ಬ್ರೇಕಿಂಗ್ ನ್ಯೂಸ್
16-01-23 06:14 pm Bangalore Correspondent ಕರ್ನಾಟಕ
ಬೆಂಗಳೂರು, ಜ.15: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂರು ವರ್ಷಗಳ ಆಡಳಿತದ ಅವಧಿಯಲ್ಲಿ ಶೇಕಡ 40ರಷ್ಟು ಲಂಚದ ಮೂಲಕ 1.5 ಲಕ್ಷ ಕೋಟಿ ಲೂಟಿ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.
ಕೆಪಿಸಿಸಿ ವತಿಯಿಂದ ನಗರದ ಅರಮನೆ ಆವರಣದಲ್ಲಿ ಸೋಮವಾರ ಆಯೋಜಿಸಿರುವ 'ನಾ ನಾಯಕಿ' ಸಮಾವೇಶದಲ್ಲಿ ಮಾತನಾಡಿದ ಅವರು, 'ಇಲ್ಲಿನ ಸರ್ಕಾರ ಯಾವ ಕೆಲಸ ಮಾಡಿದರೂ ಶೇ 40ರಷ್ಟು ಲಂಚ ಪಡೆಯುತ್ತಿದೆ. ಜನರ ತೆರಿಗೆಯ ಹಣ ಲಂಚದ ರೂಪದಲ್ಲಿ ಸರ್ಕಾರದಲ್ಲಿರುವ ಕೆಲವರ ಜೇಬು ಸೇರುತ್ತಿದೆ' ಎಂದರು.

ಬಿಬಿಎಂಪಿಯಲ್ಲಿ 8,000 ಕೋಟಿ ಮೊತ್ತದ ಕಾಮಗಾರಿಗೆ ಹಣ ಬಿಡುಗಡೆ ಮಾಡಿದರೆ, 3,200 ಕೋಟಿ (ಶೇ 40) ಸರ್ಕಾರದಲ್ಲಿರುವವರಿಗೆ ಸಂದಾಯ ಆಗುತ್ತಿದೆ. ಜನರ ಹಣದ ಲೂಟಿ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಟೀಕಾಪ್ರಹಾರ ನಡೆಸಿದರು.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿಯಲ್ಲಿ ನಡೆದಿರುವ ಹಗರಣ ನಾಚಿಕೆಗೇಡಿನ ಸಂಗತಿ. ಬಿಜೆಪಿ ಸರ್ಕಾರವು ಪೊಲೀಸ್ ಪಡೆಗಳನ್ನೂ ಮಾರಾಟಕ್ಕೆ ಇಟ್ಟಿರುವುದಕ್ಕೆ ಸಾಕ್ಷಿ ಎಂದರು.
ವಾಹನ ಚಾಲನಾ ಪರವಾನಗಿ, ನೋಂದಣಿ ಎಲ್ಲದಕ್ಕೂ ಲಂಚ ಕೊಡಬೇಕು. ಅಧಿಕಾರಿಗಳ ನೇಮಕ, ವರ್ಗಾವಣೆ, ಸ್ಥಳ ನಿಯುಕ್ತಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಹೇಳಿದರು.


ಇಂತಹ ಸರ್ಕಾರದಿಂದ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಉದ್ಯೋಗ ದೊರಕುವ ಭರವಸೆ ಇದೆಯೆ? ಇವರಿಂದ ಭವಿಷ್ಯ ಉತ್ತಮಗೊಳ್ಳುವ ಭರವಸೆ ಇದೆಯೆ' ಎಂದು ಸಭೆಯಲ್ಲಿದ್ದ ಜನರನ್ನು ಪ್ರಶ್ನಿಸಿದರು.



ಭ್ರಷ್ಟಾಚಾರದ ವಿಷಯದಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಅನೇಕ ಕಸರತ್ತು ಮಾಡುತ್ತಿದ್ದಾರೆ. ಮಕ್ಕಳ ಕಲಿಕೆಯ ಪಠ್ಯಕ್ರಮಕ್ಕೂ ಕೈ ಹಾಕಿದ್ದಾರೆ. ಬಸವಣ್ಣ ಸೇರಿದಂತೆ ಅನೇಕ ಮಹನೀಯರಿಗೆ ಸಂಬಂಧಿಸಿದ ಪಠ್ಯಗಳನ್ನು ತಿರುಚಿದ್ದಾರೆ. ಇದೆಲ್ಲವೂ ಕೆಲವರ ಆಣತಿಯಂತೆ ನಡೆದಿದೆ ಎಂದು ದೂರಿದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ಬದುಕು ದುಸ್ತರವಾಗಿದೆ. ಡಾ. ಮನಮೋಹನ್ ಸಿಂಗ್ ಸರ್ಕಾರದ ಅವಧಿಗೆ ಹೋಲಿಸಿದರೆ ಎಲ್ಪಿಜಿ ಸಿಲಿಂಡರ್ ದರ ದುಪ್ಪಟ್ಟಿಗಿಂತ ಜಾಸ್ತಿಯಾಗಿದೆ ಎಂದು ದೂರಿದರು.
PSI Scam Shameful Priyanka Gandhis Attack On BJP Ahead Of Karnataka Polls 2023. The Congress in Karnataka offered a Rs 2,000 monthly stipend to every housewife if elected, declared party leader Priyanka Gandhi Vadra during a convention in Bengaluru on Monday, news agency PTI reported.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm