ಬ್ರೇಕಿಂಗ್ ನ್ಯೂಸ್
03-02-23 06:33 pm HK News Desk ಕರ್ನಾಟಕ
ಮಂಡ್ಯ, ಫೆ.3: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ 7 ಮಂದಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಆ ಪೈಕಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಅಸ್ವಸ್ಥರಾಗಿರುವ 6 ಮಂದಿಯನ್ನು ಮಂಡ್ಯದ ವಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.
ಮಂಗಳಮ್ಮ (28) ಮೃತ ಮಹಿಳೆ. ಆಕೆಯ ಪತಿ ರಾಜು (31), ಆಕೆಯ ತಾಯಿ ಸೊಮ್ಮಪುರದಮ್ಮ (48), ಮಕ್ಕಳಾದ ಆಕಾಶ್ (9), ಕೃಷ್ಣ (13), ಮಂಗಳಮ್ಮನ ಸಹೋದರಿ ಸವಿತಾ (24), ಸವಿತಾ ಪುತ್ರಿ ದರ್ಶಿನಿ (4) ಗಂಭೀರ ಸ್ಥಿತಿಯಲ್ಲಿದ್ದಾರೆ. ಬೆಂಗಳೂರಿನ ಸುಬ್ಬಪ್ಪನಪಾಳ್ಯದಲ್ಲಿ ವಾಸವಾಗಿದ್ದ ರಾಜು, ಕೂಲಿ ಕಾರ್ಮಿಕನಾಗಿದ್ದು, 11 ಲಕ್ಷಕ್ಕೂ ಹೆಚ್ಚಿನ ಸಾಲ ಮಾಡಿಕೊಂಡಿದ್ದರು. ಇತ್ತೀಚೆಗೆ ಸಾಲಗಾರರ ಕಾಟ ಹೆಚ್ಚಾಗಿತ್ತು.
ಸಾಲಗಾರರಿಗೆ ಹೆದರಿ ಸುಬ್ರಪ್ಪನಪಾಳ್ಯ ಬಿಟ್ಟು ರಾಮನಗರದ ದೊಡ್ಡ ಮಣ್ಣುಗುಡ್ಡೆ ಗ್ರಾಮದಲ್ಲಿರುವ ಸೋದರತ್ತೆ ಮನೆಯಲ್ಲಿ ವಾಸವಿದ್ದರು. ಅಲ್ಲಿಯೂ ಸಾಲಕ್ಕೆ ಪೀಡಿಸುತ್ತಿದ್ದರಿಂದ ಬೇಸತ್ತ ರಾಜು ಮನೆಯಲ್ಲಿ ಊಟಕ್ಕೇ ಇಲಿ ಪಾಷಾಣ ಬೆರೆಸಿದ್ದ. ಊಟ ಮಾಡಿದ್ದ ಮಂಗಳಮ್ಮ ಮನೆಯಲ್ಲೇ ಮೃತಪಟ್ಟಿದ್ದು ಉಳಿದವರು ಅಸ್ವಸ್ಥರಾಗಿದ್ದಾರೆ. ಮಧ್ಯಾಹ್ನ 2.30ರ ವೇಳೆ ಎಲ್ಲರೂ ಊಟ ಮಾಡಿದ್ದರು. ಊಟದ ಬಳಿಕ ಸಕ್ಕರೆ ಅಚ್ಚು, ಬಾಳೆ ಹಣ್ಣು ಸೇವಿಸಿದ್ದರು. ಸ್ವಲ್ಪ ಹೊತ್ತಿನ ಬಳಿಕ ಎಲ್ಲರೂ ಅಸ್ವಸ್ಥರಾಗಿದ್ದು, ಮಂಗಳಮ್ಮ ಮನೆಯಲ್ಲಿಯೇ ಮೃತಪಟ್ಟಿದ್ದಾರೆ. ವಿಷಯ ತಿಳಿದ ನೆರೆಹೊರೆಯವರು ತಕ್ಷಣವೇ ಅವರೆಲ್ಲರನ್ನೂ ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್‌ಗೆ ದಾಖಲು ಮಾಡಲಾಯಿತು.
A woman died while six others members of her family are critical after attempting suicide by consuming rat poison due to financial crisis, at Dodda Mannugudde in Ramanagara taluk on Thursday. The incident was under the jurisdiction of Ramanagara rural police station.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm