ಬ್ರೇಕಿಂಗ್ ನ್ಯೂಸ್
18-10-20 03:00 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ .18: ಕೂಲಿ ಕಾರ್ಮಿಕನೊಬ್ಬ ಮಟನ್ ಸ್ಟಾಲ್‍ನಿಂದ ಚಾಕುವನ್ನು ತೆಗೆದುಕೊಂಡು ದಾರಿಯಲ್ಲಿ ಸಿಕ್ಕಸಿಕ್ಕವರಿಗೆ ಇರಿದಿದ್ದರಿಂದ ಒಬ್ಬ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಕಾಟನ್‍ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಾರಿ (30) ಎಂದು ಗುರುತಿಸಲಾಗಿದೆ. ವೇಲಾಯುಧನ್, ಮುನಿಸ್ವಾಮಿ ಎಂಬುವವರು ಆಸ್ಪತ್ರೆಯ ತುರ್ತು ನಿಘಾಗಟಕದಲ್ಲಿದ್ದರೆ, ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಪಿ ಎಂ.ಗಣೇಶ್(35)ನನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿ ಕಾಟನ್‍ಪೇಟೆ ಮಂಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಇಂದು ಬೆಳಗ್ಗೆ 8.30ರ ಸುಮಾರಿನಲ್ಲಿ ಆಂಜನಪ್ಪಗಾರ್ಡ್‍ನ ನಿವಾಸಿ ಎಂ.ಗಣೇಶ್ ಬಾಳೆಕಾಯಿ ಮಂಡಿ ಹತ್ತಿರ ಮಟನ್ ತರಲು ಹೋಗಿದ್ದ. ಆ ಸಂದರ್ಭದಲ್ಲಿ ಮಟನ್ ಶಾಪ್‍ನಲ್ಲಿದ್ದ ಚಾಕುವನ್ನು ತೆಗೆದುಕೊಂಡು ಎದುರಿಗೆ ಸಿಕ್ಕ ಸಿಕ್ಕವರಿಗೆಲ್ಲಾ ಇರಿದಿದ್ದಾನೆ.
ಆಂಜನಪ್ಪಗಾರ್ಡನ್, ಛಲವಾದಿಪಾಳ್ಯ, ಭಕ್ಷುಗಾರ್ಡನ್ ಸೇರಿದಂತೆ ಸುಮಾರು ಎರಡು ಕಿ.ಮೀ. ದೂರದವರೆಗೂ ಓಡಾಡಿರುವ ಆರೋಪಿ ಗಣೇಶ್ ಎದುರಿಗೆ ಸಿಕ್ಕ ಸಿಕ್ಕವರಿಗೆಲ್ಲಾ ಇರಿದಿದ್ದಾನೆ. ಈ ಘಟನೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಾರಿ ಎಂಬುವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಐದು ಮಂದಿಗೆ ಗಾಯಗಳಾಗಿವೆ. ಇಬ್ಬರು ಗಂಭೀರ ಪರಿಸ್ಥಿತಿಯಲ್ಲಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೂ ಆರೋಪಿಗೂ ಯಾವುದೇ ಸಂಬಂಧವಿಲ್ಲ. ವೈಯಕ್ತಿಕ ದ್ವೇಷ ಕೂಡ ಇಲ್ಲ. ಎದುರಿಗೆ ಸಿಕ್ಕ ಕಾರಣಕ್ಕಾಗಿಯೇ ಚಾಕುವಿನಿಂದ ಚುಚ್ಚಿದ್ದಾನೆ.
ಬೆಳಗ್ಗೆ ಗಸ್ತು ತಿರುಗುತ್ತಿದ್ದ ಪಿಎಸ್‍ಐ ಮೂರ್ತಿ, ಕಾನ್‍ಸ್ಟೇಬಲ್ ಶಿವಮೂರ್ತಿ ನಾಯಕ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಸಮಯ ಪ್ರಜ್ಞೆಯಿಂದ ಆರೋಪಿಯನ್ನು ಬಂಧಿಸಿ ಚಾಕುವನ್ನು ವಶಪಡಿಸಿಕೊಂಡಿದ್ದಾರೆ. ಡಿಸಿಪಿ ಸಂಜೀವ್‍ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿದ್ದು, ಕಾಟನ್‍ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಆರೋಪಿ ಈ ಕೃತ್ಯ ಎಸಗಲು ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.ಮಧ್ಯ ಸೇವಿಸಿದ್ದನೆ, ಗಾಂಜಾ ಮತ್ತಿನಲ್ಲಿ ಈ ಕೃತ್ಯ ಎಸಗಿರಬಹುದೆ, ಮಾನಸಿಕ ಅಸ್ವಸ್ಥನೇ ಎಂಬೆಲ್ಲಾ ಅಂಶಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಳ್ಳಂಬೆಳಗ್ಗೆಯೇ ಆರೋಪಿ ಚಾಕು ಹಿಡಿದು ಎದುರಿಗೆ ಸಿಕ್ಕವರನ್ನೆಲ್ಲಾ ಚುಚ್ಚುತ್ತಿರುವುದನ್ನು ಕಂಡು ಜನ ದಂಗಾಗಿ ಹೋದರು. ಬಹಳಷ್ಟು ಮಂದಿ ಹೆದರಿ ಮನೆಯೊಳಗೆ ಹೋಗಿ ಬಾಗಿಲು ಹಾಕಿಕೊಂಡರು. ಇಡೀ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಆರೋಪಿ ಗಣೇಶ್‍ನನ್ನು ಎರಡು ವರ್ಷಗಳ ಹಿಂದೆ ಪತ್ನಿ ಬಿಟ್ಟು ಹೋಗಿದ್ದಾಳೆ. ತಾಯಿ ಜತೆ ವಾಸವಾಗಿದ್ದ ಗಣೇಶ್ ಆಕೆಯ ಜತೆಯೂ ಪದೇ ಪದೇ ಜಗಳವಾಡಿ ಹಲ್ಲೆ ಮಾಡುತ್ತಿದ್ದ ಎನ್ನಲಾಗಿದೆ.
In a shocking event a coolie worker in Bangalore stabs people in Bangalore in which one of the person is dead and 5 of them are in serious condition.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm