ಬ್ರೇಕಿಂಗ್ ನ್ಯೂಸ್
15-02-23 06:19 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15 : ರಾಜ್ಯ ಸರ್ಕಾರ ಚುನಾವಣೆ ಖರ್ಚಿಗಾಗಿ ಬೇಕಾಬಿಟ್ಟಿಯಾಗಿ ಟೆಂಡರ್ ದರವನ್ನು ಹೆಚ್ಚಿಸಿ ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಯೇ 18 ಸಾವಿರ ಕೋಟಿ ಟೆಂಡರ್ ಹಗರಣ ನಡೆದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನೇರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನೆಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಬಿಜೆಪಿಯವರ ಈ ಹಗರಣವನ್ನು ಇಲ್ಲಿಗೆ ಬಿಡದೇ ಕೋರ್ಟ್ ಗೆ ತೆಗೆದುಕೊಂಡು ಹೋಗುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಬಿಜೆಪಿ ಸರ್ಕಾರದ ಟೆಂಡರ್ ರದ್ದು ಮಾಡಿ ಹಗರಣ ಬಯಲಿಗೆಳೆಯುತ್ತೇವೆ ಎಂದು ಹೇಳಿದ್ದಾರೆ. ಸರ್ಕಾರದಿಂದ ಒಂದೇ ದಿನ 18 ಸಾವಿರ ಕೋಟಿ ರೂ. ಟೆಂಡರ್ ಆಗಿದೆ. ನಿಗಮ, ಮಂಡಳಿಗಳಿಗೆ ಬೇಕಾಬಿಟ್ಟಿ ಹಣ ನೀಡಲಾಗಿದೆ. ಚುನಾವಣೆಯಲ್ಲಿ ತಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ತನಿಖಾ ಸಮಿತಿ ರಚನೆ ಮಾಡಿ ಹಗರಣ ಬಯಲಿಗೆಳೆಯುತ್ತೇವೆ. ಈ ಸರ್ಕಾರ ಯದ್ವಾತದ್ವಾ ಜನರ ಹಣವನ್ನು ಲೂಟಿ ಮಾಡುತ್ತಿದೆ, ಅಧಿಕಾರ ಸಿಗದ ಶಾಸಕರು, ನಾಯಕರಿಗೆ ಹಣ ಕೊಡಲು ಈ ರೀತಿ ತರಾತುರಿಯಲ್ಲಿ ನಿಗಮ-ಮಂಡಳಿಗಳಲ್ಲಿ ಟೆಂಡರ್ ನೀಡಲಾಗುತ್ತಿದೆ. ಇದು ಕಮಿಷನ್ ಹೊಡೆಯಲು ಮಾಡಿಕೊಂಡಿರುವ ಭಾಗ, ಬಿಜೆಪಿ ಸರ್ಕಾರದ 40 ಪರ್ಸೆಂಟ್ ಕಮಿಷನ್ ಮುಂದುವರಿದ ಭಾಗ ಎಂದು ಆರೋಪಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ಸರ್ಕಾರ ಇನ್ನು ಒಂದು ತಿಂಗಳು ಮಾತ್ರ ಇರುತ್ತದೆ. ಬಜೆಟ್ ಅಧಿವೇಶನ ಮುಗಿದ ಮೇಲೆ ನೀತಿ ಸಂಹಿತೆ ಜಾರಿಗೊಳ್ಳುತ್ತದೆ. ಇಂತಹ ಸಂದರ್ಭಗಳಲ್ಲಿ ತರಾರತುರಿಯಲ್ಲಿ ಟೆಂಡರ್ ಕರೆಯಲಾಗುತ್ತಿದೆ. ಜಲಸಂಪನ್ಮೂಲ, ಇಂಧನ, ಆರೋಗ್ಯ ಇಲಾಖೆ ಸೇರಿ ಎಲ್ಲ ಇಲಾಖೆಗಳಲ್ಲಿ ಟೆಂಡರ್ ಕರೆಯಲು ತಯಾರಿ ಮಾಡಲಾಗುತ್ತಿದೆ. 500 ಕೋಟಿ ಟೆಂಡರ್ ಇದ್ರೆ ಅದನ್ನು 1000 ಕೋಟಿ ರೂ. ಎಸ್ಟಿಮೇಟ್ ಮಾಡ್ತಾ ಇದ್ದಾರೆ. ಏಳು ದಿನ ಮಾತ್ರ ಟೈಂ ಕೊಟ್ಟು ಶಾಸಕರಿಗೇ ಟೆಂಡರ್ ಪ್ರಕ್ರಿಯೆ ನಡೆಸಲು ಅವಕಾಶ ಕೊಡಲಾಗಿದೆ. ಕ್ಯಾಬಿನೆಟ್ ನಲ್ಲೂ ಚರ್ಚೆ ಮಾಡದೆ ಟೆಂಡರ್ ಹಂಚಿಕೆ ಮಾಡಲಾಗುತ್ತಿದೆ. ಶಾಸಕರು ಬೀದಿಯಲ್ಲಿ ನಿಂತು ಟೆಂಡರ್ ನೀಡಲು ಗುತ್ತಿಗೆದಾರರನ್ನು ಕರೆಯುತ್ತಿದ್ದಾರೆ ಎಂದು ಆರೋಪಿಸಿದರು.
ಇದೆಲ್ಲವೂ ಚುನಾವಣೆ ಖರ್ಚಿಗೆ ಹಣ ಸಂಗ್ರಹಿಸಲು ಆಗಿದೆ. ಚುನಾವಣೆಗೆ 6 ಸಾವಿರ ಕೋಟಿ ರೂ. ಕೊಡುತ್ತೇವೆ ಎಂದು ಹೇಳುತ್ತಾರೆ. ಇಷ್ಟರ ಮಟ್ಟಿಗೆ ರಾಜ್ಯವನ್ನು ಹಾಳು ಮಾಡಲು ಹೊರಟಿದ್ದಾರೆ. ನಾವು ಆರೋಪ ಮಾಡಿದರೆ ಸಾಕ್ಷಿ ಕೊಡಿ, ನಿಮ್ಮ ಸರ್ಕಾರದಲ್ಲಿಯೂ ಭ್ರಷ್ಟಾಚಾರ ಆಗಿದೆ ಎನ್ನುತ್ತಾರೆ, ನಮ್ಮ ಸರ್ಕಾರದಲ್ಲಿ ಆಗಿದ್ದರೆ ಈಗ ಅಧಿಕಾರದಲ್ಲಿರುವ ಬಿಜೆಪಿಯವರು ತನಿಖೆ ನಡೆಸಲಿ ಎಂದರು.
ಹಾಲು ಒಕ್ಕೂಟ ಸೇರಿದಂತೆ ವಿವಿಧ ನಿಗಮಗಳಲ್ಲಿನ ಹುದ್ದೆ ನೇಮಕಾತಿಯಲ್ಲಿ ಅಕ್ರಮ ನಡೆಯುತ್ತಿದ್ದು, ಎಲ್ಲಾ ಕಡೆ ನೇಮಕಾತಿ ದಂಧೆಯಾಗಿವೆ. ಪ್ರತಿ ಹುದ್ದೆಗೆ 25- 30 ಲಕ್ಷದ ವರೆಗೂ ವಸೂಲಿ ಮಾಡಲಾಗುತ್ತಿದೆ. ಈ ಬಗ್ಗೆ ನಮಗೆ ದೂರು ಬರುತ್ತಿವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲ ನೇಮಕಾತಿಗಳ ತನಿಖೆ ಮಾಡಲಾಗುವುದು. ಲೋಕಾಯುಕ್ತ ಸಂಸ್ಥೆ ಕೂಡಲೇ ಈ ನೇಮಕಾತಿ ವಿಚಾರವಾಗಿ ಸುಮೋಟೋ ಪ್ರಕರಣ ದಾಖಲಿಸಿ ನೇಮಕಾತಿ ನಿಲ್ಲಿಸಬೇಕು ಎಂದು ಡಿಕೆಶಿ ಆಗ್ರಹಿಸಿದರು.
ಟೆಂಡರ್ ಅಕ್ರಮದ ಬಗ್ಗೆ ಪತ್ರ ಬರೆದಿದ್ದ ಗೂಳಿಹಟ್ಟಿ ಶೇಖರ್
ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಜಲಸಂಪನ್ಮೂಲ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯ ಸಿ.ಜೆ.ಎಸ್.ಎಲ್ ನಿಂದ ಕರೆಯಲಾದ ಹನಿ ನೀರಾವರಿ ಪದ್ಧತಿ ಅಳವಡಿಕೆ ಹಾಗೂ ಹೊಸದುರ್ಗ, ಜಗಳೂರು, ಕಡೂರು ಹಾಗೂ ಇತರೆ ತಾಲ್ಲೂಕುಗಳಲ್ಲಿ ಪೈಪ್ ಲೈನ್ ಮುಖಾಂತರ ಕೆರೆಗೆ ನೀರು ತುಂಬಿಸಲು ಕರೆದಿರುವ ಟೆಂಡರ್‌ಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದರು. ತರಾತುರಿಯಲ್ಲಿ ಒತ್ತಡಕ್ಕೆ ಬಿದ್ದು ಅಕ್ರಮ ಟೆಂಡರ್ ನೀಡಲಾಗಿದೆ. ಕಾಮಗಾರಿಗಳನ್ನು ರದ್ದುಪಡಿಸಿ ನಿಯಮಾನುಸಾರ ಮರು ಟೆಂಡರ್ ಕರೆದು ಕಾಮಗಾರಿಗಳನ್ನು ಮಾಡಲು ಆದೇಶ ನೀಡಬೇಕಾಗಿ ವಿನಂತಿಸಿದ್ದರು.
The Congress in Karnataka accused the ruling BJP government in the state of indulging in corrupt practices and making irregularities in the tender booking process. Congress leader Siddaramaiah alleged that the state government is looting the state coffers in the run-up to the upcoming election. He said that the government is calling meetings to approve projects hastily in order to pay off dissatisfied MLAs who have not become ministers. BJP MLA Gulihatti D Shekar had earlier written a letter to the Additional Chief Secretary of the Water Resources Department, alleging that tenders for irrigation projects were awarded illegally and without transparency.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm