ಕರ್ನಾಟಕದಲ್ಲಿ ಒಂದೇ ದಿನ 6259 ಮಂದಿಗೆ ಕೊರೋನಾ

04-08-20 02:47 pm       Bangalore Correspondent   ಕರ್ನಾಟಕ

ಕರ್ನಾಟಕದಲ್ಲಿ ಕೊರೋನಾ ಹಾವಳಿ ಮುಂದುವರಿದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 6,777 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ. ಈ ನಿರ್ಧಿಷ್ಟ ಅವಧಿಯಲ್ಲಿ ಮಾರ ಕೊರೋನಾಗೆ 110 ಸೋಂಕಿತರು ಮೃತಪಟ್ಟಿದ್ದಾರೆ.

ಕರ್ನಾಟದಲ್ಲಿ ಮಾರಕ ಕೋವಿಡ್​-19 ಆರ್ಭಟ ಮುಂದುವರೆದಿದೆ. ಇಂದು ಮಂಗಳವಾರ ಒಂದೇ ದಿನ ಸುಮಾರು 6259 ಕೇಸ್​​ ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್​​​ ಬುಲೆಟಿನ್​​ನಿಂದ ತಿಳಿದು ಬಂದಿದೆ.

ರಾಜ್ಯದಲ್ಲಿ ಇಂದು 6259 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ರಾಜ್ಯದ ಕೊರೋನಾ ಸೋಂಕಿತರ ಸಂಖ್ಯೆ 145830ಕ್ಕೆ ಏರಿಕೆಯಾಗಿದೆ.

ಮಾರಕ ಕೊರೋನಾಗೆ ಒಂದೇ ದಿನ ಸುಮಾರು 110 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 2704ಕ್ಕೆ ಏರಿಕೆಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 30 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರು ನಗರವೊಂದರಲ್ಲೆ ಅತೀಹೆಚ್ಚು ಅಂದರೆ 2035 ಹೊಸ ಪ್ರಕರಣಗಳು ವರದಿಯಾಗಿದೆ.

ಇನ್ನು, 145830 ಪ್ರಕರಣಗಳ ಪೈಕಿ 69272 ಮಂದಿ ಸಂಪೂರ್ಣ ಗುಣಮುಖರಾಗಿ ಕೋವಿಡ್​-19 ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ಧಾರೆ.