ಬ್ರೇಕಿಂಗ್ ನ್ಯೂಸ್
02-02-23 10:20 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.2 : ಚುನಾವಣೆ ಸಮಯದಲ್ಲಿ ಸಿದ್ದರಾಮಯ್ಯ ಅವರನ್ನು ಕಟ್ಟಿಹಾಕಲು ಬಿಜೆಪಿ ನಾಯಕರು ಲೋಕಾಯುಕ್ತ ಅಸ್ತ್ರ ಪ್ರಯೋಗಿಸುವ ಸುಳಿವು ನೀಡಿದ್ದಾರೆ. ಸಿದ್ಧರಾಮಯ್ಯ ಆಡಳಿತದ ಅವಧಿಯಲ್ಲಿ ನಡೆದಿರುವ 10 ಬೃಹತ್ ಹಗರಣಗಳಿಗೆ ಸಂಬಂಧಿಸಿ 3,728 ಪುಟಗಳ ದಾಖಲೆಗಳೊಂದಿಗೆ 10 ಪ್ರತ್ಯೇಕ ದೂರುಗಳನ್ನು ಲೋಕಾಯುಕ್ತದಲ್ಲಿ ದಾಖಲಿಸಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್. ಆರ್ ರಮೇಶ್ ಈ ಬಗ್ಗೆ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಮಾಧ್ಯಮಗಳ ಮುಂದೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಕೃಷ್ಣ ಭೈರೇಗೌಡ, ಯು.ಟಿ. ಖಾದರ್, ಎಂ.ಬಿ. ಪಾಟೀಲ್, ಜಮೀರ್ ಅಹಮದ್, ದಿನೇಶ್ ಗುಂಡೂರಾವ್, ಎಂ. ಕೃಷ್ಣಪ್ಪ ಹಾಗೂ ಶಾಸಕರಾದ ಎನ್.ಎ. ಹ್ಯಾರಿಸ್, ಮಾಜಿ ಶಾಸಕ ಪ್ರಿಯಾಕೃಷ್ಣ ಸೇರಿದಂತೆ ಹಲವರ ವಿರುದ್ಧ ದೂರು ಸಲ್ಲಿಸಲಾಗಿದೆ. ಅಲ್ಲದೆ, ಹಿರಿಯ ಅಧಿಕಾರಿಗಳಾದ ಪಾಂಡುರಂಗ ಬಿ. ನಾಯಕ್, ಜಿ.ಸತೀಶ್, ಅತುಲ್ ಕುಮಾರ್ ತಿವಾರಿ, ವಸ್ತ್ರದ್, ವಿ. ಶಂಕರ್, ಮನೋಜ್ ರಾಜನ್, ಪಿ. ಬೋರೇಗೌಡ, ಲೀಲಾ ಸಂಪಿಗೆ, ಚಲುವರಾಜು ಮತ್ತು ಕೃಷ್ಣಮೂರ್ತಿ ವಿರುದ್ಧವೂ ದೂರು ನೀಡಲಾಗಿದೆ. ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ವಿರುದ್ಧವೂ ಸಹ ಸರ್ಕಾರಿ ಭೂಮಿ ಕಬಳಿಸಿದ ಬಗ್ಗೆ ದೂರು ನೀಡಲಾಗಿದೆ ಎಂದಿದ್ದಾರೆ.
ಇಂದಿರಾ ಕ್ಯಾಂಟೀನ್ ಅವ್ಯವಹಾರ
2017-18 ಮತ್ತು 2018- 19 ರ 17 ತಿಂಗಳ ಅವಧಿಯಲ್ಲಿ 189 ಇಂದಿರಾ ಕ್ಯಾಂಟೀನ್ ಗಳಲ್ಲಿ ಪ್ರತೀ ತಿಂಗಳು ಸರಾಸರಿ 27,03,200 ಮಂದಿ ಬೆಳಗಿನ ಉಪಹಾರ, 24,11,800 ಮಂದಿ ಮಧ್ಯಾಹ್ನದ ಊಟ ಮತ್ತು 11,55,500 ಮಂದಿ ರಾತ್ರಿಯ ಊಟ ಮಾಡುತ್ತಿದ್ದಾರೆ ಎಂಬ ಸುಳ್ಳು ಮಾಹಿತಿಗಳನ್ನು ನೀಡಲಾಗಿದೆ. ಇದಕ್ಕಾಗಿ ಸರ್ಕಾರದಿಂದ ಸಬ್ಸಿಡಿ ರೂಪದಲ್ಲಿ 17 ತಿಂಗಳ ಅವಧಿಯಲ್ಲಿ 560 ಕೋಟಿ ರೂ. ಹಣವನ್ನು ಕಬಳಿಸಲಾಗಿದೆ. ಈ ಬಗ್ಗೆಯೂ ದಾಖಲೆ ಸಹಿತ ದೂರು ನೀಡಲಾಗಿದೆ ಎಂದು ಹೇಳಿದರು.
ಜಾಹೀರಾತು ಶುಲ್ಕ ವಂಚನೆ
2015-16 ರಿಂದ 2016-17ರ ಎರಡು ವರ್ಷಗಳಲ್ಲಿ ಪಾಲಿಕೆ ವ್ಯಾಪ್ತಿಯ ಒಟ್ಟು 439 ಬಸ್ ತಂಗುದಾಣಗಳನ್ನು ತನ್ನ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡುವ ಸಲುವಾಗಿ ಬಳಸಿಕೊಂಡಿರುವ ಸಿದ್ಧರಾಮಯ್ಯ ನೇತೃತ್ವದ ಅಂದಿನ ರಾಜ್ಯ ಸರ್ಕಾರ ನಿಯಮಾನುಸಾರ ಪಾಲಿಕೆಗೆ ಪಾವತಿಸಬೇಕಿದ್ದ 68.15 ಕೋಟಿ ಜಾಹಿರಾತು ಶುಲ್ಕವನ್ನು ವಂಚಿಸಿದೆ ಎಂದು ರಮೇಶ್ ಹೇಳಿದರು.
ಕೃಷಿ ಭಾಗ್ಯದಲ್ಲಿ ಅವ್ಯವಹಾರ
ಕೃಷಿ ಭಾಗ್ಯ ಯೋಜನೆಯಲ್ಲಿ 2014-15 ರಿಂದ 2017-18ರ 4 ವರ್ಷಗಳ ಅವಧಿಯಲ್ಲಿ ಕೃಷಿ ಇಲಾಖೆಯ ವತಿಯಿಂದ ರೈತರಿಗೆ ಉಚಿತವಾಗಿ ರಾಜ್ಯದ 30 ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 2,15,130 ಕ್ಕೆ “ಕೃಷಿ ಹೊಂಡ'ಗಳ ನಿರ್ಮಾಣ ಮತ್ತು ಅದಕ್ಕೆ ಸಂಬಂಧಿಸಿದಂತೆ ಪಾಲಿಥೀನ್ ಹೊದಿಕೆ, ಡೀಸಲ್ ಪಂಪ್ ಸೆಟ್ಗಳ ಅಳವಡಿಕೆ, ಲಘು ನೀರಾವರಿ ಕಾರ್ಯ, ಕೃಷಿ ಹೊಂಡದ ಸುತ್ತಲೂ ನೆರಳು ಪರದೆಗಳ ನಿರ್ಮಾಣ ಕಾರ್ಯಗಳ ಅನುಷ್ಠಾನದ ಹೆಸರಿನಲ್ಲಿ 800 ಕೋಟಿ ರೂಪಾಯಿಗಳನ್ನು ಲೂಟಿ ಮಾಡಲಾಗಿದೆ ಎಂದು ಆರೋಪಿಸಿದರು.
ಬೀದಿ ದೀಪ ಯೋಜನೆಯಲ್ಲಿ ಗೋಲ್ಮಾಲ್
ಬಿಬಿಎಂಪಿ ವ್ಯಾಪ್ತಿಯ ಎಲ್ಲ 198 ವಾರ್ಡ್ ಗಳ ವ್ಯಾಪ್ತಿಯಲ್ಲಿರುವ ಎಲ್ಲಾ ವಿಧದ ರಸ್ತೆಗಳಲ್ಲಿರುವ ಒಟ್ಟು 5,30,000 ಬೀದಿ ದೀಪಗಳನ್ನು ಬದಲಿಸುವ ಯೋಜನೆ ಹೆಸರಿನಲ್ಲಿ ಈ ಯೋಜನೆಗೆ ಸಂಬಂಧವೇ ಇಲ್ಲದ ಸಂಸ್ಥೆಗೆ ಗುತ್ತಿಗೆ ನೀಡುವ ಮೂಲಕ 1,600 ಕೋಟಿ ರೂಪಾಯಿ ಲೂಟಿ ಮಾಡಲಾಗಿದೆ ಎಂದು ದಾಖಲೆ ಸಮೇತ ಆರೋಪಿಸಿದರು.
2014-15 ಮತ್ತು 2015-16 ರ ಅವಧಿಯಲ್ಲಿ ಪೀಡಿತ ಬಾಲಕ, ಬಾಲಕಿಯರು, ಮಹಿಳೆಯರು, ಪುರುಷರು, ಮಂಗಳಮುಖಿಯರನ್ನು ಪುನರ್ವಸತಿ ಕೇಂದ್ರಗಳಿಗೆ ಸೇರಿಸಿ, ಅವರಿಗೆ ಸೂಕ್ತ ಚಿಕಿತ್ಸೆ - ಔಷಧಿಗಳನ್ನು ಒದಗಿಸುವುದು. ತಜ್ಞ ವೈದ್ಯರುಗಳಿಂದ ಮಾನಸಿಕ ತಜ್ಞರಿಂದ ಚಿಕಿತ್ಸೆ ಮಾಡಿಸಿ ಅವರೆಲ್ಲರನ್ನು ಲೈಂಗಿಕ ಚಟುವಟಿಕೆಗಳಿಂದ ಸಾಧ್ಯವಿದ್ದಷ್ಟೂ ದೂರವಿಡುವ ಯೋಜನೆಯ ಹೆಸರಿನಲ್ಲಿ ನೂರಾರು ಕೋಟಿ ಮೊತ್ತದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದರು.
Former Chief Minister Siddaramaiah against Bangalore South District Unit President N.R. Ramesh (NR Ramesh) filed a complaint with the Lokayukta. N. about 10 huge scams. R. Ramesh has distanced himself from the Lokayukta. In the complaint, Siddaramaiah, Robert Vadra, K. J. George (KJ George), Krishna Byre Gowda, U. T. Khader (UT Khader), M.B. Patil, Jameer Ahmed, Dinesh Gundurao, M. Krishnappa, N.A. A complaint has been filed against Harris and Priya Krishna.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm