ವೈಎಸ್ ದತ್ತಾಗೆ ಸಂಕಷ್ಟ ; ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನ ವಾರಂಟ್ 

15-02-23 09:46 pm       Bangalore Correspondent   ಕರ್ನಾಟಕ

ಇತ್ತೀಚೆಗಷ್ಟೇ ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಶಾಸಕ ​ವೈ.ಎಸ್.​ವಿ. ದತ್ತಾ ವಿರುದ್ಧ ಬೆಂಗಳೂರಿನ ಕೋರ್ಟ್ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನ ವಾರಂಟ್ ಜಾರಿಗೊಳಿಸಿದೆ. 

ಬೆಂಗಳೂರು, ಫೆ.15 : ಇತ್ತೀಚೆಗಷ್ಟೇ ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಶಾಸಕ ​ವೈ.ಎಸ್.​ವಿ. ದತ್ತಾ ವಿರುದ್ಧ ಬೆಂಗಳೂರಿನ ಕೋರ್ಟ್ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನ ವಾರಂಟ್ ಜಾರಿಗೊಳಿಸಿದೆ. 

ಸಿ.ಎಸ್.ಸೋಮೇಗೌಡ ಎನ್ನುವರು ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಜನಪ್ರತಿನಿಧಿಗಳ ಕೋರ್ಟ್, ವೈಎಸ್​ವಿ ದತ್ತಾ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಕೋರ್ಟ್​ಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶೆ ಜೆ.ಪ್ರೀತ್ ಅವರು ಮಾರ್ಚ್​ 27ಕ್ಕೆ ದತ್ತಾ ಅವರನ್ನು ಕೋರ್ಟ್​ಗೆ ಹಾಜರುಪಡಿಸುವಂತೆ ಬೆಂಗಳೂರು ಉತ್ತರ ಡಿಸಿಪಿಗೆ ಸೂಚನೆ ನೀಡಿದ್ದಾರೆ.

ಉದ್ಯಮಿ ಸಿ.ಎಸ್. ಸೋಮೇಗೌಡರಿಗೆ ದತ್ತಾ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಸಾಲ ಪಡೆದಿದ್ದ ದತ್ತಾ ಅದಕ್ಕೆ ಬದಲಾಗಿ ಚೆಕ್ ನೀಡಿದ್ದರು. ಆದರೆ ಅದು ಅನೂರ್ಜಿತವಾಗಿದ್ದು ದತ್ತಾ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನ್ಯಾಯಾಲಯ ವಾರೆಂಟ್ ಜಾರಿ ಮಾಡಿರುವುದರಿಂದ ದತ್ತಾ ಕೋರ್ಟ್ ಗೆ ಹಾಜರಾಗುವುದು ಅನಿವಾರ್ಯವಾಗುತ್ತದೆ. ಜೆಡಿಎಸ್ ವಕ್ತಾರರಾಗಿ ಕಾರ್ಯ ನಿರ್ವಹಿಸಿದ್ದ ದತ್ತಾ, ಜೆಡಿಎಸ್ ವರಿಷ್ಠ ದೇವೇಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಆದ್ರೆ, ಇತ್ತೀಚೆಗೆ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದು, ಕಡೂರು ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ದತ್ತಾ ಸರಳ, ಸಜ್ಜನ ರಾಜಕಾರಣಿ ಎಂದೇ ಹೆಸರು ಪಡೆದುಕೊಂಡಿದ್ದಾರೆ.

Special court issues arrest warrant against YSV Datta in cheque bounce case.