ಚೆಕ್ ಬೌನ್ಸ್ ; ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ!

13-02-23 10:08 pm       Bangalore Correspondent   ಕರ್ನಾಟಕ

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಬೆಂಗಳೂರು,ಫೆ.13 : ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಎಂ.ಪಿ.ಕುಮಾರಸ್ವಾಮಿ ಅವರು ಹೂವಪ್ಪಗೌಡ ಎಂಬುವವರಿಂದ 1.35 ಕೋಟಿ ರೂಪಾಯಿ ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬಂಧ ಶಾಸಕ ಕುಮಾರಸ್ವಾಮಿ ಅವರು ಹೂವಪ್ಪಗೌಡ ಅವರಿಗೆ ನೀಡಿದ್ದ 8 ಚೆಕ್ ಗಳು ಸಹ ಬೌನ್ಸ್ ಆಗಿತ್ತು. ಈ ಸಂಬಂಧ ಹೂವಪ್ಪಗೌಡ ಅವರು ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯದಲ್ಲಿ 8 ಕೇಸ್ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಪ್ರೀತ್ ಅವರು, ಆರೋಪಿ  ಶಾಸಕರಿಗೆ 8 ಕೇಸ್ ಗಳಲ್ಲಿ ತಲಾ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ್ದಾರೆ.

ಸಾಲ‌ ಮರುಪಾವತಿ ಮಾಡದಿದ್ದಲ್ಲಿ ತಲಾ 6 ತಿಂಗಳು ಒಟ್ಟು 4 ವರ್ಷ ಜೈಲು ಶಿಕ್ಷೆ ಅನುಭವಿಸುವಂತೆ ಶಿಕ್ಷೆ ಪ್ರಕಟಿಸಲಾಗಿದೆ.

BJP MLA from Mudigere, M.P. Kumaraswamy was reportedly convicted in a cheque bounce case by a special court for people’s representatives on Monday.
Kumaraswamy had borrowed Rs 1.35 crore from Hoovappa Gowda and had furnished 8 cheques for its repayment. However, these cheques had bounced, following which Goda filed a court case.