ಬ್ರೇಕಿಂಗ್ ನ್ಯೂಸ್
24-01-23 03:01 pm HK News Desk ಕರ್ನಾಟಕ
ಕಲಬುರಗಿ, ಜ.24 : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಿಂದ ಪಾರು ಮಾಡುವುದಕ್ಕಾಗಿ ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ 76 ಲಕ್ಷ ರೂ. ನೀಡಿರುವುದಾಗಿ ಪ್ರಕರಣದ ಕಿಂಗ್ ಪಿನ್ ಎನ್ನಲಾಗಿರುವ ಆರ್.ಡಿ. ಪಾಟೀಲ ಕರ್ನಾಟಕ ಲೋಕಾಯುಕ್ತರಿಗೆ ದೂರು ನೀಡಿದ್ದಾನೆ.
ದೂರಿನ ಜೊತೆಗೆ 8.4 ನಿಮಿಷ ಅವಧಿಯ ಆಡಿಯೋ ಇರುವ ಪೆನ್ ಡ್ರೈವನ್ನು ದಾಖಲೆಯಾಗಿ ನೀಡಿದ್ದಾನೆ. ಇದಲ್ಲದೆ, 'ಆರ್.ಡಿ. ಪಾಟೀಲ ಯುವ ಬ್ರಿಗೇಡ್' ಹೆಸರಿನ ಫೇಸ್‌ಬುಕ್ ಪೇಜ್ ನಲ್ಲಿ ಆರ್.ಡಿ. ಪಾಟೀಲ ಮಾತನಾಡಿರುವ ವಿಡಿಯೊವನ್ನು ಅಪ್ ಲೋಡ್ ಮಾಡಲಾಗಿದೆ.
'ಶಂಕರಗೌಡ ಪಾಟೀಲ ಅವರು ಪ್ರಕರಣ ಮುಂದುವರೆಸದಿರಲು ನನಗೆ ₹3 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ನನ್ನಿಂದ ಅಷ್ಟು ಹಣ ಹೊಂದಿಸಲು ಸಾಧ್ಯವಾಗುವುದಿಲ್ಲ. ಬೇಕಿದ್ದರೆ ₹76 ಲಕ್ಷ ಹಣವನ್ನು ಕೊಡುತ್ತೇನೆ ಎಂದು ಹೇಳಿ ಬ್ಯಾಂಕ್ ಆಫ್ ಬರೋಡಾ ಶಾಖೆಯಿಂದ ಹಣ ಡ್ರಾ ಮಾಡಿಸಿಕೊಂಡು ನನ್ನ ಅಳಿಯ ಶ್ರೀಕಾಂತನ ಮೂಲಕ ಅವರಿಗೆ ತಲುಪಿಸಿದ್ದೆ. ನಾನು ಜಾಮೀನು ಪಡೆದು ಹೊರಬಂದ ಬಳಿಕವೂ ಶಂಕರಗೌಡ ಹಾಗೂ ಅವರ ಅಧೀನ ಸಿಬ್ಬಂದಿ ಮನೆಗೆ ಬಂದು ಉಳಿದ ಹಣ ನೀಡುವಂತೆ ಕಿರುಕುಳ ನೀಡಿದ್ದಾರೆ' ಎಂದು ಫೇಸ್‌ಬುಕ್ ವಿಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾನೆ.
ಆದರೆ, ಈ ಆರೋಪಗಳನ್ನು ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಅಲ್ಲಗಳೆದಿದ್ದಾರೆ. ಎಂಟು ನಿಮಿಷ ನಾಲ್ಕು ಸೆಕೆಂಡ್ ಅವಧಿಯ ವಿಡಿಯೋದಲ್ಲಿ ಆರ್.ಡಿ.ಪಾಟೀಲ ಮಾತು ಮಾತ್ರ ಸ್ಪಷ್ಟವಾಗಿ ಕೇಳಿಸುತ್ತದೆ. ಎದುರಿಗೆ ಮಾತನಾಡಿರುವ ವ್ಯಕ್ತಿಯ ಧ್ವನಿ ಅಸ್ಪಷ್ಟವಾಗಿದೆ. ಏನಾದರೂ ಮಾಡಿ, ನನಗೆ ಹೊರಗೆ ಹೋಗುವಂತೆ ಮಾಡಿ. ನನಗೆ ಪ್ರತಿ ದಿನವೂ ಮಹತ್ವದ ದಿನವಾಗಿದೆ. ನನಗೆ ಲಂಡನ್ ನಲ್ಲಿ 'ಭಕ್ತ'ರೊಬ್ಬರು ಇದ್ದಾರೆ. ಅವರಿಂದ ಹಣದ ವ್ಯವಸ್ಥೆ ಮಾಡುತ್ತೇನೆ. ಇನ್ನಿಬ್ಬರು ತನಿಖಾಧಿಕಾರಿಗಳಾದ ಪ್ರಕಾಶ ರಾಠೋಡ, ವೀರೇಂದ್ರ ಕುಮಾರ್ ಅವರಿಗೂ ಹಣ ನೀಡುತ್ತೇನೆ ಎಂದಿದ್ದಾನೆ.
ದೂರಿನ ಕುರಿತು ಪ್ರತಿಕ್ರಿಯೆ ನೀಡಿದ ಕಲಬುರಗಿ ಲೋಕಾಯುಕ್ತ ಎಸ್ಪಿ ಎ.ಆರ್.ಕರ್ನೂಲ್, ಆರ್.ಡಿ. ಪಾಟೀಲ ದೂರನ್ನು ಲೋಕಾಯುಕ್ತರಿಗೆ ಕಳುಹಿಸಿರುವ ಬಗ್ಗೆ ಮಾಹಿತಿ ಇಲ್ಲ. ಒಮ್ಮೊಮ್ಮೆ ಲೋಕಾಯುಕ್ತರೇ ಪ್ರಕರಣದ ತನಿಖೆ ನಡೆಸುತ್ತಾರೆ. ಅಗತ್ಯ ಬಿದ್ದರೆ ನಮಗೂ ಹಸ್ತಾಂತರಿಸುತ್ತಾರೆ ಎಂದರು.
ಆರ್.ಡಿ.ಪಾಟೀಲ ಸಿಐಡಿ ಅಧಿಕಾರಿಗಳ ಕೈಗೆ ಸಿಗದೇ ಪರಾರಿಯಾಗಿದ್ದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸೋಮವಾರ ನ್ಯಾಯಾಲಯಕ್ಕೆ ಶರಣಾಗಿದ್ದ. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
RD Patil, considered the kingpin of the Karnataka police sub-inspector (PSI) recruitment scam, surrendered before a local court in Kalaburagi Monday. He had recently escaped arrest by purportedly pushing CID (Criminal Investigation Department) officers. RD Patil surrendered before the fifth JMFC court in Kalaburagi. The court sent him to judicial custody till February 6.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm