ಸಿದ್ದರಾಮಯ್ಯ ಸ್ಪರ್ಧೆಗೆ ಪಾಕಿಸ್ತಾನವೇ ಸೇಫ್, ಅಲ್ಲಿ ಮೋದಿ, ಬೊಮ್ಮಾಯಿ ಇರಲ್ಲ, ಡಿಕೆಶಿಯೂ ಇರಲ್ಲ ! 

23-01-23 09:04 pm       HK News Desk   ಕರ್ನಾಟಕ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸ್ಪರ್ಧೆಗೆ ಪಾಕಿಸ್ತಾನವೇ ಸುರಕ್ಷಿತ. ಅಲ್ಲಿ ಮೋದಿ, ಬೊಮ್ಮಾಯಿ, ಯಡಿಯೂರಪ್ಪನವರಿಲ್ಲ. ಅಲ್ಲಿಗೆ ಹೋದರೆ ಕಾಟ ಕೊಡೋದಕ್ಕೆ ಡಿ.ಕೆ. ಶಿವಕುಮಾರ್‌ ಮತ್ತು ಖರ್ಗೆ ಅವರೂ ಇರಲ್ಲ ಎಂದು ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ಹಾವೇರಿ, ಜ.23 : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸ್ಪರ್ಧೆಗೆ ಪಾಕಿಸ್ತಾನವೇ ಸುರಕ್ಷಿತ. ಅಲ್ಲಿ ಮೋದಿ, ಬೊಮ್ಮಾಯಿ, ಯಡಿಯೂರಪ್ಪನವರಿಲ್ಲ. ಅಲ್ಲಿಗೆ ಹೋದರೆ ಕಾಟ ಕೊಡೋದಕ್ಕೆ ಡಿ.ಕೆ. ಶಿವಕುಮಾರ್‌ ಮತ್ತು ಖರ್ಗೆ ಅವರೂ ಇರಲ್ಲ ಎಂದು ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ರಾಣೆಬೆನ್ನೂರಿನಲ್ಲಿ ಮಾಧ್ಯಮಕ್ಕೆ ಮಾತನಾಡಿದ ಅವರು, ಬಿಜೆಪಿಯ ಹಾಲಿ ಶಾಸಕರೇ ಕಾಂಗ್ರೆಸ್ ಸೇರಲು ಸಿದ್ಧವಿದ್ದಾರೆ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆ ಸತ್ಯಕ್ಕೆ ದೂರವಾದುದು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಕಾಂಗ್ರೆಸ್‌ನವರು ತುದಿಗಾಲ ಮೇಲೆ ನಿಂತಿದ್ದಾರೆ. ನಾವು ಆಯ್ಕೆ ಮಾಡಿ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಕಾಂಗ್ರೆಸ್‌ ಎಂಬ ಮುಳುಗುತ್ತಿರುವ ಹಡಗಿನಲ್ಲಿ ಯಾರು ಇರುತ್ತಾರೆ ಎಂದು ತಿರುಗೇಟು ನೀಡಿದರು. 

Karnataka crisis: R Shankar's shifting loyalty between BJP, Congress-JD(S)  keeps everyone guessing

ವಿಧಾನ ಪರಿಷತ್‌ ಸದಸ್ಯ ಆರ್. ಶಂಕರ್ ಕಾಂಗ್ರೆಸ್ ಸೇರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಂಕರ್ ಅನರ್ಹ ಆದಾಗ ಎಂಎಲ್‌ಸಿ ಮಾಡಿದ್ದೇವೆ. ಅವರಿಗೆ ಮಂತ್ರಿ ಆಗಬೇಕು ಅಂತ ಆಸೆ ಇತ್ತು. ತಾಳ್ಮೆಯಿಂದ ಇದ್ದು ಬಿಜೆಪಿಯಲ್ಲಿ ಉಳಿದುಕೊಂಡು ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದರೆ ಬಡ್ಡಿ ಸಮೇತ ಬರುತ್ತೆ, ಬಿಟ್ಟು ಹೋದರೆ ಡೆಪಾಸಿಟ್ ಕೂಡ ಹೋಗುತ್ತೆ ಎಂದು ನುಡಿದರು.

Bengaluru court stays release of book about Congress leader and former CM  Siddaramaiah

ಪ್ರಜಾಧ್ವನಿ ಎಂದರೆ ಜನ ಮಾತನಾಡೋದು. ಆರೇಳು ಸಾವಿರ ಜನ ಸೇರಿಸಿದರೆ ಪ್ರಜಾಧ್ವನಿ ಹೇಗಾಗುತ್ತೆ. ಇದು ಪ್ರಜಾಧ್ವನಿ ಅಲ್ಲ, ಕಾಂಗ್ರೆಸ್ ಧ್ವನಿ. ಪ್ರಜೆಗಳು ನಮ್ಮ ಜೊತೆ ಇರುವುದಕ್ಕೆ ಕಾಂಗ್ರೆಸ್‌ನವರಿಗೆ ಭಯ ಶುರುವಾಗಿದೆ. ಪ್ರಜೆಗಳನ್ನು ಲೂಟಿ ಮಾಡಿದ ಕಾಂಗ್ರೆಸ್‌ನವರದ್ದು ಸೌಂಡು, ನಮ್ಮದ ಗ್ರೌಂಡು. ಸಿದ್ದರಾಮಯ್ಯನವರು ಅಪ್ಪನಾಣೆ ಮಾಡಿದ ಎಲ್ಲ ಹೇಳಿಕೆಗಳು ಸುಳ್ಳಾಗಿವೆ ಎಂದು ತಿರುಗೇಟು ನೀಡಿದರು.

Pakistan is the best place for Siddaramaiah to contest this coming elections slams CT Ravi in Haveri.