ಬ್ರೇಕಿಂಗ್ ನ್ಯೂಸ್
13-02-23 09:32 pm HK News Desk ಕರ್ನಾಟಕ
ಕಲಬುರಗಿ, ಫೆ.13 : ಕೋಲಿ ಸಮಾಜದ ಹಿರಿಯ ಮುಖಂಡ, ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರ್ ಮತ್ತೆ ತನ್ನ ಮೂಲ ಕಾಂಗ್ರೆಸ್ ಪಕ್ಷದ ಕದ ತಟ್ಟಿದ್ದಾರೆ. ಚುನಾವಣೆಗೆ ಮೊದಲೇ ಕಮಲಕ್ಕೆ ಗುಡ್‌ಬೈ ಹೇಳಿ ಮತ್ತೆ ಮರಳಿ ಗೂಡಿಗೆ ಹೋಗುವ ಲಕ್ಷಣಗಳು ಸ್ಪಷ್ಟವಾಗ್ತಿದೆ. ಚಿಂಚನಸೂರ್ ಈಗಾಗಲೇ ಕಾಂಗ್ರೆಸ್ ಪಕ್ಷದ ಹಲವು ನಾಯಕರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದು ಸದ್ಯದಲ್ಲೇ ಪಕ್ಷ ತೊರೆಯುವ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.
2018 ರ ವಿಧಾನಸಭೆ ಚುನಾವಣೆಯಲ್ಲಿ ಗುರುಮಿಠಕಲ್ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸೋತಿದ್ದ ಚಿಂಚನಸೂರ್ ಆನಂತರ ಬಿಜೆಪಿ ಸೇರಿದ್ದರು. ಲೋಕಸಭೆ ಚುನಾವಣೆಯಲ್ಲಿ ಚಿಂಚನಸೂರ್ ಶಕ್ತಿಮೀರಿ ಕೆಲಸ ಮಾಡಿದ್ದರಿಂದ ಮತ್ತು ಕೋಲಿ ಕಬ್ಬಲಿಗ ಸಮಾಜದ ಪ್ರಭಾವಿ ಮುಖಂಡರಾಗಿದ್ದರಿಂದ ಚಿಂಚನಸೂರ್‌ಗೆ ಬಿಜೆಪಿ ಪಕ್ಷ ಎಂಎಲ್‌ಸಿ ಮಾಡಿ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಮಾಡಿತ್ತು. ಆದರೆ ಕೆಲವು ದಿನಗಳಿಂದ ತನ್ನನ್ನ ಪಕ್ಷದಲ್ಲಿ ಕಡೆಗಣಿಸ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿಗೆ ಗುಡ್‌ಬೈ ಹೇಳಲು ಮುಂದಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಿದ್ದು, ಚಿಂಚನಸೂರ್ ಕಾಂಗ್ರೆಸ್ ಸೇರ್ಪಡೆಯಿಂದ ಕಲಬುರಗಿ ಜಿಲ್ಲೆಯಲ್ಲಿ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ ಎಂಬ ಲೆಕ್ಕಾಚಾರ ಇದೆ.
ಚಿಂಚನಸೂರ್ ಅವರನ್ನ ಚುನಾವಣೆಯಲ್ಲಿ ಮಾತ್ರ ಪಕ್ಷ ಬಳಸಿಕೊಳ್ತಿದೆ ಎಂಬ ಆರೋಪ ಅವರ ಬೆಂಬಲಿಗರದ್ದು. ವಿಧಾನಸಭೆ ಚುನಾವಣೆ ಸನ್ನಿಹಿತವಾಗಿದ್ದರಿಂದ, ಯಾವ ಯಾವ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತೆ ಮತ್ತು ಯಾವ ಅಭ್ಯರ್ಥಿಯನ್ನ ಕಣಕ್ಕಿಳಿಸಿದ್ರೆ ಲಾಭ ಅಂತ ಆಂತರಿಕ ಸಮೀಕ್ಷೆ ನಡೆಸಿತ್ತು. ಸಮೀಕ್ಷೆಯಲ್ಲಿ ಚಿಂಚನಸೂರ್ ಸೂಕ್ತ ಅಭ್ಯರ್ಥಿಯಲ್ಲ ಎಂಬ ವರದಿ ಸಿಕ್ಕಿದೆ ಎನ್ನಲಾಗುತ್ತಿದ್ದು ಟಿಕೆಟ್ ಸಿಗುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ, ಸಹಜವಾಗಿ ಪಕ್ಷದ ನಡೆ ವಿರುದ್ಧ ಬಾಬುರಾವ್ ಚಿಂಚನಸೂರ್ ಭಾರಿ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಬಿಜೆಪಿಗೆ ಗುಡ್‌ಬೈ ಹೇಳಲು ನಿರ್ಧರಿಸಿದ್ದು, ಅಂಬಿಗರ ಚೌಡಯ್ಯ ನಿಗಮ ಮಂಡಳಿಗೆ ರಾಜೀನಾಮೆ ನೀಡಿ ಪಕ್ಷಕ್ಕೂ ರಾಜೀನಾಮೆ ನೀಡಲಿದ್ದಾರೆ.
ಕೋಲಿ ಸಮಾಜದ ಪ್ರಭಾವಿ ನಾಯಕರಾಗಿರುವ ಚಿಂಚನಸೂರ್ ಎರಡು ಬಾರಿ ಗುರುಮಿಠಕಲ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾಗ 2018 ರಲ್ಲಿ ಸೋಲು ಅನುಭವಿಸಿದ್ದರು. ಕಳೆದ ಬಾರಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವೇದಿಕೆ ಮೇಲೆ ಭಾಷಣ ಮಾಡ್ತಿದಾಗ ಮಧ್ಯ ಬಂದ ಚಿಂಚನಸೂರ್‌ಗೆ ತರಾಟೆಗೆ ತೆಗೆದುಕೊಂಡಿದ್ದ ಘಟನೆ ನಡೆದಿತ್ತು. ಇದರಿಂದ ಮುಖ್ಯಮಂತ್ರಿ ಬಗ್ಗೆಯೂ ಚಿಂಚನಸೂರ್ ಸಿಟ್ಟಾಗಿದ್ದರು. ಟಿಕೆಟ್ ಸಿಗುವ ಖಾತ್ರಿ ಇಲ್ಲದಿರುವುದು, ರಾಜ್ಯ ನಾಯಕರು ಕಡೆಗಣಿಸಿದ್ದನ್ನು ಮುಂದಿಟ್ಟು ಪಕ್ಷ ತೊರೆಯಲು ಚಿಂಚನಸೂರ್ ನಿರ್ಧರಿಸಿದ್ದಾರೆ.
Kalaburgi Mlc Baburao Chinchansur to leave the BJP party and join congress before the coming elections.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 01:06 pm
Wecare
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm