ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟೆ ಪತಿ ಜಾಫರ್ ಫೀರ್ಜಾದೆ ಆತ್ಮಹತ್ಯೆ 

13-02-23 10:48 pm       HK News Desk   ಕರ್ನಾಟಕ

ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟೆ ಅವರ ಪತಿ ಜಾಫರ್ ಫೀರ್ಜಾದೆ(39) ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಬೆಳಗಾವಿ, ಫೆ.13 : ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟೆ ಅವರ ಪತಿ ಜಾಫರ್ ಫೀರ್ಜಾದೆ(39) ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಆಜಮ್ ನಗರದ ನಿವಾಸದಲ್ಲಿ ಜಾಫರ್ ಫೀರ್ಜಾದೆ ಸೋಮವಾರ ಮಧ್ಯಾಹ್ನ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಜಾಫರ್ ಬೆಳಗಾವಿಯ ಡಿಟಿಐನಲ್ಲಿ ಎಫ್‌ಡಿಎ ತರಬೇತಿಯಲ್ಲಿದ್ದರು.  ಹಿಡಕಲ್ ಡ್ಯಾಂ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ KAS ಅಧಿಕಾರಿ ರೇಷ್ಮಾ
ತಾಳಿಕೋಟೆ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು.

ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಜಾಫರ್ ಸಾವು ಹಲವು ಅನುಮಾನಕ್ಕೆ ಕಾರಣವಾಗಿದೆ.

ರೇಷ್ಮಾ ತಾಳಿಕೋಟಿ ಅವರು ಈ ಹಿಂದೆ ಹುಕ್ಕೇರಿ, ಖಾನಾಪುರ ಸೇರಿದಂತೆ ವಿವಿಧೆಡೆ ತಹಸೀಲ್ದಾರ್ ಆಗಿ ಕಾರ್ಯ ನಿರ್ವಹಿಸಿದ್ದರು. ಪತಿ ಜಾಫರ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಎಫ್ ಡಿಎ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೆಲವು ತಿಂಗಳಿನಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸೋಮವಾರ ಮಧ್ಯಾಹ್ನ ಸಹೋದರನ ಮನೆಯಲ್ಲಿ ಸಾವಿಗೆ ಶರಣಾಗಿದ್ದಾರೆ.