ಕಾಂಗ್ರೆಸ್ ಸರ್ಕಾರ ಬಂದಲ್ಲಿ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳ ಒಬ್ಬರಿಗೆ ಸರ್ಕಾರಿ ಕೆಲಸ ; ಡಿಕೆಶಿ ಭರವಸೆ 

27-01-23 03:52 pm       HK News Desk   ಕರ್ನಾಟಕ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಚಾಮರಾಜನಗರದಲ್ಲಿ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡ್ತೇವೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. 

ಚಾಮರಾಜನಗರ, ಜ.27 : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಚಾಮರಾಜನಗರದಲ್ಲಿ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡ್ತೇವೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. 

ಸುದ್ದಿಗಾರರ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, ಸಕಾಲದಲ್ಲಿ ಆಕ್ಸಿಜನ್ ನೀಡದೆ ಆರೋಗ್ಯ ಸಚಿವ ಸುಧಾಕರ್ ಚಾಮರಾಜನಗರದಲ್ಲಿ 36 ಜನರ ಸಾವಿಗೆ ಕಾರಣರಾಗಿದ್ದಾರೆ, ಇದಕ್ಕೆ ಸಚಿವ ಸುಧಾಕರ್ ನೇರ ಹೊಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ಧಾಳಿ ನಡೆಸಿದ್ದಾರೆ.

ಕೋವಿಡ್ ವೇಳೆ ಸಚಿವ ಸುಧಾಕರ್ ಆಕ್ಸಿಜನ್ ಕೊಡದೇ 36 ಜನರನ್ನ ಕೊಲೆ ಮಾಡಿದ್ದಾರೆ. ಅವರು ಮೃತಪಟ್ಟಿದ್ದಲ್ಲ. ಅದು ಕೊಲೆ. ಇಂಥ ದುರಂತ ಆಗಿದ್ದರೂ ಇದುವರೆಗೆ ಯಾವ ಮಂತ್ರಿಯೂ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲಿಲ್ಲ. ನಾವು ಸಂತ್ರಸ್ತರ ಮನೆಗೆ ಹೋಗಿ 1 ಲಕ್ಷ ರೂಪಾಯಿ ಕೊಟ್ಟೆವು. ಈ ಬಾರಿ ನಮ್ಮ ಸರ್ಕಾರ ಬಂದರೆ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡ್ತೇವೆ ಎಂದು ಭರವಸೆ ನೀಡಿದ್ದಾರೆ. ಕಾಂಗ್ರೆಸ್ 150 ಸೀಟು ಗೆಲ್ಲುತ್ತೆ , ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.

Chamarajanagar 1 among 36 families who died of covid to get a government job if congress comes to power, DK Shivakumar.