ಬ್ರೇಕಿಂಗ್ ನ್ಯೂಸ್
09-02-23 10:31 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.9: ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ನಟಿ ಅಭಿನಯ ಹಾಗೂ ಅವರ ಕುಟುಂಬದ ಸದಸ್ಯರು ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಅವರ ಬಂಧನಕ್ಕೆ ಲುಕ್‌ಔಟ್ ನೋಟಿಸ್ ಬಿಡುಗಡೆ ಮಾಡಲಾಗಿದೆ.
ಅಭಿನಯ ಅವರ ಅತ್ತಿಗೆ ಲಕ್ಷ್ಮೀದೇವಿ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ನಡೆದ ವಿಚಾರಣೆಯಲ್ಲಿ ಅಭಿನಯ, ಸಹೋದರ ಚಲುವರಾಜು ಹಾಗೂ ತಾಯಿಗೆ ಶಿಕ್ಷೆಯಾಗಿತ್ತು. ಅಲ್ಲಿಂದ ಅವರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರ ಬಗ್ಗೆ ಮಾಹಿತಿ ಇದ್ದರೆ ಬೆಂಗಳೂರಿನ ಚಂದ್ರಾಲೇಔಟ್ನ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ನಟಿ ಅಭಿನಯ ಹಾಗೂ ಅವರ ಕುಟುಂಬಸ್ಥರು ತಮಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಅವರ ಅತ್ತಿಗೆ 2012ರಲ್ಲಿ ದೂರು ದಾಖಲಿಸಿದ್ದರು. ಇದೇ ವೇಳೆ ಅವರು ವೇಶ್ಯಾವಾಟಿಕೆ ಕೂಡ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಪ್ರಕರಣದಲ್ಲಿ ಸೆಷೆನ್ಸ್ ಕೋರ್ಟ್ ಅಭಿನಯ ಹಾಗೂ ಇತರರು ತಪ್ಪಿತಸ್ಥರು ಎಂದು ತೀರ್ಪು ನೀಡಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ಅಭಿನಯ ಹಾಗೂ ಅವರ ಸಹೋದರ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲೂ ಅವರಿಗೆ ಸೋಲಾಗಿತ್ತು. ಸೆಷನ್ಷ್ ಕೋರ್ಟ್ನ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.

ಶಿಕ್ಷೆ ಪ್ರಕಟಗೊಂಡ ಹಿನ್ನೆಲೆಯಲ್ಲಿ ಪೊಲೀಸರು ನಟಿ ಅಭಿನಯ, ತಾಯಿ ಜಯಮ್ಮ ಹಾಗೂ ಸಹೋದರ ಚಲುವರಾಜು ಅವರನ್ನು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಬೇಕಾಗಿತ್ತು. ಆದರೆ ಅವರು ನಾಪತ್ತೆಯಾಗಿರುವ ಕಾರಣ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ.

1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಅವರ ಜತೆ ಲಕ್ಷ್ಮೀ ದೇವಿ ವಿವಾಹವಾಗಿದ್ದರು. ಈ ವೇಳೆ ವರದಕ್ಷಿಣೆ ನೀಡಲಾಗಿತ್ತು ಹಾಗೂ ನಂತರವೂ ಅಭಿನಯ ಸೇರಿದಂತೆ ಕುಟುಂಬಸ್ಥರು ಹೆಚ್ಚಿನ ಹಣಕ್ಕಾಗಿ ಪೀಡಿಸಿದ್ದರು. ಈ ಬಗ್ಗೆ 2012ರಲ್ಲಿ ದೂರು ದಾಖಲಾಗಿತ್ತು. ಮೊದಲಿಗೆ ಕೋರ್ಟ್ ನೀಡಿದ್ದ ಶಿಕ್ಷೆಯನ್ನು ಅಭಿನಯ ಕುಟುಂಬದವರು ಪ್ರಶ್ನಿಸಿದ್ದರು. ಅಲ್ಲೂ ಅವರಿಗೆ ಸೋಲಾಗಿದೆ.
The police have issued a lookout notice to locate Anubhava, an actress of Kannada film fame, Abhinaya and her family who have been sentenced to jail.Actress Abhinaya (74), mother Jayamma (54) and brother Cheluvaraju (52) are absconding without being found by the police. In this background, Bangalore City Chandra Layout Police has issued a lookout notice to trace him.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am