ಬ್ರೇಕಿಂಗ್ ನ್ಯೂಸ್
20-01-23 10:22 pm Bangalore Correspondent ಕರ್ನಾಟಕ
ಬೆಂಗಳೂರು, ಜ.20 : ಫೆಬ್ರವರಿ 10ರಂದು ವಿಧಾನ ಮಂಡಲದ ಪ್ರಸಕ್ತ ವರ್ಷದ ಬಜೆಟ್ ಅಧಿವೇಶನ ನಡೆಸಲು ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ವಿವರ ನೀಡಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, 'ಫೆ.10ರಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆ.16ರ ವರೆಗೂ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಫೆ.17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸುವ ಸಾಧ್ಯತೆ ಇದೆ' ಎಂದರು.
ಅಧಿವೇಶನದ ಕೊನೆಯ ದಿನವನ್ನು ನಿರ್ಧರಿಸಿಲ್ಲ. ವಿಧಾನ ಮಂಡಲದ ಉಭಯ ಸದನಗಳ ಕಲಾಪ ಸಲಹಾ ಸಮಿತಿಗಳ ಸಭೆ ನಡೆಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಲೋಕೋಪಯೋಗಿ ಇಲಾಖೆ ಮೂಲಕ ರೂ. 600 ಕೋಟಿ ವೆಚ್ಚದಲ್ಲಿ 100 ಡಾ.ಬಿ.ಆರ್. ಅಂಬೇಡ್ಕರ್ ವಸತಿ ನಿಲಯಗಳ ನಿರ್ಮಾಣ, ಉತ್ತರ ಕನ್ನಡ ಜಿಲ್ಲೆಯ ಜಾಲಿ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪುಂಜಾಲಕಟ್ಟೆ, ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ವಡ್ಡರ್ಸೆ ಹಾಗೂ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಹಿರೇಶಕುನ ಗ್ರಾಮದಲ್ಲಿ ಒಟ್ಟು ₹72 ಕೋಟಿ ವೆಚ್ಚದಲ್ಲಿ ನಾರಾಯಣ ಗುರು ವಸತಿ ಶಾಲೆ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ ಎಂದರು.
ನಗರ ಪ್ರದೇಶಗಳಲ್ಲಿ 117 ಆರೋಗ್ಯ ಕೇಂದ್ರಗಳನ್ನು ನಮ್ಮ ಕ್ಲಿನಿಕ್ ಗಳಾಗಿ ಪರಿವರ್ತಿಸುವುದು, ಗ್ರಾಮೀಣ ಪ್ರದೇಶದ 847 ಉಪ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ವಿವರಿಸಿದರು.
The budget session of the Karnataka legislature will begin on February 10 with an address by Governor Thaawar Chand Gehlot and the State budget would be presented by Chief Minister Basavaraj Bommai on February 17. A decision to this effect was taken at a meeting of the State Cabinet on January 20. Briefing mediapersons after the Cabinet meeting, Law and Parliamentary Affairs Minister J. C. Madhuswamy said the Governor would address a joint session of the State legislature on February 10 as this is the first session of the year.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm