ಬ್ರೇಕಿಂಗ್ ನ್ಯೂಸ್
28-01-23 09:14 pm HK News Desk ಕರ್ನಾಟಕ
ಮಂಡ್ಯ, ಜ.28 : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಪ್ರತಿ ಲೀಟರ್ ಹಾಲಿಗೆ 1 ರೂಪಾಯಿ ಪ್ರೋತ್ಸಾಹ ಧನ ಹೆಚ್ಚಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ಹಾಲಿನ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಿಸುವ ಭರವಸೆಯನ್ನು ಕಳೆದ ಬಾರಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈಡೇರಿಸಿರಲಿಲ್ಲ. ಆದರೆ ನಾವು ಅಧಿಕಾರಕ್ಕೆ ಬಂದಿದ್ದೇ ಆದರೆ, ಮಂಡ್ಯದಲ್ಲಿ ಹೈನೋದ್ಯಮ ಪ್ರೋತ್ಸಾಹಿಸಿ ರೈತರಿಗೆ ನೆರವಾಗುವ ದೃಷ್ಟಿಯಿಂದ ಈಗಿರುವ 5 ರೂಪಾಯಿ ಪ್ರೋತ್ಸಾಹದೊಂದಿಗೆ ಹೆಚ್ಚುವರಿ 1 ರೂಪಾಯಿ ಸೇರಿಸಿ 6 ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುವುದು. ಇದರಿಂದ ಹೈನುಗಾರರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಮೈಶುಗರ್ ಕಾರ್ಖಾನೆಯನ್ನು ವಿಲೇವಾರಿ ಮಾಡಲು ಬಿಜೆಪಿ ಸರ್ಕಾರ ಸಿದ್ಧವಾಗಿತ್ತು. ಕಾರ್ಖಾನೆಯನ್ನು ಸ್ವಾಧೀನಪಡಿಸಿಕೊಳ್ಳಲು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಉತ್ಸುಕರಾಗಿದ್ದರು. ಆದರೆ, ಸಕ್ಕರೆ ಕಾರ್ಖಾನೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದನ್ನು ನಾವು ತೀವ್ರವಾಗಿ ವಿರೋಧಿಸಿದ್ದರಿಂದ ಬಿಜೆಪಿ ಈ ಪ್ರಸ್ತಾಪವನ್ನು ಕೈಬಿಟ್ಟಿತ್ತು ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿ, ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಮೊದಲು ಅಡಿಗಲ್ಲು ಹಾಕಿದ್ದು ನಾವು. ಆಸ್ಕರ್ ಫೆರ್ನಾಂಡಿಸ್ ಹೆದ್ದಾರಿ ಸಚಿವರಾಗಿದ್ದ ಸಮಯದಲ್ಲಿ ಸಿದ್ದರಾಮಯ್ಯ ಮತ್ತು ನಾವು ಹೋಗಿ 14 ಸಾವಿರ ಕೋಟಿ ರೂಪಾಯಿ ಯೋಜನೆಗೆ ಮಂಜೂರಾತಿ ಪಡೆದು ಬಂದಿದ್ದೆವು. ಅದನ್ನು ಈಗ ಬಿಜೆಪಿಯವರು ಉದ್ಘಾಟನೆ ಮಾಡುವುದಕ್ಕೆ ರೆಡಿಯಾಗಿದ್ದಾರೆ ಎಂದು ಕುಟುಕಿದರು.
Opposition leader Siddaramaiah said that the incentive for the milk will be increased from Rs 5 to Rs 6 per litre if Congress comes to power after the assembly election. Speaking at a public convention organised as part of Praja Dhwani Yatre of Congress, Siddaramaiah said, "We were giving Rs 5 per litre of milk as an incentive during our tenure. Later, H D Kumaraswamy, who was the chief minister of the Congress-JD(S) coalition government, wanted to increase it by Re 1.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm