ಬ್ರೇಕಿಂಗ್ ನ್ಯೂಸ್
04-02-23 02:23 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಈ ಹಿಂದೆ ರಾಜ್ಯ ಬಿಜೆಪಿ ಉಸ್ತುವಾರಿ ಆಗಿಯೂ ಕೆಲಸ ಮಾಡಿದ ಅನುಭವ ಇರುವ ಧರ್ಮೇಂದ್ರ ಪ್ರಧಾನ್ ಅವರಿಗೆ ಚುನಾವಣಾ ಉಸ್ತುವಾರಿಯನ್ನು ನೀಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಶನಿವಾರ ಅಧಿಕೃತ ಆದೇಶವನ್ನು ಮಾಡಿದ್ದು, ಈ ಚುನಾವಣೆಯಲ್ಲಿ ಕರ್ನಾಟಕದ ಚುನಾವಣಾ ಉಸ್ತುವಾರಿಯನ್ನು ಧರ್ಮೇಂದ್ರ ಪ್ರಧಾನ್ ಹೊತ್ತುಕೊಳ್ಳಲಿದ್ದಾರೆ. ಇನ್ನು, ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷರಾಗಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ಕರ್ನಾಟಕ ಚುನಾವಣಾ ಸಹ ಉಸ್ತುವಾರಿಯನ್ನಾಗಿ ನಿಯೋಜನೆ ಮಾಡಲಾಗಿದೆ. ಅಣ್ಣಾಮಲೈ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿಯೂ ಕೆಲಸ ಮಾಡಿದ್ದರು. ಈ ನಿಟ್ಟಿನಲ್ಲಿ ಅವರಿಗೆ ಸಹ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.
ಧರ್ಮೇಂದ್ರ ಪ್ರಧಾನ್ ಯಾರು?
ಒಡಿಶಾ ಮೂಲದವರಾಗಿರುವ ಧರ್ಮೇಂದ್ರ ಪ್ರಧಾನ್ 2000ನೇ ಇಸವಿಯಲ್ಲಿ ಒಡಿಶಾ ವಿಧಾನಸಭೆಯ ಶಾಸಕರಾಗುವ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ್ದರು. ಅದಾದ ಬಳಿಕ 2004ರಲ್ಲಿ ಒಡಿಶಾದ ದಿಯೋಗರ್‌ನಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ನಂತರ ಛತ್ತೀಸ್‌ಗಢದ ರಾಜ್ಯ ಬಿಜೆಪಿ ಉಸ್ತುವಾರಿಯನ್ನಾಗಿ ಧರ್ಮೇಂದ್ರ ಪ್ರಧಾನ್ ಅವರನ್ನು 2007ರಲ್ಲಿ ನೇಮಿಸಲಾಗಿತ್ತು. ಬಳಿಕ ಬಿಜೆಪಿ ಉತ್ತರಾಖಂಡದ ಚುನಾವಣಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದ ಧರ್ಮೇಂದ್ರ ಪ್ರಧಾನ್, ಬಿಹಾರ ಚುನಾವಣೆ ವೇಳೆ ಬಿಜೆಪಿ ಸಹ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಅಣ್ಣಾಮಲೈ ಯಾರು?
ಸದ್ಯ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಕೆ ಅಣ್ಣಾಮಲೈ, 2011ರಲ್ಲಿ ಭಾರತೀಯ ಪೊಲೀಸ್ ಸೇವೆ ಸೇರಿದ್ದು, 2013ರ ಸೆಪ್ಟೆಂಬರ್‌ನಲ್ಲಿ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಪೊಲೀಸ್ ವೃತ್ತಿಯನ್ನು ಆರಂಭಿಸಿದ್ದರು. ಬಳಿಕ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಡ್ತಿ ಪಡೆದ ಅವರು 2015 ರಿಂದ 2016ರವರೆಗೆ ಉಡುಪಿ ಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಚಿಕ್ಕಮಗಳೂರು ಎಸ್‌ಪಿಯಾಗಿದ್ದ ಅವರು 2018ರಲ್ಲಿ ಬೆಂಗಳೂರು ದಕ್ಷಿಣ ಪೊಲೀಸ್ ಉಪ ಆಯುಕ್ತರಾಗಿ ಬಡ್ತಿ ಹೊಂದಿದ್ದರು. ಆದರೆ, 2019ರಲ್ಲಿ ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯವನ್ನು ಪ್ರವೇಶಿಸಿದರು.
ಅರಮನೆ ಮೈದಾನದಲ್ಲಿ ವಿಶೇಷ ಕಾರ್ಯಕಾರಿಣಿ ಸಭೆ ಚುನಾವಣಾ ಸಿದ್ದತೆ ನಿಟ್ಟಿನಲ್ಲಿ ಶನಿವಾರ ಅರಮನೆ ಮೈದಾನದಲ್ಲಿ ವಿಶೇಷ ಕಾರ್ಯಕಾರಿಣಿ ಸಭೆ ನಡೆಯಿತು. ಈ ಸಭೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಕೇಂದ್ರ ಸಚಿವ ಸದಾನಂದ ಗೌಡ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತಿತರರು ಭಾಗಿಯಾಗಿದ್ದರು. ಚುನಾವಣಾ ಸಿದ್ದತೆ, ಸಂಘಟನೆ ಹಾಗೂ ಕಾರ್ಯತಂತ್ರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ.
With the BJP preparing for a fierce battle to retain its southern bastion of Karnataka, party national president J P Nadda on Saturday appointed Union Education Minister Dharmendra Pradhan as its election in-charge, with BJP Tamil Nadu state chief K Annamalai as co-in-charge.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm