ಬ್ರೇಕಿಂಗ್ ನ್ಯೂಸ್
14-01-23 10:00 pm Bangalore Correspondent ಕರ್ನಾಟಕ
ಬೆಂಗಳೂರು, ಜ.14 : ಚುನಾವಣೆ ಬಳಿಕ ಬಿಜೆಪಿ ಜನಾಭಿಪ್ರಾಯದ ಮೂಲಕ ಅಧಿಕಾರಕ್ಕೆ ಬರುವುದಿಲ್ಲ. ಆದರೆ, ಚುನಾವಣೆಗೂ ಮುನ್ನವೇ ಆಪರೇಷನ್ ಕಮಲ ಮಾಡಿ ನಾವೇ ಸರ್ಕಾರ ರಚನೆ ಮಾಡುತ್ತೇವೆ. ಅಮಿತ್ ಶಾ ಒಂಥರ ರೌಡಿ ರೀತಿ. ಏನು ಬೇಕಾದರೂ ಮಾಡುತ್ತಾರೆ.. ಹೀಗೆಂದು ಹೇಳಿದ್ದು ಬೇರಾರೂ ಅಲ್ಲ. ಬಿಜೆಪಿ ಎಂಎಲ್ಸಿ ಸಿಪಿ ಯೋಗೀಶ್ವರ್.
ಸಿಪಿವೈ ಅವರು ಆಡಿರುವ ಮಾತುಗಳು ವೈರಲ್ ಆಗಿದ್ದು ರಾಜಕೀಯದಲ್ಲಿ ಸದ್ದು ಮಾಡಿದೆ. ಮೈಸೂರು ಭಾಗದಲ್ಲಿ ನಾವು ಮತ್ತು ದೇವೇಗೌಡರು ಅಂಡರ್ ಸ್ಟ್ಯಾಂಡಿಂಗ್ ಮಾಡಿದ್ರೂ ನನ್ನ ಅಭಿಪ್ರಾಯದ ಪ್ರಕಾರ ಬಿಜೆಪಿ ಸರ್ಕಾರ ಬರೋದಿಲ್ಲ. ಜನಾಭಿಪ್ರಾಯದ ಮೂಲಕ ಬಿಜೆಪಿ ಬರೋದಿಲ್ಲ. ಆದರೆ, ನಾವೇ ಬಿಜೆಪಿ ಸರ್ಕಾರ ರಚನೆ ಮಾಡ್ತೀವಿ. ಮಾವಿನ ಹಣ್ಣನ್ನು ಮರದಲ್ಲೇ ಹಣ್ಣು ಮಾಡೋಕೊ, ತಂದು ಕೆಮಿಕಲ್ ಹಾಕಿ ಹಣ್ಣು ಮಾಡೋಕು ವ್ಯತ್ಯಾಸ ಇದೆ. ನಾವು ಎರಡಕ್ಕೂ ರೆಡಿ ಇದ್ದೀವಿ. ಅಮಿತ್ ಷಾ ಒಂಥರಾ ರೌಡಿ ಇದ್ದಂಗೆ. ಏನ್ ಬೇಕಾದರೂ ಮಾಡ್ತಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸ್ಟ್ರಾಂಗ್ ಇಲ್ಲ, ಸಿದ್ದರಾಮಯ್ಯ ಅವರಿಗೆ ಪಟ್ಟ ಕಟ್ಟಲು ಅವರ ಲೀಡರ್‌ಗಳಿಗೆ ಇಷ್ಟ ಇಲ್ಲ. ಡಾ.ಪರಮೇಶ್ವರ್ ಸಹ ಇದ್ದರಲ್ಲಿ ಒಬ್ಬರು. ಡಿ.ಕೆ.ಶಿ ಸ್ಟ್ರೈಟ್ ಫಾರ್ವಡ್. ಅವರು ನಾನೇ ಸಿಎಂ ಆಗಬೇಕು ಎನ್ನುತ್ತಿದ್ದಾರೆ. ಇದಕ್ಕೆ ನಮ್ಮದೇನು ಸಮಸ್ಯೆ ಇಲ್ಲ. ಡಿಕೆಶಿ, ಸಿದ್ದರಾಮಯ್ಯ ಅವರಿಬ್ಬರೂ ನೇರ ಸ್ಪರ್ಧಿಗಳು. ನಾವು ಸಂಕ್ರಾಂತಿ ಆದ ಮೇಲೆ ಬಹಳ ಡೆವಲ್ಪ್‌ಮೆಂಟ್ ಮಾಡ್ತೀವಿ. ಮೈಸೂರು ಭಾಗದಲ್ಲಿ ಕಾಂಗ್ರಸಿಗರು ಬಹಳ ಮಂದಿ ನಮ್ಮ ಪಕ್ಷಕ್ಕೆ ಬರುತ್ತಾರೆ. ಅವರಿಂದ ನಾಲ್ಕೈದು ಕ್ಷೇತ್ರದಲ್ಲಿ ನಮಗೆ ಪ್ಲಸ್ ಆಗುತ್ತೆ. ಮಂಡ್ಯ, ಕೋಲಾರದಿಂದ ಒಬ್ಬರು ನಮ್ಮ ಕಡೆಗೆ ಬರ್ತಾರೆ. ಎಳೆಂಟು ಬಾರಿ ಸೆಂಟ್ರಲ್ ಮಿನಿಸ್ಟರ್ ಆಗಿದ್ದವರು ಬರ್ತಾರೆ. ನಮ್ಮ ಬಳಿ ಎಲ್ಲ ಮಾಹಿತಿ ಇದೆ. ನಾಳೆ ನಾಡಿದ್ದು ಕ್ಲಾರಿಟಿ ಸಿಗುತ್ತೆ. ಎಲೆಕ್ಷನ್ ಬಳಿಕ ಆಪರೇಷನ್ ಕಮಲ ಮಾಡೋದಿಲ್ಲ. ಏನಿದ್ರೂ ಎಲೆಕ್ಷನ್‌ಗೂ ಮೊದಲೇ ಆಪರೇಷನ್ ಕಮಲ ಮಾಡ್ತಿವಿ.
ಕುಮಾರಸ್ವಾಮಿ ವಿರುದ್ಧ ನಾನೇ ನಿಲ್ಲುತ್ತಿದ್ದೇನೆ. ಇದೇ ಅಶೋಕ್ ಬಂದು ಡಿ.ಕೆ.ಶಿವಕುಮಾರ್ ವಿರುದ್ಧ ನಿಲ್ಲಲಿ. ಅಶ್ವತ್ಥ್ ನಾರಾಯಣ್ ರಾಮನಗರದಿಂದ ಕುಮಾರಸ್ವಾಮಿ ಮಗನ ವಿರುದ್ಧ ನಿಲ್ಲಲಿ ನೋಡೋಣ? 2023ಕ್ಕೆ ಒಕ್ಕಲಿಗರ ನಾಯಕರು ಯಾರೆಂದು ಗೊತ್ತಾಗತ್ತೆ. ಕುಮಾರಸ್ವಾಮಿ ವಿರುದ್ಧ ಗೆದ್ದ ಮೇಲೆ ನಾನು ಎಲ್ಲೋ ಇರ್ತಿನಿ. ನಾನೇ ಸಿಎಂ ಆದರೂ ಆಗಬಹುದು. ಹೀಗೆ, ಸವಾಲು ಹಾಕಿರುವುದಲ್ಲದೆ, 2023ರ ಚುನಾವಣೆ ಕುರಿತು ಯೋಗೇಶ್ವರ್ ಭವಿಷ್ಯ ನುಡಿದಿದ್ದಾರೆ.
2023ರ ಚುನಾವಣೆಯಲ್ಲಿ ಜೆಡಿಎಸ್‌ನ 20 ಅಭ್ಯರ್ಥಿಗಳು ಸೋಲುತ್ತಾರೆ. ಇದರಲ್ಲಿ ಗುಬ್ಬಿ ಶ್ರೀನಿವಾಸ್, ಅರಸೀಕೆರೆ ಶಿವಲಿಂಗೇಗೌಡ, ಅರಕಲಗೂಡು ಎ.ಟಿ.ರಾಮಸ್ವಾಮಿ, ಬೆಂಗಳೂರಿನ ಗನ್ ಮಂಜು, ನೆಲಮಂಗಲದ ಶ್ರೀನಿವಾಸಮೂರ್ತಿ, ಮಳವಳ್ಳಿ ಅನ್ನದಾನಿ, ಮದ್ದೂರು ಡಿ.ಸಿ.ತಮ್ಮಣ್ಣ, ಮಂಡ್ಯ ಶ್ರೀನಿವಾಸ್, ಕೆ.ಆರ್.ನಗರದ ಸಾ.ರಾ.ಮಹೇಶ್ ಹೀನಾಯವಾಗಿ ಸೋಲುತ್ತಾರೆ. ರಾಮನಗರದ ಮೂರು ಕ್ಷೇತ್ರದಲ್ಲಿ ಒಂದರಲ್ಲಿ ಜೆಡಿಎಸ್ ಸೋಲುತ್ತದೆ. ಇದರಲ್ಲಿ ಎಚ್.ಡಿ.ಕುಮಾರಸ್ವಾಮಿ ಇದ್ದರೂ ಇರಬಹುದು. ಉತ್ತರ ಕರ್ನಾಟದಲ್ಲಿ 5 ಜೆಡಿಎಸ್ ಎಂಎಲ್‌ಎ ಇದ್ದಾರೆ. ಇದರಲ್ಲಿ ಮೂರು ಜನ ವಾಶ್ ಔಟ್ ಆಗ್ತಾರೆ. ಬಂಡೆಪ್ಪ ಕಾಶಪ್ಪನವರ್ ಜತೆಗೆ ಇನ್ನೊಬ್ಬ ಗೆಲ್ಲಬಹುದು ಅಷ್ಟೆ.
ತುಮಕೂರು ಜಿಲ್ಲೆಯ ವೀರಭದ್ರಯ್ಯ ಅವರ ಪತ್ನಿ, ಬೇಲೂರಿನ ಲಿಂಗೇಶ್ ಸೋಲ್ತಾರೆ. ನಮ್ಮ ಜಿಲ್ಲಾಧ್ಯಕ್ಷ ಹುಲ್ಲಹಳ್ಳಿ ಸುರೇಶ್ ಗೆಲ್ಲುತ್ತಾನೆ. ಚಿಂತಾಮಣಿಯಲ್ಲಿ ಸಕತ್ ಫೈಟ್ ಇದೆ. ಅದರಲ್ಲಿ ರೆಡ್ಡಿ ಔಟ್ ಆಗ್ತಾನೆ. ಸಕಲೇಶಪುರದಲ್ಲಿ ಕುಮಾರಸ್ವಾಮಿ ಇದ್ದ. ಅಲ್ಲಿಗೆ ನಮ್ಮ ಕ್ಯಾಂಡಿಡೇಟ್ 2 ಸಾವಿರದಲ್ಲಿ ಸೋತ. ನಾನೇ ಅವನಿಗೆ ಬಿ ಫಾರಂ ನೀಡಿದ್ದೆ. ಈ ಬಾರಿಯೂ ಅವನು ಔಟ್. ಇದೆಲ್ಲ ರಫ್ ಕಾಫಿ ಅಷ್ಟೆ. ಸಾ.ರಾ. ಮೇಹೇಶ್ ಸೋಲಿಗೆ ಆತನೇ ಕಾರಣ. ಆತ ಗೆದ್ದಿರುವುದೇ ಕಡಿಮೆ ಅಂತರದಿಂದ. ಅಲ್ಲಿ ಇಬ್ಬರು ಒಕ್ಕಲಿಗರು ಇದ್ದಾರೆ. ಸಾರಾ ವಿರುದ್ಧ ಕಾಂಗ್ರೆಸ್ ಗೆಲ್ಲಬಹುದು.
ಸಿದ್ದರಾಮಯ್ಯ ಕೋಲಾರದಿಂದ ಸೋಲ್ತಾರೆ ಎಂದು ನಾನು ಹೋಳೋದಿಲ್ಲ. ಮುಖ್ಯಮಂತ್ರಿಯಾಗಿದ್ದವರನ್ನು ನನ್ನ ಬಾಯಿಂದ ಸೋಲ್ತಾರೆ ಅಂತಾ ಏಕೆ ಹೇಳಲಿ? ಸಿದ್ದರಾಮಯ್ಯ ಗೆಲ್ಲಲಿ. ಅವರ ಗೆಲುವೇ ಅವರಿಗೆ ತೊಂದರೆ, ಅವರು ಗೆದ್ದರಷ್ಟೆ ಸಿಎಂ ಆಗೋದು? ಅವರ ಕೊನೆ ಪ್ರಯತ್ನ. ಕಾಂಗ್ರೆಸ್‌ನಲ್ಲಿ ಪಾಪುಲರ್ ಲೀಡರ್ ಎಂದರೆ ಸಿದ್ದರಾಮಯ್ಯ. ಹೀಗೆ ಹಲವು ವಿಚಾರಗಳ ಬಗ್ಗೆ ಸಿಪಿ ಯೋಗೀಶ್ವರ್ ಭವಿಷ್ಯ ನುಡಿದಿದ್ದು ಪಕ್ಷದ ಒಳಗೇ ಹೊಗೆ ಆಡಿಸಿದೆ.
An audio clip where Karnataka BJP MLC C P Yogeeshwar purportedly says that Union minister Amit Shah practises a “sort of rowdyism” to protect the party’s interests and that the saffron party would go for an “Operation Lotus” before the upcoming Assembly polls has gone viral. Though Yogeeshwar has denied that it is his voice and alleged that the clip was a fabricated one, it provided enough fodder for the Opposition parties to target the BJP.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
07-02-25 05:27 pm
HK News Desk
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
07-02-25 10:13 pm
Mangalore Correspondent
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
Prasad Attavar, Saloon Attack, Mangalore: ಮಸಾ...
05-02-25 10:51 pm
07-02-25 11:55 am
Mangalore Correspondent
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm