ಮತ್ತೆ ಸಚಿವ ಸಂಪುಟ ವಿಸ್ತರಣೆ ವದಂತಿ ; ಮೂರು ಪಟ್ಟಿ ಹಿಡಿದು‌‌ ಹೆಸರು ಖಾತ್ರಿ ಮಾಡಿಕೊಂಡ ಸಿಎಂ ಬೊಮ್ಮಾಯಿ 

16-01-23 10:41 am       Bangalore Correspondent   ಕರ್ನಾಟಕ

ಅಂತೂ ಸಿಎಂ ಬೊಮ್ಮಾಯಿ ಚುನಾವಣೆಗೆ ನಾಲ್ಕು ತಿಂಗಳು ಇರುವಾಗ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ ಎನ್ನುವ ವದಂತಿ ಹರಡಿದೆ. ಜನವರಿ 17ರ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 

ಬೆಂಗಳೂರು, ಜ.16: ಅಂತೂ ಸಿಎಂ ಬೊಮ್ಮಾಯಿ ಚುನಾವಣೆಗೆ ನಾಲ್ಕು ತಿಂಗಳು ಇರುವಾಗ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ ಎನ್ನುವ ವದಂತಿ ಹರಡಿದೆ. ಜನವರಿ 17ರ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 

ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಸಿದ್ಧತೆ ನಡೆಸಿದ್ದು, ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಿದ್ದಾರೆ, ಮೂರು ಪ್ರತ್ಯೇಕ ಪಟ್ಟಿಯನ್ನ ಸಿದ್ಧಪಡಿಸಿಕೊಂಡ ಸಿಎಂ ಬೊಮ್ಮಾಯಿ, ವರಿಷ್ಠರ ಬಳಿ ಮೂರು ಪಟ್ಟಿಗಳ ಬಗ್ಗೆ ಮಾತಕತೆ ನಡೆಸಿದ್ದಾರೆ ಎನ್ನಲಾಗಿದೆ. ಎಲ್ಲವು ಓಕೆ ಆದಲ್ಲಿ ಜನವರಿ 17 ರ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. 

Karnataka Minister K.S. Eshwarappa rules out resignation over death of  contractor - The Hindu

Congress to file plaint with ED against Ramesh Jarkiholi- The New Indian  Express

ಸೋಮವಾರ ಮತ್ತು ಮಂಗಳವಾರ ದೆಹಲಿಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದ್ದು, ಆ ಸಭೆಯ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ , ರಮೇಶ್ ಜಾರಕಿಹೊಳಿ ಸೇರಿ ಸದ್ಯ ಖಾಲಿಯಿರುವ ಐದು ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಸಿಎಂ ಬೊಮ್ಮಾಯಿ ಲೆಕ್ಕಚಾರ ಹಾಕಿದ್ದಾರೆ. ಚುನಾವಣೆ ಮುಂದಿಟ್ಟು ಹೊಸ ಮುಖಗಳಿಗೆ ಅವಕಾಶ ಕಲ್ಪಿಸುವ ಲೆಕ್ಕಾಚಾರವನ್ನೂ ಸಿಎಂ ಸಿದ್ದಪಡಿಸಿಕೊಂಡಿದ್ದಾರೆ.

There are five vacant cabinet positions in Karnataka.