ಬ್ರೇಕಿಂಗ್ ನ್ಯೂಸ್
17-01-23 06:50 pm Bangalore Correspondent ಕರ್ನಾಟಕ
ಬೆಂಗಳೂರು, ಜ.17: 200 ಯೂನಿಟ್ ಉಚಿತ ವಿದ್ಯುತ್, ‘ಗೃಹಲಕ್ಷ್ಮೀ’ ಕಾರ್ಯಕ್ರಮದಡಿ ಮನೆಯ ಯಜಮಾನಿಗೆ ಮಾಸಿಕ ₹2,000 ಸಹಾಯಧನ ನೀಡುವ ಕಾಂಗ್ರೆಸ್‌ನ ಆಶ್ವಾಸನೆಗಳ ವಿರುದ್ಧ ಬಿಜೆಪಿ ದಾಳಿ ಮುಂದುವರಿಸಿದೆ. ‘ಪುಕ್ಸಟ್ಟೆ ಭಾಗ್ಯಗಳನ್ನು ನೀಡಿ ರಾಜ್ಯವನ್ನು ದಿವಾಳಿ ಮಾಡುವ ಆಲೋಚನೆಯಲ್ಲಿದೆ ಕಾಂಗ್ರೆಸ್’ ಎಂದು ಆರೋಪಿಸಿದೆ.
ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿಯೂ, ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ₹2,000 ಸಹಾಯಧನ ನೀಡುವುದಾಗಿಯೂ ಕಾಂಗ್ರೆಸ್ ಭರವಸೆ ನೀಡಿದೆ. ಕಾಂಗ್ರೆಸ್ ಈ ಕಾರ್ಯಕ್ರಮಗಳನ್ನು ಘೋಷಿಸಿದಾಗಿನಿಂದಲೂ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ, ಇಂದೂ ಕೂಡ ತನ್ನ ಟೀಕೆ ಮುಂದುವರಿಸಿದೆ.
ಕಾಂಗ್ರೆಸ್ ತನ್ನ ಏಳು ದಶಕಗಳ ಸಾಧನೆಯನ್ನು ಜನತೆಯ ಮುಂದಿಟ್ಟು ಮತ ಭಿಕ್ಷೆ ಕೇಳಬೇಕಿತ್ತು. ಅದರ ಬದಲು ಜನರಿಗೆ ಪೂರೈಸಲಾಗದ ಪೊಳ್ಳು ಭರವಸೆಗಳನ್ನು ಕೊಡುತ್ತಿದೆ. ಅಧಿಕಾರದ ಲಾಲಸೆಯಲ್ಲಿರುವ ಡಿ.ಕೆ ಶಿವಕುಮಾರ್ ಸ್ವಾಭಿಮಾನಿ ಕನ್ನಡಿಗರ ದಾರಿ ತಪ್ಪಿಸುತ್ತಿದ್ದಾರೆ. 2013-18ರವರೆಗೂ ಕಾಂಗ್ರೆಸ್ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕವನ್ನು ಕೊಳ್ಳೆ ಹೊಡಿದಿತ್ತು. ಕಾಂಗ್ರೆಸ್ ನೀಡಿದ ದೌರ್ಭಾಗ್ಯಗಳ ಫಲವಾಗಿ ಇಂದು ವಿರೋಧ ಪಕ್ಷದ ಸ್ಥಾನದಲ್ಲಿದೆ. ಸಂಸತ್ತಿನಲ್ಲಿ ವಿಪಕ್ಷ ಸ್ಥಾನ ಕಳೆದುಕೊಂಡಿರುವ ಕಾಂಗ್ರೆಸ್, ಕರ್ನಾಟಕದಲ್ಲೂ ಈ ದುಸ್ಥಿತಿ ಎದುರಾಗುವ ಆತಂಕದಲ್ಲಿದೆ’ ಎಂದು ವ್ಯಂಗ್ಯವಾಡಿದೆ.
‘ನಾ ನಾಯಕಿ’ ಎಂದು ರಾಜ್ಯಕ್ಕೆ ಬಂದ ಪ್ರಿಯಾಂಕಾ ಗಾಂಧಿ ವಂಶಪಾರಂಪರ್ಯ ನಾಯಕತ್ವವನ್ನು ಉಳಿಸಿಕೊಳ್ಳಲು ಸ್ವಾಭಿಮಾನಿ ಕನ್ನಡಿಗರನ್ನು ಈ ಬಾರಿ ಅವಲಂಬಿಸಿದ್ದಾರೆ. ರಾಹುಲ್ ಗಾಂಧಿ ಉಪಯೋಗಕ್ಕಿಲ್ಲವಾಗಿರುವುದರಿಂದಲೇ ಬೋಗಸ್ ಭಾಗ್ಯದ ಆಮಿಷ ಒಡುತ್ತಿರುವುದು. ಕನ್ನಡಿಗರದ್ದು ಕೊಡುವ ಗುಣವೆಂಬುದು ಅವರು ಮರೆತಂತಿದೆ’ ಎಂದು ಬಿಜೆಪಿ ಹೇಳಿದೆ.
ಕಾಂಗ್ರೆಸ್ ತನ್ನ ಏಳು ದಶಕಗಳ ಸಾಧನೆಯನ್ನು ಜನತೆಯ ಮುಂದಿಟ್ಟು ಮತ ಭಿಕ್ಷೆ ಕೇಳಬೇಕಿತ್ತು. ಅದರ ಬದಲು ಜನರಿಗೆ ಪೂರೈಸಲಾಗದ ಪೊಳ್ಳು ಭರವಸೆಗಳನ್ನು ಕೊಡುತ್ತಿದೆ. ಅಧಿಕಾರದ ಲಾಲಸೆಯಲ್ಲಿರುವ @DKShivakumar ಸ್ವಾಭಿಮಾನಿ ಕನ್ನಡಿಗರ ದಾರಿ ತಪ್ಪಿಸುತ್ತಿದ್ದಾರೆ.#PriyankaKeFakePromises
— BJP Karnataka (@BJP4Karnataka) January 17, 2023
1/5
Bjp slams congress over Gruha Lakshmi scheme by Priyanka in Bengaluru, saya schemes to fool people.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm