ಬ್ರೇಕಿಂಗ್ ನ್ಯೂಸ್
12-01-23 08:34 pm Bangalore Correspondent ಕರ್ನಾಟಕ
ಬೆಂಗಳೂರು, ಜ.12 : 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂಬ ನಿರ್ಬಂಧ ರಾಜ್ಯದಲ್ಲಿದೆ. ಅದನ್ನು ಸಡಿಲಿಸಿ ವಯಸ್ಸಿನ ಮಿತಿಯನ್ನು 18 ವರ್ಷಕ್ಕೆ ಇಳಿಕೆ ಮಾಡಲು 1967ರ ಕರ್ನಾಟಕ ಅಬಕಾರಿ ಪರವಾನಗಿ ನಿಯಮಕ್ಕೆ ತಿದ್ದುಪಡಿ ತರಲಾಗುತ್ತಿದೆ.
ಅಬಕಾರಿ ನಿಯಮಗಳಿಗೆ ತಿದ್ದುಪಡಿ ತರಲು ಇಲಾಖೆ ಸಿದ್ಧಪಡಿಸಿರುವ ಕರಡು ಪ್ರತಿಯನ್ನು ಜನವರಿ 9ರಂದು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಅಬಕಾರಿ ಪರವಾನಗಿ (ಸಾಮಾನ್ಯ ಷರತ್ತುಗಳು) ನಿಯಮಗಳು-1967ರ ಸೆಕ್ಷನ್ 10 (1) (ಇ) ಅಡಿಯಲ್ಲಿ ಮದ್ಯ ಖರೀದಿದಾರನ ವಯಸ್ಸಿಗೆ ವಿಧಿಸಿದ್ದ ನಿರ್ಬಂಧವನ್ನು ಸಡಿಲಿಸುವ ಉಲ್ಲೇಖ ತಿದ್ದುಪಡಿ ಕರಡು ಪ್ರತಿಯಲ್ಲಿದೆ.
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಸೆಕ್ಷನ್ 10 (1) (ಇ)ನಲ್ಲಿ ಹೇಳಲಾಗಿತ್ತು. ಅದನ್ನು ಬದಲಿಸಿ, '18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ' ಎಂಬುದನ್ನು ಸೇರಿಸುವ ಪ್ರಸ್ತಾಪವನ್ನು ಹೊಸತಾಗಿ ಸೇರಿಸಲಾಗಿದೆ.
ಹೆದ್ದಾರಿಯಿಂದ 500 ಮೀ. ಅಂತರ
ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು 5,000ಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ಗ್ರಾಮ ಪಂಚಾಯಿತಿಗಳನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳ ಅಂಚಿನಿಂದ 500 ಮೀಟರ್ ವರೆಗಿನ ಪ್ರದೇಶದಲ್ಲಿ ಹೊಸ ಮದ್ಯದಂಗಡಿ ಪರವಾನಗಿ ನೀಡುವಂತಿಲ್ಲ ಎಂಬ ನಿಯಮವನ್ನು ಅಬಕಾರಿ ಇಲಾಖೆಯ ವ್ಯಾಪ್ತಿಗೆ ತರಲಾಗುತ್ತಿದೆ.
ಹೆದ್ದಾರಿಗಳ ಅಂಚಿನಿಂದ 500 ಮೀಟರ್ ವರೆಗೆ ಮದ್ಯದಂಗಡಿಗಳನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ 2016ರಲ್ಲಿ ತೀರ್ಪು ನೀಡಿತ್ತು. ನಗರ ಸ್ಥಳೀಯ ಸಂಸ್ಥೆಗಳು ಮತ್ತು 5,000ಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ಪ್ರದೇಶಗಳಲ್ಲಿ ರಸ್ತೆಯಿಂದ ನಿರ್ಬಂಧಿತ ಪ್ರದೇಶದ ಮಿತಿಯನ್ನು 220 ಮೀಟರ್‌ಗೆ ಪರಿಷ್ಕರಿಸಿ 2017ರಲ್ಲಿ ಸುಪ್ರೀಂ ಕೋರ್ಟ್ ಮತ್ತೊಂದು ಆದೇಶ ಹೊರಡಿಸಿತ್ತು.
ಹೆದ್ದಾರಿ ಪಕ್ಕದ ಮದ್ಯದಂಗಡಿಗಳಿಗೆ ಸಂಬಂಧಿಸಿದಂತೆ 2017ರಿಂದಲೂ ಸುತ್ತೋಲೆ ಮೂಲಕ ಜಾರಿಯಲ್ಲಿದ್ದ ನಿರ್ಬಂಧವನ್ನು ನಿಯಮಗಳಲ್ಲಿ ಸೇರಿಸಲಾಗುತ್ತಿದೆ. ಇದಕ್ಕಾಗಿ ಕರ್ನಾಟಕ ಅಬಕಾರಿ ನಿಯಮ-1967ರ ಸೆಕ್ಷನ್ 5ಕ್ಕೆ ತಿದ್ದುಪಡಿ ತರಲಾಗುತ್ತಿದೆ. 20,000 ಅಥವಾ ಅದಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹೆದ್ದಾರಿ ಅಂಚಿನಿಂದ 220 ಮೀಟರ್ ನಂತರದಲ್ಲಿ ಮದ್ಯದಂಗಡಿಗಳಿಗೆ ಪರವಾನಗಿ ನೀಡಬಹುದು. ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ 2011ರ ಜನಗಣತಿ ಪ್ರಕಾರ 5,000ಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ಪ್ರದೇಶಗಳ ವ್ಯಾಪ್ತಿಗೆ 500 ಮೀಟರ್ ನಿರ್ಬಂಧ ಅನ್ವಯವಾಗುವುದಿಲ್ಲ ಎಂದು ಉದ್ದೇಶಿತ ತಿದ್ದುಪಡಿಯಲ್ಲಿ ಉಲ್ಲೇಖಿಸಲಾಗಿದೆ.
ಕೇಂದ್ರ ಅಥವಾ ರಾಜ್ಯ ಸರ್ಕಾರಿ ಕಚೇರಿಗಳಿಂದ 100 ಮೀಟರ್ ಅಂತರದಲ್ಲಿ ಮದ್ಯದಂಗಡಿ ಪರವಾನಗಿ ನೀಡುವಂತಿಲ್ಲ ಎಂಬ ನಿಯಮವನ್ನು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಿಎಲ್-4 (ಕ್ಲಬ್) ಸಿಎಲ್-6ಎ (ತಾರಾ ಹೋಟೆಲ್) ಮತ್ತು ಸಿಎಲ್-7ಗಳಿಗೆ (ಪ್ರವಾಸಿ ಹೋಟೆಲ್ ಸನ್ನದು) ಸೀಮಿತವಾಗಿ ಕೈಬಿಡುವ ಪ್ರಸ್ತಾವ ತಿದ್ದುಪಡಿಯಲ್ಲಿದೆ.
In the coming days even 18 year olds will be able to buy alcohol. Yes, the current ban on sale of alcohol to persons below 21 years of age has been amended. The government has proposed to amend the Karnataka Excise License (General Conditions) Rules-1967 to reduce the age limit for purchase of liquor to 18 years.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm