ಬ್ರೇಕಿಂಗ್ ನ್ಯೂಸ್
08-02-23 06:07 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.8 : ನಾಲ್ವರು ಹಾಲಿ ನ್ಯಾಯಾಧೀಶರ ವಿರುದ್ಧ ಆಧಾರರಹಿತ ಆರೋಪ ಮಾಡಿದ ವಕೀಲರೊಬ್ಬರನ್ನು ಕರ್ನಾಟಕ ಹೈಕೋರ್ಟ್ ಒಂದು ವಾರದ ಮಟ್ಟಿಗೆ ಜೈಲಿಗೆ ಕಳುಹಿಸಿದೆ.
ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರ ವಿಭಾಗೀಯ ಪೀಠವು ಫೆಬ್ರವರಿ 2, 2023 ರಂದು ವಕೀಲ ಕೆಎಸ್ ಅನಿಲ್ ವಿರುದ್ಧ ಈ ತೀರ್ಪು ನೀಡಿದೆ. ಹೈಕೋರ್ಟ್ 2019ರಲ್ಲಿ ಆರಂಭಿಸಿದ ಕ್ರಿಮಿನಲ್ ನಿಂದನೆ ಪ್ರಕರಣದಲ್ಲಿ ಈ ಆದೇಶ ನೀಡಿದೆ. ಮೌಖಿಕವಾಗಿ ಅಥವಾ ಲಿಖಿತ ಅರ್ಜಿ ಸಲ್ಲಿಸಲು ಸಮಯಾವಕಾಶ ಅಗತ್ಯವಿದೆಯೇ ಎಂದು ನಾವು ವಕೀಲರನ್ನು ಕೇಳಿದ್ದೆವು. ಆದರೆ, ಅವರು ನ್ಯಾಯಾಲಯದ ಮುಂದೆ ದುರಹಂಕಾರದಿಂದ ವರ್ತಿಸಿದ್ದಾರೆ, ನಾವು ತಾಳ್ಮೆಯಿಂದ ಕೇಳಲು ಪ್ರಯತ್ನಿಸಿದರೂ, ಆರೋಪಿತ ವಕೀಲ ಸನ್ನೆ ಮಾಡಿ ನ್ಯಾಯಾಲಯದ ಘನತೆ ಕುಂದಿಸುವ ರೀತಿ ವರ್ತಿಸಿದ್ದಾರೆ ಎಂದು ನ್ಯಾಯಾಧೀಶರು ಆದೇಶದಲ್ಲಿ ಹೇಳಿದ್ದಾರೆ.
ವಕೀಲರಾಗಿ ಈ ಹಿಂದಿನ ಸಂದರ್ಭಗಳಲ್ಲೂ ನ್ಯಾಯಾಂಗ ವ್ಯವಸ್ಥೆ ಹಾಗೂ ನಿರ್ದಿಷ್ಟವಾಗಿ ನ್ಯಾಯಾಂಗದ ಅಧಿಕಾರಿಗಳ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುವುದರ ಜೊತೆಗೆ ಸಂಸ್ಥೆಯನ್ನು ಅವಮಾನಿಸಲು ಪ್ರಯತ್ನಿಸುತ್ತಿದ್ದಾರೆ. ಈ ರೀತಿಯ ವರ್ತನೆ ನ್ಯಾಯಾಂಗ ವ್ಯವಸ್ಥೆಯ ಘನತೆ ಕಡಿಮೆ ಮಾಡಲು ಪ್ರಯತ್ನಿಸುತ್ತಿರುವುದನ್ನು ಸೂಚಿಸುತ್ತದೆ ಎಂದು ವಿಭಾಗೀಯ ಪೀಠ ತಿಳಿಸಿದೆ.
ನ್ಯಾಯಾಂಗ ನಿಂದನೆ ಎಸಗಿರುವ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಆದೇಶ ಹೊರಡಿಸುವುದನ್ನು ಬಿಟ್ಟು ಈ ನ್ಯಾಯಾಲಯಕ್ಕೆ ಬೇರೆ ದಾರಿಯೇ ಇಲ್ಲ ಎಂದು ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ. ಮುಂದಿನ ವಿಚಾರಣೆಯ ಫೆಬ್ರವರಿ 10ರಂದು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದೂ ಹೇಳಿದೆ. 2019 ರಲ್ಲಿ ಅನಿಲ್ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ಆರಂಭಿಸಲಾಗಿತ್ತು. ಹೈಕೋರ್ಟಿನ ನಾಲ್ವರು ಹಾಲಿ ನ್ಯಾಯಾಧೀಶರ ವಿರುದ್ಧ ಮಾಡಿದ ಆರೋಪಗಳ ಬಗ್ಗೆ ವಿಚಾರಣೆ ನಡೆದಿತ್ತು. ನ್ಯಾಯಾಧೀಶರ ವಿರುದ್ಧ ಮಾಡಿರುವ ಆರೋಪಗಳನ್ನು ಬೇಷರತ್ ಹಿಂಪಡೆಯಲು ಹಾಗೂ ಕ್ಷಮೆ ಯಾಚಿಸಲು ಆರೋಪಿಗೆ ಅವಕಾಶ ನೀಡಿದ್ದರೂ, ವಕೀಲ ಕ್ಷಮೆ ಕೇಳಿರಲಿಲ್ಲ. ಹೀಗಾಗಿ ಅವರನ್ನು ಜೈಲಿಗೆ ಕಳುಹಿಸಲಾಗಿದೆ.
The Karnataka High Court has sent a lawyer to Jail for a week on charges of making baseless allegations against four sitting judges. On February 2, 2023, a division bench of Chief Justice Prasanna B Varale and Justice Ashok S Kinagi passed the order in criminal contempt proceedings initiated by the High Court against advocate KS Anil in 2019.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm