ಬ್ರೇಕಿಂಗ್ ನ್ಯೂಸ್
12-02-23 04:59 pm HK News Desk ಕರ್ನಾಟಕ
ಶಿವಮೊಗ್ಗ, ಫೆ.12: ಶಿವಮೊಗ್ಗದಲ್ಲಿ ನಿರ್ಮಿಸಲಾದ ಹೊಸ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರಿಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಇಂದು ನಗರದಲ್ಲಿ ಮಾತನಾಡಿದ ಅವರು, ಫೆಬ್ರವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ಮೋದಿ ಬರುವುದು ನಿಶ್ಚಯವಾಗಿದೆ. ಪ್ರಧಾನಿ ಕೂಡ ಒಪ್ಪಿಕೊಂಡಿದ್ದಾರೆ. ಆ ದಿನ ದೇಶದ ಶ್ರೇಷ್ಠ ಕವಿ, ಜ್ಞಾನಪೀಠ ಪುರಸ್ಕೃತ ಕುವೆಂಪು ಹೆಸರನ್ನು ಇಡಬೇಕು ಎಂದು ನಿರ್ಧರಿಸಲಾಗಿದೆ. ನಾಳೆ ನಡೆಯಲಿರುವ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸುತ್ತೇನೆ. ಅಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಾಗುವುದು. ಪ್ರಧಾನಿಯವರೇ ಈ ಹೆಸರನ್ನು ಘೋಷಣೆ ಮಾಡಬೇಕು ಎಂಬುದು ನನ್ನ ಅಪೇಕ್ಷೆಯಾಗಿದೆ ಎಂದು ಯಡಿಯೂರಪ್ಪ ಹೇಳಿದರು.
ರಾಜ್ಯ ಸರ್ಕಾರ ನನ್ನ ಹೆಸರಿಡಲು ನಿರ್ಧರಿಸಿತ್ತು. ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೂಡ ಆಗಿದೆ. ಆದ್ರೆ ತಮ್ಮ ಹೆಸರಿಡದಂತೆ ಸಿಎಂ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ನಾನು ಮನವಿ ಮಾಡಿದ್ದೆ. ಆದರು ನನ್ನ ಹೆಸರನ್ನ ಸಿಎಂ ಬೊಮ್ಮಾಯಿ ಕೇಂದ್ರಕ್ಕೆ ಕಳಿಸಿದ್ದರು.
ಹೀಗಾಗಿ ಹಲವು ದಿನಗಳಿಂದ ವಿಮಾನ ನಿಲ್ದಾಣದ ಹೆಸರು ಚರ್ಚೆಗೆ ಬಂದು ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿತ್ತು. ಕೆಲ ಗಣ್ಯರ ಹೆಸರು ಕೂಡ ಕೇಳಿ ಬಂದಿದ್ದವು. ಇದರಲ್ಲಿ ಮಾಜಿ ಸಿಎಂ ಬಂಗಾರಪ್ಪ, ಯಡಿಯೂರಪ್ಪ ಹೆಸರು ಮುಂಚೂಣಿಯಲ್ಲಿದ್ದವು.
The State government will send a proposal to the Centre to name Shivamogga airport after poet and the first Kannadiga to get the Jnanapeetha award, Kuvempu, said former Chief Minister B. S. Yediyurappa in Shivamogga on Sunday. Speaking to presspersons, Mr. Yediyurappa said he would move the motion proposing Kuvempu’s.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm