್ತಿದೆ. ಆರೋಪಿ ತಲೆ ಮರೆಸಿಕೊಂಡಿದ್ದು, ಶೀಘ್ರವೇ ಆತನನ್ನ ಬಂಧಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ'' ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.
''ಈಗಾಗಲೇ ಸ್ಯಾಂಟ್ರೋ ರವಿ ವಾಸವಿದ್ದ ಬೆಂಗಳೂರಿನ ಆರ್ಆರ್ ನಗರದ ಮನೆಯನ್ನ ಪರಿಶೀಲನೆ ಮಾಡಲಾಗಿದ್ದು, ಆರೋಪಿಯ ಎಲ್ಲ ಆಸ್ತಿ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆತನ ಎಲ್ಲಾ ಬ್ಯಾಂಕ್ ಅಕೌಂಟ್ಗಳನ್ನ ಪರಿಶೀಲನೆ ಮಾಡಲಾಗುತ್ತಿದ್ದು, ಮನಿ ಲ್ಯಾಂಡ್ರಿಂಗ್ ಕಾನೂನನ್ನು ಉಲ್ಲಂಘನೆ ಮಾಡಿದ್ದಾನೋ ಎಂಬ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಈ ಮನಿ ಲ್ಯಾಂಡ್ರಿಂಗ್ ಕಾನೂನು ಉಲ್ಲಂಘನೆ ಆಗಿದ್ದರೆ, ಮನಿ ಲ್ಯಾಂಡ್ರಿಂಗ್ ಕೇಸ್ ಅನ್ನು ಹಾಕುತ್ತೇವೆ'' ಎಂದು ಎಡಿಜಿಪಿ ಹೇಳಿದ್ದಾರೆ. ''ಸ್ಯಾಂಟ್ರೋ ರವಿ ಬಳಸುತ್ತಿದ್ದ ಎಲ್ಲಾ ಮೊಬೈಲ್ಗಳು ಸ್ವಿಚ್ಡ್ ಆಫ್ ಆಗಿವೆ. ಆತನ ಬಂಧನಕ್ಕೆ ಪೊಲೀಸರು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದು, ಶೀಘ್ರವೇ ಆತನನ್ನು ಬಂಧಿಸಲಾಗುವುದು'' ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.
ಪೊಲೀಸರ ಮೇಲೆ ಯಾವುದೇ ಒತ್ತಡ ಇಲ್ಲ :
ಸ್ಯಾಂಟ್ರೋ ರವಿ ಪ್ರಕರಣದ ಬಗ್ಗೆ ಪೊಲೀಸರ ಮೇಲೆ ಯಾವುದೇ ಒತ್ತಡ ಇಲ್ಲ. ಅದೇ ಕಾರಣಕ್ಕೆ ನಾನು ಮೈಸೂರಿಗೆ ಬಂದು ಮಾಹಿತಿ ಪಡೆದಿದ್ದೇನೆ. ಈತನ ಬಂಧನಕ್ಕೆ ಮೈಸೂರು, ಮಂಡ್ಯ, ರಾಮನಗರ ಹಾಗೂ ಬೆಂಗಳೂರಿನಲ್ಲಿ ಹುಡುಕಾಟ ಆರಂಭಿಸಿದ್ದು, ಮೊಬೈಲ್ ಸ್ವಿಚ್ಡ್ ಆಫ್ ಆಗಿರುವುದರಿಂದ ಆತನ ಪತ್ತೆಗೆ ಸ್ವಲ್ಪ ಕಷ್ಟ ಆಗಿದೆ. ಆದರೂ ಶೀಘ್ರವೇ ಬಂಧಿಸುತ್ತೇವೆ ಎಂದು ಎಡಿಜಿಪಿ ಇದೇ ವೇಳೆ ಸ್ಪಷ್ಟಪಡಿಸಿದರು.
''ಸ್ಯಾಂಟ್ರೋ ರವಿ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದ್ದು, ಆತನ ಬ್ಯಾಂಕ್ ಖಾತೆಯನ್ನ ಜಪ್ತಿ ಮಾಡುವ ಬಗ್ಗೆ ಇಂದು ಪರಿಶೀಲನೆ ಮಾಡಲಾಗಿದೆ. ಈ ಬಗ್ಗೆ ಸ್ಯಾಂಟ್ರೋ ರವಿ ಎಷ್ಟು ಬ್ಯಾಂಕ್ ಖಾತೆ ಹೊಂದಿದ್ದಾನೆ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು, ಇದರ ಜೊತೆಗೆ ಆತನ ಆಸ್ತಿಯ ಜಪ್ತಿ ಬಗ್ಗೆಯೂ ಶೀಘ್ರವೇ ನಿರ್ಧಾರ ಮಾಡಲಾಗುವುದು'' ಎಂದು ಇದೇ ಸಂದರ್ಭದಲ್ಲಿ ಅಲೋಕ್ ಕುಮಾರ್ ತಿಳಿಸಿದರು.
Four police team formed to arrest Santro Ravi as ADGP Alok in Mysuru.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm